ಬಳ್ಳಾರಿ- ಗ್ರಾಮ ಪಂಚಾಯಿತಿ ಚುನಾವಣೆಯ ಫಲಿತಾಂಶವನ್ನು ನಾವು ಗಮನಿಸಿದರೆ ಸೂಕ್ಷ್ಮವಾಗಿ ಅರ್ಥವಾಗುತ್ತೆ. ಅಲ್ಲಿ ಅಕ್ಷರಸ್ಥರು, ಅನಕ್ಷರಸ್ಥರು ಹಾಗೂ ಎರಡು-ಮೂರು ಅವಧಿಗೂ ಆಯ್ಕೆಯಾದ ಸದಸ್ಯರು ಕೂಡ ಇದ್ದಾರೆ. ಇಂತಹ ವ್ಯಕ್ತಿಗಳಿಗೆ ನಾವು ಗ್ರಾಮೀಣ ಅಭಿವೃದ್ಧಿಯ ಬಗ್ಗೆ ಸ್ವಲ್ಪ ಕಷ್ಟವಾದ ಕೆಲಸ. ಹಿನ್ನೆಲೆಯಲ್ಲಿ ಅಂತಹ ಸದಸ್ಯರುಗಳಿಗೆ ಅವರ ಮಟ್ಟದಲ್ಲಿಯೇ ಇಳಿದು ಅವರ ಅಭಿವೃದ್ಧಿ ಸಾಮಥ್ರ್ಯದ ಬಗ್ಗೆ ಮಾರ್ಗದರ್ಶನ ಮಾಡಬೇಕಾಗುತ್ತದೆ. ಇದಕ್ಕೆ ಮುಖ್ಯವಾಗಿ ನಾವು ಉತ್ತಮ ತರಬೇತಿ ಪಡೆದಿರಬೇಕು ಎಂದು ಕನ್ನಡ ವಿಶ್ವವಿದ್ಯಾಲಯದ ಅಭಿವೃದ್ಧಿ ಅಧ್ಯಯನ ವಿಭಾಗದ ಮುಖ್ಯಸ್ಥರಾದ ಡಾ.ಜನಾರ್ಧನ ಅವರು ಅಭಿಪ್ರಾಯಪಟ್ಟರು.

ಕನ್ನಡ ವಿಶ್ವವಿದ್ಯಾಲಯದ ನುಡಿ ಕಟ್ಟಡದಲ್ಲಿ ಸೋಮವಾರ ಹಮ್ಮಿಕೊಂಡಿರುವ ಅಬ್ದುಲ್ ನಜೀರ್ ಸಾಬ್ ರಾಜ್ಯ ಗ್ರಾಮೀಣ ಅಭಿವೃದ್ಧಿ ಸಂಸ್ಥೆ ಹಾಗೂ ಕನ್ನಡ ವಿಶ್ವವಿದ್ಯಾಲಯದ ಅಭಿವೃದ್ಧಿ ಅಧ್ಯಯನ ವಿಭಾಗದ ಸಂಯೋಜನೆಯ ಮೂಲಕ ಗ್ರಾಮ ಪಂಚಾಯಿತಿ ಚುನಾಯಿತ ಪ್ರತಿನಿಧಿಗಳು ಸಾಮಥ್ರ್ಯಾಭಿವೃದ್ಧಿ ತರಬೇತಿದಾರರ ತರಬೇತಿ ಕಾರ್ಯಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಗ್ರಾಮೀಣ ಅಭಿವೃದ್ಧಿಗೂ ಕನ್ನಡ ವಿಶ್ವವಿದ್ಯಾಲಯಕ್ಕೆ ಅವಿನಾಭಾವ ಸಂಬಂಧವಿದೆ. ರಾಜ್ಯ ಸರ್ಕಾರದ ಪಂಚಾಯತ್ ರಾಜ್ ವ್ಯವಸ್ಥೆಗೆ ಸಂಬಂಧಿಸಿದ ಅನೇಕ ಯೋಜನೆಗಳ ಮಾದರಿಗಳನ್ನು ಕನ್ನಡ ವಿಶ್ವವಿದ್ಯಾಲಯದ ಅಭಿವೃದ್ಧಿ ಅಧ್ಯಯನ ವಿಭಾಗವು ಸಿದ್ಧಪಡಿಸಿ ಸರ್ಕಾರಕ್ಕೆ ಸಲ್ಲಿಸಲಾಗಿದೆ. ಅವುಗಳಲ್ಲಿ ಕೆಲವೊಂದು ಯೋಜನೆಗಳನ್ನು ನೇರವಾಗಿ ಸರ್ಕಾರವು ಅನುಷ್ಠಾನಗೊಳಿಸಿದೆ. ಇದು ಕನ್ನಡ ವಿಶ್ವವಿದ್ಯಾಲಯದ ಹೆಮ್ಮೆಯ ಸಂಗತಿ. ಈ ನಿಟ್ಟಿನಲ್ಲಿ ಶಿಬಿರಾರ್ಥಿಗಳು ತರಬೇತಿ ಸಮಯದಲ್ಲಿ ಯಾವುದೇ ಗೊಂದಲಕ್ಕೆ ಒಳಗಾಗದೆ ಗ್ರಾಮ ಪಂಚಾಯಿತಿ ಚುನಾಯಿತ ಸದಸ್ಯರುಗಳಿಗೆ ಸ್ಪಷ್ಟವಾದ ಹಾಗೂ ನಿಖರವಾದ ಮಾರ್ಗದರ್ಶನ ಮಾಡುವ ಜವಾಬ್ದಾರಿ ನಿಮ್ಮ ಮೇಲೆ ಇದೆ ಎಂದು ಕಿವಿಮಾತು ಹೇಳಿದರು. .

About Author

Priya Bot

Leave A Reply