ಗದಗ- ಕಳೆದ ಒಂದು ವಾರದ ಹಿಂದೆ ಗದಗ ಜಿಲ್ಲೆಯ ನರಗುಂದ ಬಾಲಕಿಯ ಅತ್ಯಾಚಾರ ಕೊಲೆ ಪ್ರಕರಣ ಹಿನ್ನಲೆಯಲ್ಲಿ ಇಂದು ಶ್ರೀರಾಮ ಸೇನಾ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಹಾಗೂ ರೈತ ಮುಖಂಡ ವಿರೇಶ ಸೊಬರದಮಠ, ಸಂತ್ರಸ್ತ ಕುಟುಂಬವನ್ನು ಭೇಟಿ ಮಾಡಿ, ಸಾಂತ್ವನ ಹೇಳಿದ್ದಾರೆ. ಮಾರ್ಚ್ 22 ಗದಗ ಜಿಲ್ಲೆಯ ನರಗುಂದ ಪಟ್ಟಣದ ಸದ್ದಾಮ್ ಎಂಬ ಯುವಕ ಅತ್ಯಾಚಾರ ಮಾಡಿ ಸುಟ್ಟು ಹಾಕಿದ್ದ ಈ ಹಿನ್ನೆಲೆಯಲ್ಲಿ ಇಂದು, ಗದಗ ಜಿಲ್ಲೆ ನರಗುಂದ ಪಟ್ಟಣದ ಸಂತ್ರಸ್ತೆ ಮನೆಗೆ ಭೇಟಿ ಮಾಡಿದ ಮುತಾಲಿಕ್ ಅವರು ಸಂತ್ರಸ್ತ ಕುಟುಂಬಕ್ಕೆ 25 ಲಕ್ಷ ರೂಪಾಯಿ ಪರಿಹಾರ ನೀಡಬೇಕು ಎಂದು ಒತ್ತಾಯ ಮಾಡಿದ್ದಾರೆ. ಅಲ್ಲದೆ ಸರ್ಕಾರ ಈ ಕೂಡಲೇ ಪರಿಹಾರ ನೀಡದೇ ಇದ್ದಲ್ಲಿ ಉಗ್ರವಾದ ಹೋರಾಟದ ಎಚ್ಚರಿಕೆ ನೀಡಿದ್ದಾರೆ. ಅಲ್ಲದ ಅತ್ಯಾಚಾರಿ ಆರೋಪಿಗೆ ಗಲ್ಲು ಶಿಕ್ಷೆ ನೀಡಬೇಕು ಎಂದಿದ್ದಾರೆ.

About Author

Priya Rai

ನಮಸ್ಕಾರ, ಸುದ್ದಿನೌ ಪ್ರಾರಂಭವಾಗಿ ೪ ವರ್ಷಗಳು ಕಳೆದಿವೆ, ನಮ್ಮ ಜೊತೆಗಿರುವ ನಿಮ್ಮೆಲ್ಲರಿಗೂ ಧನ್ಯವಾದಗಳು ನಿಮ್ಮ ವಿಶ್ವಾಸಿ, ಪ್ರಿಯ ರಾಯ್

Leave A Reply