ಬಾಗಲಕೋಟೆ- ಜಿಲ್ಲೆಯಲ್ಲಿ 6 ಜನ ಕೋವಿಡ್‍ನಿಂದ ಗುಣಮುಖರಾಗಿ ನಿಗದಿತ ಆಸ್ಪತ್ರೆಗಳಿಂದ ಬಿಡುಗಡೆ ಮಾಡಲಾಗಿದ್ದು, ಹೊಸದಾಗಿ ಒಂದು ಕೊರೊನಾ ಪ್ರಕರಣಗಳು ಸೋಮವಾರ ದೃಢಪಟ್ಟಿವೆ ಎಂದು ಜಿಲ್ಲಾಧಿಕಾರಿ ಕ್ಯಾಪ್ಟನ್ ಡಾ.ಕೆ.ರಾಜೇಂದ್ರ ತಿಳಿಸಿದ್ದಾರೆ.

ಜಿಲ್ಲೆಯಲ್ಲಿ ಇಲ್ಲಿಯವರೆಗೆ ಒಟ್ಟು 13700 ಕೋವಿಡ್ ಪ್ರಕರಣಗಳು ದೃಢಪಟ್ಟಿದ್ದು, ಈ ಪೈಕಿ ಇಲ್ಲಿಯವರೆಗೆ ಒಟ್ಟು 13526 ಜನ ಕೋವಿಡ್‍ನಿಂದ ಗುಣಮುಖರಾಗಿದ್ದಾರೆ. ಹೊಸದಾಗಿ ಜಮಖಂಡಿಯ ಚಿಮ್ಮಡದ ಒಬ್ಬರಲ್ಲಿ ಸೋಂಕು ದೃಡಪಟ್ಟಿದ್ದು, ಅವರಿಗೆ ನಿಗದಿತ ಆಸ್ಪತ್ರೆ ಮತ್ತು ಹೋಮ್ ಐಸೋಲೇಷನ್‍ನಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಜಿಲ್ಲಾ ಕೋವಿಡ್ ಲ್ಯಾಬ್‍ನಲ್ಲಿ ಪರಿಕ್ಷಿಸಲಾಗುತ್ತಿದ್ದ 6823 ಸ್ಯಾಂಪಲ್‍ಗಳ ವರದಿಯನ್ನು ನಿರೀಕ್ಷಿಸಲಾಗುತ್ತಿದೆ. ಜಿಲ್ಲೆಯಿಂದ ಇಲ್ಲಿಯವರೆಗೆ ಒಟ್ಟು 283331 ಸ್ಯಾಂಪಲ್‍ಗಳನ್ನು ಪರೀಕ್ಷೆಗೆ ಕಳುಹಿಸಲಾಗಿದ್ದು, ಈ ಪೈಕಿ 262249 ನೆಗಟಿವ್ ಪ್ರಕರಣ 136 ಮೃತ ಪ್ರಕರಣ ವರದಿಯಾಗಿರುತ್ತದೆ. ಇನ್ನು 38 ಜನ ಚಿಕಿತ್ಸೆ ಪಡೆಯುತ್ತಿದ್ದಾರೆ. ಇಲ್ಲಿವರೆಗೆ ಒಟ್ಟು 461 ಸ್ಯಾಂಪಲ್‍ಗಳು ಮಾತ್ರ ರಿಜೆಕ್ಟ ಆಗಿರುತ್ತವೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

About Author

Priya Bot

Leave A Reply