30 ಕ್ವಿಂಟಲ್ ಅಕ್ರಮ ಪಡಿತರ ವಶಪಡಿಸಿಕೊಂಡ – ತಹಶಿಲ್ದಾರ ಜಿ.ಅನಿಲ್ ಕುಮಾರ್

0

ಬಳ್ಳಾರಿ ಜಿಲ್ಲೆ ಕೊಟ್ಟೂರು: ಪಟ್ಟಣದ ರಾಜೀವ್ ನಗರದಿಂದ ಅಕ್ರಮವಾಗಿ ಪಡಿತರ ಅಕ್ಕಿಯನ್ನು ಬೇರೆಡೆಗೆ ಸಾಗಿಸುತ್ತಿದ್ದ ಅಶೋಕ್ ಲೇಲ್ಯಾಂಡ್ ಗಾಡಿಯನ್ನು ಖಚಿತ ಮಾಹಿತಿ ಮೇರೆಗೆ ತಹಶೀಲ್ದಾರ್ ಜಿ.ಅನಿಲ್ ಕುಮಾರ್ ಮತ್ತು ಕಂದಾಯ ನಿರೀಕ್ಷಕ ಹಾಲಸ್ವಾಮಿ ಕಾರ್ಯಾಚರಣೆ ನಡೆಸಿ ವಶಪಡಿಸಿಕೊಂಡಿದ್ದಾರೆ.

ಕೆಲವು ದಿನಗಳಿಂದ ಅಷ್ಟೇ ಪಟ್ಟಣದಲ್ಲಿ ಬಡವರ ಪಾಲಿನ ಪಡಿತರವನ್ನು ಕಾಳಸಂತೆಯಲ್ಲಿ ಮಾರಾಟ ಮಾಡುತ್ತಿರುವ ಸಾರ್ವಜನಿಕ ವಲಯದಲ್ಲಿ ಈ ವಿಚಾರ ಕೇಳಿಬರುತ್ತಿತ್ತು ಈ ಹಿನ್ನೆಲೆಯಲ್ಲಿ ತಹಶಿಲ್ದಾರ್ ಜಿ. ಅನಿಲ್ ಕುಮಾರ್ ಪಟ್ಟಣದಲ್ಲಿ ಅನುಮಾನಾತ್ಮಕವಾಗಿ ಸಂಚರಿಸುವ ವಾಹನಗಳ ಮಾಹಿತಿ ನೀಡುವಂತೆ ತಿಳಿಸಿದ್ದರು. ಅದರನ್ವಯ 94 ಚೀಲದಲ್ಲಿ ಸುಮಾರು 30 ಕ್ವಿಂಟಲ್ ಅಕ್ಕಿ ಸಾಗಿಸುತ್ತಿದ್ದ ವಾಹನವನ್ನು ವಶಕ್ಕೆ ತೆಗೆದುಕೊಂಡು ಮುಂದಿನ ಕ್ರಮಕ್ಕಾಗಿ ಪೋಲಿಸ್ ಇಲಾಖೆಗೆ ಒಪ್ಪಿಸಿದ್ದಾರೆ. ಈ ಸಂದರ್ಭದಲ್ಲಿ ಗ್ರಾಮಲೆಕ್ಕಿಗರಾದ ರಮೇಶ್, ಸಿದ್ದೇಶ ಜೊತೆಗಿದ್ದರು.

ವಿಶೇಷವಾದ ಸುದ್ದಿಗಳಿಗಾಗಿ ನಮ್ಮ ಹೊಸದಾದ SUDDINOW APP ಡೌನ್ಲೋಡ್ ಮಾಡಿಕೊಳ್ಳಿ : https://play.google.com/store/apps/details?id=com.webapp.Suddinow

ಬರವಣಿಗೆ ಬಗ್ಗೆ ನಿಮಗೆ ಆಸಕ್ತಿ ಇದಿಯೇ, ನಾವು ನಿಮ್ಮನ್ನು ಪ್ರೋತಾಹಿಸಲು ನಿಮಗಾಗಿ CITIZEN JOURNALISM ಕಾಲಂಅನ್ನು ತೆರೆದಿದ್ದೇವೆ. ನಿಮ್ಮ ಬರಹಗಳಿಗೆ ಸ್ವಾಗತ : https://suddinow.com/upload-news-yourself/

IMG-20210701-WA0041.jpg

Email

Huligesha tegginakeri

About Author

Huligesha Tegginakeri

Leave A Reply