ಹಾಸನ- ಹಾಸನ ಜಿಲ್ಲೆಯಲ್ಲಿಂದು ಹೊಸದಾಗಿ 20 ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟಾರೆ ಸೋಂಕಿತರ ಸಂಖ್ಯೆ 28,024ಕ್ಕೆ ಏರಿಕೆಯಾಗಿದೆ. ಆದರೆ ಜಿಲ್ಲಾಸ್ಪತ್ರೆಯಲ್ಲಿ 194 ಮಂದಿ ಸಕ್ರಿಯ ಸೋಂಕಿತರು ಮಾತ್ರ ಹಾಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈವರೆಗೆ 27,367 ಮಂದಿ ಗುಣಮುಖರಾಗಿದ್ದಾರೆ. ತೀವ್ರ ನಿಗಾ ಘಟಕದಲ್ಲಿ 13 ಜನ ಚಿಕಿತ್ಸೆ ಪಡೆಯುತ್ತಿದ್ದಾರೆ. ಕೋವಿಡ್-19 ನಿಂದ ಜಿಲ್ಲೆಯಲ್ಲಿ ಇಲ್ಲಿಯವರೆಗೆ ಒಟ್ಟು 463 ಮಂದಿ ಸಾವನ್ನಪ್ಪಿದಾರೆ.

ಇಂದು ಪತ್ತೆಯಾದ 20 ಕೊರೋನಾ ಸೋಂಕು ಪ್ರಕರಣಗಳಲ್ಲಿ 5 ಮಂದಿ ಹಾಸನ ತಾಲ್ಲೂಕು, ಅರಕಲಗೂಡು ತಾಲ್ಲೂಕಿನಲ್ಲಿ 1 ಮಂದಿ  ಹೊಳೆನರಸೀಪುರ ತಾಲ್ಲೂಕಿನಲ್ಲಿ 4 ಮಂದಿ, ಅರಸೀಕೆರೆ ತಾಲ್ಲೂಕಿನಲ್ಲಿ 2 ಮಂದಿ, ಚನ್ನರಾಯಪಟ್ಟಣ 4 ಮಂದಿ, ಸಕಲೇಶಪುರ 2 ಮಂದಿ ಬೇಲೂರು ತಾಲ್ಲೂಕಿನಲ್ಲಿ  2 ಮಂದಿಗೆ ಕೊರೋನ  ಸೋಂಕು ದೃಢಪಟ್ಟಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಸತೀಶ್ ಅವರು ತಿಳಿಸಿದ್ದಾರೆ.

 

About Author

Priya Bot

Leave A Reply