ಮೂಂಬೈ- ದೇಶದಲ್ಲಿ ಕರೋನಾ ಸೋಂಕಿನ ಎರಡನೆ ಅಲೆ ಆರಂಭವಾಗಿದ್ದು ದೇಶದ ನಾಲ್ಕು ರಾಜ್ಯಗಳಲ್ಲಿ ಕರೋನಾ ತನ್ನ ನಾಗಾಲೋಟ ಮುಂದುವರೆಸಿದೆ. ಈ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರ ಈಗಾಗಲೇ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದೆ. ನೆರೆಯ ರಾಜ್ಯ ಮಹಾರಾಷ್ಟ್ರದಲ್ಲಿ ಸೋಂಕಿತರ ಸಂಖ್ಯೆ ದಿನೇ ದಿನೇ ಏರಿಕೆಯಾಗುತ್ತಿದ್ದ ಕಾರಣ ಮಹಾರಾಷ್ಟ್ರ ಸರ್ಕಾರ ನೈಟ್ ಕರ್ಪ್ಯೂ ಜಾರಿ ಮಾಡಿದೆ. ನಾಳೆಯಿಂದ ರಾತ್ರಿ 8ರಿಂದ ಬೆಳಗ್ಗೆ 7ರವರೆಗೆ ಕರ್ಫ್ಯೂ- ಹಾಕಿ ಮಹಾರಾಷ್ಟ್ರ ಸರ್ಕಾರ ಆದೇಶ ಮಾಡಿದೆ. ಈ ಹಿನ್ನೆಲೆಯಲ್ಲಿ ದೇಶದಲ್ಲಿ ಮತ್ತೆ ಕರೋನ ಸೋಂಕು ತನ್ನ ಪ್ರಭಾವವನ್ನು ಬೀರತೊಡಗಿದೆ.