ಧಾರವಾಡ-  ಧಾರವಾಡದಲ್ಲಿ ಎರಡು ಲಾರಿಗಳ ಮಧ್ಯೆ ಮುಖಾಮುಖಿ ಡಿಕ್ಕಿ ಸಂಭವಿಸಿ ಓರ್ವ ಅಸುನೀಗಿರುವ ಘಟನೆ ನಡೆದಿದೆ. ಧಾರವಾಡದ ಹಳೇ ಡಿಎಸ್‌ಪಿ ಕಚೇರಿ ವೃತ್ತದ ಬಳಿಯೇ ಈ ಘಟನೆ ನಡೆದಿದೆ. ಪುಣೆ ಕಡೆಯಿಂದ ಈರುಳ್ಳಿ ತುಂಬಿಕೊಂಡು ಬರುತ್ತಿದ್ದ ಲಾರಿ ಹಾಗೂ ಸವದತ್ತಿ ಕಡೆಯಿಂದ ಖಾಲಿ ಗ್ಯಾಸ್ ಸಿಲಿಂಡರ್ ತುಂಬಿಕೊಂಡು ಬರುತ್ತಿದ್ದ ಲಾರಿಗಳ ಮಧ್ಯೆಯೇ ಈ ಅಪಘಾತ ಸಂಭವಿಸಿದೆ. ಈ ಅಪಘಾತದಲ್ಲಿ ಗ್ಯಾಸ್ ಸಿಲಿಂಡರ್ ಹೊತ್ತೊಯ್ಯುತ್ತಿದ್ದ ಲಾರಿ ಚಾಲಕ ಅಸುನೀಗಿದ್ದಾನೆ.

ಎರಡು ಲಾರಿಗಳು ತೀವ್ರ ಸ್ವರೂಪದಲ್ಲಿ ಮುಖಾಮುಖಿ ಡಿಕ್ಕಿಯಾಗಿದ್ದರಿಂದ ಒಂದು ಲಾರಿ ರಸ್ತೆಯಲ್ಲೇ ಪಲ್ಟಿಯಾಗಿದೆ. ಸುದ್ದಿ ತಿಳಿಯುತ್ತಿದ್ದಂತೆ ಘಟನಾ ಸ್ಥಳಕ್ಕೆ ಸಂಚಾರ ಠಾಣೆ ಪೊಲೀಸರು ಭೇಟಿ ನೀಡಿ ಲಾರಿಯನ್ನು ಮೇಲೆತ್ತುವ ಕೆಲಸ ಮಾಡಿದರು. ಇನ್ನು ಈ ಘಟನೆಯಲ್ಲಿ ಇಬ್ಬರಿಗೆ ಗಾಯಗಳಾಗಿದ್ದು, ಅವರನ್ನೂ ಜಿಲ್ಲಾಸ್ಪತ್ರೆಗೆ ದಾಖಲಿಸುವ ಕೆಲಸವನ್ನು ಪೊಲೀಸರು ಮಾಡಿದರು.

ವಿಶೇಷವಾದ ಸುದ್ದಿಗಳಿಗಾಗಿ ನಮ್ಮ ಹೊಸದಾದ SUDDINOW APP ಡೌನ್ಲೋಡ್ ಮಾಡಿಕೊಳ್ಳಿ : https://play.google.com/store/apps/details?id=com.webapp.Suddinow

ಬರವಣಿಗೆ ಬಗ್ಗೆ ನಿಮಗೆ ಆಸಕ್ತಿ ಇದಿಯೇ, ನಾವು ನಿಮ್ಮನ್ನು ಪ್ರೋತಾಹಿಸಲು ನಿಮಗಾಗಿ CITIZEN JOURNALISM ಕಾಲಂಅನ್ನು ತೆರೆದಿದ್ದೇವೆ. ನಿಮ್ಮ ಬರಹಗಳಿಗೆ ಸ್ವಾಗತ : https://suddinow.com/upload-news-yourself/

About Author

Priya Rai

ನಮಸ್ಕಾರ, ಸುದ್ದಿನೌ ಪ್ರಾರಂಭವಾಗಿ ೪ ವರ್ಷಗಳು ಕಳೆದಿವೆ, ನಮ್ಮ ಜೊತೆಗಿರುವ ನಿಮ್ಮೆಲ್ಲರಿಗೂ ಧನ್ಯವಾದಗಳು ನಿಮ್ಮ ವಿಶ್ವಾಸಿ, ಪ್ರಿಯ ರಾಯ್

Leave A Reply