ಮಂಡ್ಯ- ರಾಜ್ಯದಲ್ಲಿ ಕರೋನಾ ಎರಡನೆ ಅಲೆ ತನ್ನ ವೇಗವನ್ನು ಹೆಚ್ಚಿಸಿಕೊಂಡಿದ್ದು, ಈ ಸಾರಿ  ಹೆಚ್ಚಾಗಿ ವಿದ್ಯಾರ್ಥಿಗಳಿಗೆ ಸೋಂಕು ಕಾಡುತ್ತಿದೆ. ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ಮೊರಾರ್ಜಿ ದೇಸಾಯಿ ವಸತಿ ಶಾಲೆಯ 12 ಜನ ಮಕ್ಕಳಿಗೆ ಕರೋನಾ ಸೋಂಕು ತಗುಲಿರುವುದು ದೃಢವಾಗಿದೆ. ಕಳೆದ ಎರಡು ದಿನಗಳ ಹಿಂದೆ  11 ವಿದ್ಯಾರ್ಥಿಗಳಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿತ್ತು. ಈಗ ಮತ್ತೆ 12 ಮಕ್ಕಳಿಗೆ ಪಾಸಿಟಿವ್ ಬಂದಿದೆ. 8, 9 ನೇ ತರಗತಿಯ ತಲಾ ಐದು  ಮಂದಿ, 10 ನೇ ತರಗತಿಯ ಒಬ್ಬ ವಿದ್ಯಾರ್ಥಿಗೆ ಪಾಸಿಟಿವ್. ಈಗಾಗಲೇ ಶಾಲೆಯನ್ನು ಆರೋಗ್ಯ ಇಲಾಖೆ  ಶೀಲ್ ಡೌನ್ ಮಾಡಿದೆ. ಇನ್ನು ಈ ಶಾಲೆಯಲ್ಲಿ 7 ರಿಂದ 10 ನೇ ತರಗತಿ ವರೆಗೆ 162 ಮಕ್ಕಳು ವ್ಯಾಸಂಗ ಮಾಡುತ್ತಿದ್ದಾರೆ.

ಎರಡು ದಿನಗಳ ಹಿಂದೆ ಎಲ್ಲರಿಗೂ ಕೋವಿಡ್ ಪರೀಕ್ಷೆ ನಡೆಸಲಾಗಿತ್ತು. ಈ ಪೈಕಿ ಮೊನ್ನೆ 11 ಮಕ್ಕಳಿಗೆ ಸೋಂಕು ದೃಢಪಟ್ಟಿತ್ತು. ಈಗ 12 ಜನರಲ್ಲಿ ಸೋಂಕು ಕಾಣಿಸಿಕೊಂಡಿದೆ.ಅಲ್ಲದೆ ಸೋಂಕಿತ ವಿದ್ಯಾರ್ಥಿಗಳ ಸಂಖ್ಯೆ ಇನ್ನೂ ಹೆಚ್ಚಾಗೋ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ…

About Author

Priya Rai

ನಮಸ್ಕಾರ, ಸುದ್ದಿನೌ ಪ್ರಾರಂಭವಾಗಿ ೪ ವರ್ಷಗಳು ಕಳೆದಿವೆ, ನಮ್ಮ ಜೊತೆಗಿರುವ ನಿಮ್ಮೆಲ್ಲರಿಗೂ ಧನ್ಯವಾದಗಳು ನಿಮ್ಮ ವಿಶ್ವಾಸಿ, ಪ್ರಿಯ ರಾಯ್

Leave A Reply