ಬಾಗಲಕೋಟೆ:
ಜಿಲ್ಲೆಯಲ್ಲಿ 6 ಜನ ಕೋವಿಡ್‍ನಿಂದ ಗುಣಮುಖರಾಗಿ ನಿಗದಿತ ಆಸ್ಪತ್ರೆಗಳಿಂದ ಬಿಡುಗಡೆ ಮಾಡಲಾಗಿದ್ದು, ಹೊಸದಾಗಿ 1 ಕೊರೊನಾ ಪ್ರಕರಣಗಳು ಗುರುವಾರ ದೃಡಪಟ್ಟಿವೆ ಎಂದು ಜಿಲ್ಲಾಧಿಕಾರಿ ಕ್ಯಾಪ್ಟನ್ ಡಾ.ಕೆ.ರಾಜೇಂದ್ರ ತಿಳಿಸಿದ್ದಾರೆ. ಜಿಲ್ಲೆಯಲ್ಲಿ ಇಲ್ಲಿಯವರೆಗೆ ಒಟ್ಟು 13648 ಕೋವಿಡ್ ಪ್ರಕರಣಗಳು ದೃಡಪಟ್ಟಿದ್ದು, ಈ ಪೈಕಿ ಇಲ್ಲಿಯವರೆಗೆ ಒಟ್ಟು 13481 ಜನ ಕೋವಿಡ್‍ನಿಂದ ಗುಣಮುಖರಾಗಿದ್ದಾರೆ. ಹೊಸದಾಗಿ ಹುನಗುಂದದಲ್ಲಿ ಒಬ್ಬರಲ್ಲಿ ಸೋಂಕು ದೃಡಪಟ್ಟಿದ್ದು, ಅವರಿಗೆ ನಿಗದಿತ ಆಸ್ಪತ್ರೆ ಮತ್ತು ಹೋಮ್ ಐಸೋಲೇಷನ್‍ನಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಜಿಲ್ಲಾ ಕೋವಿಡ್ ಲ್ಯಾಬ್‍ನಲ್ಲಿ ಪರಿಕ್ಷಿಸಲಾಗುತ್ತಿದ್ದ 1286 ಸ್ಯಾಂಪಲ್‍ಗಳ ವರದಿಯನ್ನು ನಿರೀಕ್ಷಿಸಲಾಗುತ್ತಿದೆ. ಜಿಲ್ಲೆಯಿಂದ ಇಲ್ಲಿಯವರೆಗೆ ಒಟ್ಟು 252794 ಸ್ಯಾಂಪಲ್‍ಗಳನ್ನು ಪರೀಕ್ಷೆಗೆ ಕಳುಹಿಸಲಾಗಿದ್ದು, ಈ ಪೈಕಿ 237349 ನೆಗಟಿವ್ ಪ್ರಕರಣ 136 ಮೃತ ಪ್ರಕರಣ ವರದಿಯಾಗಿರುತ್ತದೆ. ಇನ್ನು 31 ಜನ ಚಿಕಿತ್ಸೆ ಪಡೆಯುತ್ತಿದ್ದಾರೆ. ಇಲ್ಲಿವರೆಗೆ ಒಟ್ಟು 413 ಸ್ಯಾಂಪಲ್‍ಗಳು ಮಾತ್ರ ರಿಜೆಕ್ಟ ಆಗಿರುತ್ತವೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

Leave A Reply