ಅಗತ್ಯ ವಸ್ತುಗಳ ಖರೀದಿಗೆ ವಾರದ 5ದಿನಗಳ ಅವಕಾಶ; ಜಿಲ್ಲಾಧಿಕಾರಿ ಆರ್ ವೆಂಕಟೇಶ್ ಕುಮಾರ್

0

ರಾಯಚೂರು – ಸೋಮವಾರದಿಂದ ಶುಕ್ರವಾರದವರೆಗೂ ಅಗತ್ಯ ವಸ್ತುಗಳ ಖರೀದಿಗೆ, ಬೆಳಿಗ್ಗೆ 6ರಿಂದ 2ಗಂಟೆವರೆಗೂ ಮುಕ್ತ ಅವಕಾಶ ಮಾಡಿಕೊಡಲಾಗುವುದು ರಾಯಚೂರು ಜಿಲ್ಲಾಧಿಕಾರಿ ಆರ್. ವೆಂಕಟೇಶ ಕುಮಾರ ತಿಳಿಸಿದರು. ಇಂದು ಜಿಲ್ಲಾಧಿಕಾರಿ ಕಛೇರಿಯಲ್ಲಿ ಮಾಧ್ಯಮಗೋಷ್ಠಿಯನ್ನು ಉದ್ದೇಶಿಸಿ ಮಾತನಾಡುತ್ತಾ, ವಾರದ ೫ ದಿನಗಳು ಅಗತ್ಯ ವಸ್ತುಗಳ ಖರೀದಿಗೆ ಅವಕಾಶ ಮಾಡಿಕೊಡಲಾಗುವುದು,

ಉಳಿದ 2 ಶನಿವಾರ ಮತ್ತು ಭಾನುವಾರ, ಜನ ಸಂಚಾರಕ್ಕೆ ನಿರ್ಬಂಧ ವಿಧಿಸಲಾಗಿರುತ್ತದೆ. ಉತ್ಪಾದನಾ ಘಟಕಗಳು, ಸಣ್ಣ ಕೈಗಾರಿಕೆಗಳು, ಆರ್ಟಿಪಿಎಸ್ ,ವೈಟಿಪಿಎಸ್ ಗಳು ಒಟ್ಟು ಸಿಬ್ಬಂದಿಗಳಲ್ಲಿ ೫೦ರಷ್ಟು ಸಿಬ್ಬಂದಿಗಳಂತೆ ಕಾರ್ಯನಿರ್ವಹಿಸಲು ಅವಕಾಶ ಮಾಡಿಕೊಡಲಾಗುವುದು. ಇನ್ನು ಕೃಷಿ ಮತ್ತು ಕಟ್ಟಡ ನಿರ್ಮಾಣಕ್ಕೆ ಬೇಕಾಗುವ, ಸಿಮೆಂಟ್, ಸ್ಟೀಲ್, ಬೀಜ, ರಸಗೊಬ್ಬರ ಮತ್ತು ಕೃಷಿ ಯಂತ್ರೋಪಕರಣಗಳ ರಿಪೇರಿ ಇಂಥವುಗಳನ್ನು ತೆರೆಯಲು ಅವಕಾಶ ಮಾಡಿಕೊಡಲಾಗಿದೆ. ಮದುವೆ, ಸಂತೆ, ಸಮಾರಂಭಗಳಿಗೆ ಅವಕಾಶ ನೀಡಲಾಗುವುದಿಲ್ಲ. ಬ್ಯಾಂಕುಗಳ ವ್ಯವಹಾರ ಸಮಯವನ್ನು ಕೂಡ ಹೆಚ್ಚಿಸಲಾಗಿದ್ದು, ಬೆಳಿಗ್ಗೆ 6ರಿಂದ 2ಗಂಟೆವರೆಗೂ ಬ್ಯಾಂಕ್ ವ್ಯವಹಾರ ನಡೆಯಲಿದೆ ಎಂದು ತಿಳಿಸಿದರು.

ವಿಶೇಷವಾದ ಸುದ್ದಿಗಳಿಗಾಗಿ ನಮ್ಮ ಹೊಸದಾದ SUDDINOW APP ಡೌನ್ಲೋಡ್ ಮಾಡಿಕೊಳ್ಳಿ : https://play.google.com/store/apps/details?id=com.webapp.Suddinow

ಬರವಣಿಗೆ ಬಗ್ಗೆ ನಿಮಗೆ ಆಸಕ್ತಿ ಇದಿಯೇ, ನಾವು ನಿಮ್ಮನ್ನು ಪ್ರೋತಾಹಿಸಲು ನಿಮಗಾಗಿ CITIZEN JOURNALISM ಕಾಲಂಅನ್ನು ತೆರೆದಿದ್ದೇವೆ. ನಿಮ್ಮ ಬರಹಗಳಿಗೆ ಸ್ವಾಗತ : https://suddinow.com/upload-news-yourself/

About Author

Priya Rai

ನಮಸ್ಕಾರ, ಸುದ್ದಿನೌ ಪ್ರಾರಂಭವಾಗಿ ೪ ವರ್ಷಗಳು ಕಳೆದಿವೆ, ನಮ್ಮ ಜೊತೆಗಿರುವ ನಿಮ್ಮೆಲ್ಲರಿಗೂ ಧನ್ಯವಾದಗಳು ನಿಮ್ಮ ವಿಶ್ವಾಸಿ, ಪ್ರಿಯ ರಾಯ್

Leave A Reply