ಕಲಬುರಗಿ- ಇದೇ ಜನವರಿ ಅಂತ್ಯದೊಳಗೆ ಅತಿವೃಷ್ಟಿಯಿಂದ ಹಾನಿಗೊಳಗಾದ ಎಲ್ಲಾ ರೈತರಿಗೆ ಶೇ. 100ಕ್ಕೆ ನೂರರಷ್ಟು ಬೆಳೆ ಪರಿಹಾರ ನೀಡಲಾಗುವುದು ಎಂದು ಉಪಮುಖ್ಯಮಂತ್ರಿಗಳು, ಲೋಕೋಪಯೋಗಿ ಸಚಿವರಾದ ಗೋವಿಂದ ಕಾರಜೋಳ ತಿಳಿಸಿದ್ದಾರೆ.

ಗುಲಬರ್ಗಾ ವಿಶ್ವವಿದ್ಯಾಲಯದ ಮಹಾತ್ಮ ಗಾಂಧಿ ಸಭಾಂಗಣದಲ್ಲಿ ಕೆಡಿಪಿ ಸಭೆಯ ಬಳಿಕ ಪತ್ರಕರ್ತರನ್ನು ಉದ್ದೇಶಿಸಿ ಮಾತನಾಡಿದ ಅವರು, ಅಕ್ಟೋಬರ್ 13 ರಿಂದ 21 ವರೆಗೆ ಉಂಟಾದ ಅತಿವೃಷ್ಟಿಯಿಂದಾಗಿ 13,125 ಮನೆಗಳು ಹಾನಿಯಾಗಿವೆ. 13,12,50,000 ರೂ.ಗಳ ಪರಿಹಾರವನ್ನು ಫಲಾನುಭವಿಗಳ ಖಾತೆಗೆ ಜಮಾ ಮಾಡಲಾಗಿದೆ ಹಾಗೂ ಪ್ರವಾಹದಿಂದ ಹಾಳಾದ  ಮನೆಗಳನ್ನು ದುರಸ್ತಿ ಮಾಡಲಾಗುವುದು  ಹಾಗೂ ಸಂಪೂರ್ಣವಾಗಿ ಹಾಳಾಗಿ ಕುಸಿದು ಬಿದ್ದಿರುವ ಮನೆಗಳನ್ನು ಕಟ್ಟಲು ಮೊದಲ ಕಂತಿನ ಹಣವನ್ನು ಈಗಾಗಲೇ ಸರ್ಕಾರವು ಅವರ ಖಾತೆಗೆ ಜಮಾ ಮಾಡಿದೆ ಎಂದು ತಿಳಿಸಿದರು.

ಪ್ರವಾಹದಿಂದ 2.92 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ಹಾನಿಯಾಗಿದ್ದು, ಸರ್ಕಾರದ ವತಿಯಿಂದ ಎನ್.ಡಿ.ಆರ್.ಎಫ್ ಹಾಗೂ ಎಸ್.ಡಿ.ಆರ್.ಎಫ್. ಮಾರ್ಗಸೂಚಿ ಪ್ರಕಾರ 1,04,044 ರೈತರಿಗೆ ಪ್ರತಿ ಹೆಕ್ಟರ್‍ಗೆ 10 ಸಾವಿರ ರೂ.ಗಳ ಪ್ರೋತ್ಸಾಹ ಧನ ನೀಡಲಾಗಿದ್ದು, ಇನ್ನುಳಿದ 1.92 ಲಕ್ಷ ರೈತರಿಗೆ ಆದಷ್ಟು ಬೇಗ ನೀಡಲಾಗುವುದು ಎಂದರು.

Leave A Reply