ಬ್ಲ್ಯಾಕ್ ಫಂಗಸ್ ಚಿಕಿತ್ಸೆಗೆ ಕೇಂದ್ರ ಸರ್ಕಾರದಿಂದ 9 ಸಾವಿರ ವೈಯಲ್ಸ್ ಹಂಚಿಕೆ…!

0

ಹುಬ್ಬಳ್ಳಿ-  ಧಾರವಾಡ ಜಿಲ್ಲೆಯ ಕೋವಿಡ್ ಸ್ಥಿತಿ ಗತಿ ಕುರಿತು ತಿಳಿಯಲು ಸಭೆ ನಡೆಸಿದ್ದೇನೆ. ಪಾಸಿಟಿವ್ ರೇಟ್ 5% ತರುವ ಉದ್ದೇಶದಿಂದ ಕೆಲಸ ಮಾಡಲಾಗುತ್ತಿದೆ. ಮಕ್ಕಳ ಮೇಲೆ‌ ಸೋಂಕು ದುಷ್ಪರಿಣಾಮ ಬೀರದಂತೆ ಕಟ್ಟುನಿಟ್ಟಿನ ಕ್ರಮ ಜರುಗಿಸಲಾಗುತ್ತಿದೆ ಎಂದು ಸಿಎಂ ಯಡಿಯೂರಪ್ಪ ಹೇಳಿದರು.

ನಗರದಲ್ಲಿಂದು ಪ್ರಗತಿ ಪರಿಶೀಲನೆ ಸಭೆ ಬಳಿಕ ಸುದ್ಧಿಗೋಷ್ಟಿ ನಡೆಸಿ ಮಾತನಾಡಿದ ಅವರು, ಬ್ಲ್ಯಾಕ್ ಫಂಗಸ್ ಗೆ 600 ಬೆಡ್ ವ್ಯವಸ್ಥೆ ಮಾಡಿಕೊಳ್ಳುವಂತೆ ಸೂಚಿಸಿದ್ದೇನೆ. ಈಗ ತಾನೇ ದೆಹಲಿಯಿಂದ ಸೂಚನೆ ಬಂದಿದೆ. ಬ್ಲ್ಯಾಕ್ ಫಂಗಸಗೆ ನೀಡುವ 9 ಸಾವಿರ‌ ವೈಯಲ್ಸ್ ರಾಜ್ಯಕ್ಕೆ ಕೇಂದ್ರ ಸರ್ಕಾರ ಹಂಚಿಕೆ ಮಾಡಿದೆ ಎಂದರು.

ಕೊರೋನಾ ಮೂರನೇ ಅಲೆ ತಡೆಯುವ ನಿಟ್ಟಿನಲ್ಲಿ ಅಗತ್ಯ ಸಿದ್ದತೆ ಮಾಡಿಕೊಳ್ಳಲು ಸೂಚಿಸಿದ್ದೇನೆ ಎಂದ ಅವರು ಹೇಳಿದರು. ಮೈಸೂರಿನಲ್ಲಿ ಅಧಿಕಾರಿಗಳ‌ ಮಧ್ಯೆ ಗೊಂದಲ‌ ಕುರಿತು ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಗೊಂದಲ ಇರುವುದು ನಿಜ. ಇಂದು ಸಂಜೆ ಬೆಂಗಳೂರಿಗೆ ಹೋಗಿ ಎಲ್ಲವನ್ನೂ ಸರಿಪಡಿಸುತ್ತೇನೆ ಎಂದರು.

ವಿಶೇಷವಾದ ಸುದ್ದಿಗಳಿಗಾಗಿ ನಮ್ಮ ಹೊಸದಾದ SUDDINOW APP ಡೌನ್ಲೋಡ್ ಮಾಡಿಕೊಳ್ಳಿ : https://play.google.com/store/apps/details?id=com.webapp.Suddinow

ಬರವಣಿಗೆ ಬಗ್ಗೆ ನಿಮಗೆ ಆಸಕ್ತಿ ಇದಿಯೇ, ನಾವು ನಿಮ್ಮನ್ನು ಪ್ರೋತಾಹಿಸಲು ನಿಮಗಾಗಿ CITIZEN JOURNALISM ಕಾಲಂಅನ್ನು ತೆರೆದಿದ್ದೇವೆ. ನಿಮ್ಮ ಬರಹಗಳಿಗೆ ಸ್ವಾಗತ : https://suddinow.com/upload-news-yourself/

About Author

Priya Rai

ನಮಸ್ಕಾರ, ಸುದ್ದಿನೌ ಪ್ರಾರಂಭವಾಗಿ ೪ ವರ್ಷಗಳು ಕಳೆದಿವೆ, ನಮ್ಮ ಜೊತೆಗಿರುವ ನಿಮ್ಮೆಲ್ಲರಿಗೂ ಧನ್ಯವಾದಗಳು ನಿಮ್ಮ ವಿಶ್ವಾಸಿ, ಪ್ರಿಯ ರಾಯ್

Leave A Reply