ಬಳ್ಳಾರಿ- ನಗರ ಮತ್ತು ಹೊಸಪೇಟೆ ನಗರಗಳಲ್ಲಿ ನಡೆಯುತ್ತಿರುವ 24×7 ನಿರಂತರ ಕುಡಿಯುವ ನೀರು ಸರಬರಾಜು ಹಾಗೂ ಒಳಚರಂಡಿ ಕಾಮಗಾರಿಗಳ ಪ್ರಗತಿ ಪರಿಶೀಲನೆ ಸಭೆಯನ್ನು ವಿಕಾಸಸೌದದಲ್ಲಿ ನಡೆಸಲಾಯಿತು.

ಸಭೆಯಲ್ಲಿ ಜಿಲ್ಲಾ ಉಸ್ತವಾರಿ ಸವಿವ ಆನಂದ್ ಸಿಂಗ್ ಸೇರಿದಂತೆ ಇಲಾಖೆಯ ಹಿರಿಯ ಅಧಿಕಾರಿಗಳು ಭಾಗಿಯಾಗಿದ್ದರು. ಬಳ್ಳಾರಿ ನಗರದಲ್ಲಿ  24×7 ಕುಡಿಯುವ ನೀರು ಸರಬರಾಜು ಹಾಗೂ ಒಳಚರಂಡಿ ಕಾಮಗಾರಿಗಳಿಗೆ ಸಂಬಂಧಿಸಿದ ಗುತ್ತಿಗೆದಾರರು ಇದುವರೆಗೆ 12 ವಲಯಗಳಲ್ಲಿ ಕಾಮಗಾರಿ ಪೂರ್ಣಗೊಳಿಸಿದ್ದು, ಸದರಿ ವಲಯಗಳಲ್ಲಿ ಹೈಡ್ರಾಲಿಕ್ ಟೆಸ್ಟ ನಂತರ 31.01.2021ರೊಳಗೆ ಕುಡಿಯುವ ನೀರು ಸರಬರಾಜು ಮಾಡಲು ಹಾಗೂ ಉಳಿದ 8 ವಲಯಗಳ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸಲು ಅಧಿಕಾರಿಗಳು ಹಾಗೂ ಗುತ್ತಿಗೆದಾರರು ಪರಸ್ಪರ ಸಹಕಾರದೊಂದಿಗೆ ಸದರಿ ಕಾಮಗಾರಿ ಪೂರ್ಣಗೊಳಿಸಿ, ಬೇಸಿಗೆಯೊಳಗೆ ನಗರದ ಜನರಿಗೆ 24×7 ಕುಡಿಯುವ ನೀರು ಸರಬರಾಜು ಮಾಡಲು ಸೂಚಿಸಲಾಯಿತು.

ಅಲ್ಲದೇ ಬಳ್ಳಾರಿ ನಗರದಲ್ಲಿನ ಒಳಚರಂಡಿ ಮತ್ತು ಕುಡಿಯುವ ನೀರನ್ನು ಸಮರ್ಪಕ ಅನುಷ್ಠಾನಕ್ಕೆ ಅಗತ್ಯವಿರುವ ವಿಷಯವನ್ನು ಚರ್ಚಿಸುವಂತೆ ನಗರಾಭಿವೃದ್ಧಿ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳೊಂದಿಗೆ ಸಭೆಯನ್ನು ತುರ್ತಾಗಿ ಆಯೋಜಿಸಿ ಸಮಸ್ಯೆಗಳನ್ನು ತ್ವರಿತವಾಗಿ ಬಗೆಹರಿಸಿ, ಕುಡಿಯುವ ನೀರಿನ ಕಾಮಗಾರಿಗಳನ್ನು  ಪೂರ್ಣಗೊಳಿಸುವ ಬಗ್ಗೆ ಕ್ರಮಕೈಗೊಳ್ಳಲು ತಿಳಿಸಲಾಯಿತು.

About Author

Priya Bot

Leave A Reply