ಕರೋನಾ ಮೂರನೇ ಅಲೆಯನ್ನು ಎದುರಿಸಲು ಕೇಂದ್ರದಿಂದ ರಾಜ್ಯಕ್ಕೆ 1500 ಕೋಟಿ: ಆರೋಗ್ಯ ಸಚಿವ ಸುಧಾಕರ್‌

0

ಬೆಂಗಳೂರು – ದೇಶದಲ್ಲಿ ಸಂಭವನೀಯ ಮೂರನೇ ಅಲೆಯ ನಿರ್ವಹಣೆಗೆ ಕೇಂದ್ರ ಸರಕಾರದಿಂದ ರಾಜ್ಯಕ್ಕೆ 1500 ಕೋಟಿ ರೂಪಾಯಿಗಳ ನೆರವು ದೊರೆತಿದೆ. ಮಾನ್ಯ ಮುಖ್ಯಮಂತ್ರಿಗಳ ನೇತೃತ್ವದಲ್ಲಿ ರಾಜ್ಯದಲ್ಲಿ ಮೂರನೇ ಅಲೆಯ ನಿರ್ವಹಣೆಗೆ ಅಗತ್ಯ ಸಿದ್ದತೆಗಳನ್ನು ನಡೆಸಲಾಗುತ್ತಿದೆ ಎಂದು ಮಾನ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾದ ಶ್ರೀ ಸುಧಾಕರ್ ಹೇಳಿದರು.

ಜಯನಗರದಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಯುನೈಟೆಡ್‌ ಆಸ್ಪತ್ರೆಯಲ್ಲಿ ಕರೋನಾ ಲಸಿಕಾ ವಿತರಣೆಯ ಕಾರ್ಯಕ್ಕೆ ಸಾಂಕೇತಿಕವಾಗಿ ಚಾಲನೆ ನೀಡಿ ಮಾತನಾಡಿದರು, ಯುವ ವೈದ್ಯರ ತಂಡ ಕಲಬುರಗಿಯಲ್ಲಿ ಅತ್ಯುತ್ತಮ ಸೇವೆಯನ್ನು ಸಲ್ಲಿಸಿ ಬೆಂಗಳೂರಿನಲ್ಲೂ ಆಸ್ಪತ್ರೆಯನ್ನು ಪ್ರಾರಂಭಿಸಿರುವುದು ಬಹಳ ಸಂತಸದ ವಿಷಯ.

ಕರೋನಾ ಸಾಂಕ್ರಾಮಿಕ ಹೆಚ್ಚಾಗಿದ್ದಾಗ ರಾಜ್ಯದಲ್ಲಿ ಆರೋಗ್ಯ ಸೌಲಭ್ಯಗಳ ಕೊರತೆ ಉಂಟಾಗಿತ್ತು. ಆ ಸಮಯದಲ್ಲಿ ಖಾಸಗಿ ಆಸ್ಪತ್ರೆಗಳು ನೀಡಿದ ಸಹಕಾರ ಬಹಳ ಶ್ಲಾಘನೀಯ. ಕಲಬುರಗಿ ಜಿಲ್ಲಾ ಕೇಂದ್ರದಲ್ಲಿ ಯುನೈಟೆಡ್‌ ಆಸ್ಪತ್ರೆ ಸಾವಿರಾರು ಕರೋನಾ ಪೀಡಿತರಿಗೆ ಉತ್ತಮ ಚಿಕಿತ್ಸೆ ನೀಡಿದೆ. ರಾಜ್ಯ ಸರಕಾರ ದೇಶದಲ್ಲೇ ರಾಜ್ಯವನ್ನು ಆರೋಗ್ಯ ಕ್ಷೇತ್ರದಲ್ಲಿ ಮಾಧರಿ ರಾಜ್ಯವನ್ನಾಗಿಸಲು ಎಲ್ಲಾ ಪ್ರಯತ್ನಗಳನ್ನು ನಡೆಸುತ್ತಿದೆ. ಈ ವಿಷಯದಲ್ಲಿ ಸಫಲತೆಯನ್ನು ಪಡೆಯಲು ಖಾಸಗಿ ಆಸ್ಪತ್ರೆಗಳ ಸಹಕಾರ ಬಹಳ ಅಗತ್ಯ ಎಂದರು.

ಕೇಂದ್ರ ಸರಕಾರ ಇತ್ತೀಚಿನ ಸಚಿವ ಸಂಫುಟ ಸಭೆಯಲ್ಲಿ ಮುಂದಿನ ಸಂಭವನೀಯ ಮೂರನೇ ಅಲೆಯನ್ನು ನಿರ್ವಹಿಸುವ ನಿಟ್ಟಿನಲ್ಲಿ 23 ಸಾವಿರ ಕೋಟಿ ರೂಪಾಯಿಗಳನ್ನು ಮೀಸಲಿಟ್ಟಿದೆ. ಈ ಹಣದಲ್ಲಿ ರಾಜ್ಯಕ್ಕೆ 1500 ಕೋಟಿ ರೂಪಾಯಿಗಳ ನೆರವು ದೊರೆಯಲಿದ್ದು, ರಾಜ್ಯದಲ್ಲಿ ಮಕ್ಕಳ ವಿಭಾಗದ ಸಾಮರ್ಥ್ಯವನ್ನು ಹೆಚ್ಚಿಸಲು ಬಳಸಿಕೊಳ್ಳಲಾಗುವುದು. ಸನ್ಮಾನ್ಯ ಮುಖ್ಯಮಂತ್ರಿಗಳ ನೇತೃತ್ವದಲ್ಲಿ ಮೂರನೇ ಅಲೆಗೆ ಅಗತ್ಯವಿರುವ ಸಿದ್ದತೆಗಳನ್ನು ನಡೆಸಲಾಗುತ್ತಿದೆ ಎಂದು ಹೇಳಿದರು.

ವಿಶೇಷವಾದ ಸುದ್ದಿಗಳಿಗಾಗಿ ನಮ್ಮ ಹೊಸದಾದ SUDDINOW APP ಡೌನ್ಲೋಡ್ ಮಾಡಿಕೊಳ್ಳಿ : https://play.google.com/store/apps/details?id=com.webapp.Suddinow

ಬರವಣಿಗೆ ಬಗ್ಗೆ ನಿಮಗೆ ಆಸಕ್ತಿ ಇದಿಯೇ, ನಾವು ನಿಮ್ಮನ್ನು ಪ್ರೋತಾಹಿಸಲು ನಿಮಗಾಗಿ CITIZEN JOURNALISM ಕಾಲಂಅನ್ನು ತೆರೆದಿದ್ದೇವೆ. ನಿಮ್ಮ ಬರಹಗಳಿಗೆ ಸ್ವಾಗತ : https://suddinow.com/upload-news-yourself/

About Author

Priya Rai

ನಮಸ್ಕಾರ, ಸುದ್ದಿನೌ ಪ್ರಾರಂಭವಾಗಿ ೪ ವರ್ಷಗಳು ಕಳೆದಿವೆ, ನಮ್ಮ ಜೊತೆಗಿರುವ ನಿಮ್ಮೆಲ್ಲರಿಗೂ ಧನ್ಯವಾದಗಳು ನಿಮ್ಮ ವಿಶ್ವಾಸಿ, ಪ್ರಿಯ ರಾಯ್

Leave A Reply