ಚಾಮರಾಜನಗರ- ತಿರುಪತಿ ತಿಮ್ಮಪ್ಪ ದರ್ಶನಕ್ಕೆಂದು ಕುಟುಂಬ ಸಮೇತರಾಗಿ ಹೋಗಿ ಮನೆಗೆ ಬಂದಾಗ ಕುಟುಂಬಸ್ಥರಿಗೆ ಶಾಕ್ ಕಾದಿತ್ತು. ಕಾರಣ ಕುಟುಂಬ ಸಮೇತರಾಗಿ ಮನೆಗೆ ಬೀಗ ಹಾಕಿ ಹೋಗಿದ್ದಾರೆ ಎನ್ನುವ ವಿಷಯ ತಿಳಿದ ಕದೀಮರು ಮನೆಗೆ ಕಣ್ಣಾ ಹಾಕಿರುವ ಘಟನೆ ಚಾಮರಾಜನಗರ ಜಿಲ್ಲೆಯ ಕೊಳ್ಳೆಗಾಲದಲ್ಲಿ ನಡೆದಿದೆ.‌ಮನೆ ಮಾಲೀಕ ಕಳೆದ ಕೆಲ ವರ್ಷಗಳ ಹಿಂದೆ ಚೆಸ್ಕಾಂ ನಿಂದ ನಿವೃತ್ತಿಯಾಗಿದ್ದ, ಈ ಹಿನ್ನೆಲೆಯಲ್ಲಿ ಕುಟುಂಬ ಸಮೇತರಾಗಿ ಮನೆ ಲಾಕ್ ಮಾಡಿಕೊಂಡು ದೇವರ ದರ್ಶನಕ್ಕೆ ತೆರಳಿದ್ದಾರೆ. ಇದರ ಲಾಭ ಪಡೆದ ಕಳ್ಳರು ಮನೆ ಬಾಗಿಲು ಮುರಿದು

265 ಗ್ರಾಂ ತೂಕದ ಚಿನ್ನ ಆಭರಣ ಕಳವು ಮಾಡಿದ್ದಾರೆ. ಮೂರು ದಿನಗಳ ಹಿಂದೆ ತಿರುಪತಿಗೆ, ನಿನ್ನೆ ಮುಂಜಾನೆ ವಾಪಸ್ ಮನಗೆ  ಆಗಮಿಸಿದ್ದರು. ಕಳ್ಳತನದ ವಿಷಯ ತಿಳಿದ ಅವರು ಪೊಲೀಸರಿಗೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ಆಗಮಿಸಿ ಕೊಳ್ಳೇಗಾಲ ಪಟ್ಟಣ ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಹುಡುಕಾಟ ನಡೆಸಿದ್ದಾರೆ….

About Author

Priya Rai

ನಮಸ್ಕಾರ, ಸುದ್ದಿನೌ ಪ್ರಾರಂಭವಾಗಿ ೪ ವರ್ಷಗಳು ಕಳೆದಿವೆ, ನಮ್ಮ ಜೊತೆಗಿರುವ ನಿಮ್ಮೆಲ್ಲರಿಗೂ ಧನ್ಯವಾದಗಳು ನಿಮ್ಮ ವಿಶ್ವಾಸಿ, ಪ್ರಿಯ ರಾಯ್

Leave A Reply