ಪರೀಕ್ಷಾ ಕೊಠಡಿಯಲ್ಲಿ ಬೆಂಕಿ , ತಪ್ಪಿದ ಭಾರಿ ಅನಾಹುತ

0

ಮಂಗಳೂರು

ಎಸೆಸೆಲ್ಸಿ ಪರೀಕ್ಷೆ ನಡೆಯುತ್ತಿದ್ದ ವೇಳೆ ಶಾರ್ಟ್ ಸರ್ಕ್ಯೂಟ್ ಸಂಭವಿಸಿ ಬೆಂಕಿ ಹೊತ್ತಿಕೊಂಡ ಘಟನೆ ಮಂಗಳೂರಿನ ತೊಕ್ಕೊಟ್ಟು ಬಬ್ಬುಕಟ್ಟೆಯಲ್ಲಿ ನಡೆದಿದೆ. ಬಬ್ಬು ಕಟ್ಟೆಯ ಖಾಸಗಿ ಶಿಕ್ಷಣ ಸಂಸ್ಥೆಗೆ ಸೇರಿದ ಶಾಲಾ ವಿಜ್ಞಾನ ಲ್ಯಾಬ್ ನಲ್ಲಿ‌ ಈ ಘಟನೆ ನಡೆದಿದ್ದು ಅದೃಷ್ಟವಶಾತ್ ಯಾರಿಗೂ ಪ್ರಾಣಾಪಾಯ ಸಂಭವಿಸಿಲ್ಲ.

ಶಾಲೆಯ ಕೋಣೆಯಲ್ಲಿ ದಟ್ಟ ಹೊಗೆ ಹಬ್ಬಿತ್ತು. ಪರೀಕ್ಷೆ ಆರಂಭವಾಗಿ ಒಂದೂವರೆ ಗಂಟೆ ಬಳಿಕ ‌ಬಯೋಲಾಜಿ ಲ್ಯಾಬ್ ನಲ್ಲಿದ್ದ ಫ್ರಿಡ್ಜ್ ನಲ್ಲಿ ಶಾರ್ಟ್ ಸರ್ಕ್ಯೂಟ್ ಆಗಿ ಬೆಂಕಿ ಕಾಣಿಸಿಕೊಂಡಿದೆ. ಘಟನೆ ನಡೆದಿದ್ದರಿಂದ ವಿದ್ಯಾರ್ಥಿಗಳು ಗೊಂದಲಕ್ಕೀಡಾಗಿದ್ದರು. ಕೂಡಲೇ ಕಾರ್ಯಪ್ರವೃತ್ತರಾದ ಕಾಲೇಜಿನ ಸಿಬ್ಬಂದಿ ಹತ್ತಿರದ ಕೊಠಡಿಯಲ್ಲಿ ಪರೀಕ್ಷೆ ಬರೆಯುತ್ತಿದ್ದ ಮಕ್ಕಳನ್ನು ಸುರಕ್ಷಿತವಾಗಿ ಬಚಾವ್ ಮಾಡಿ ಪಕ್ಕದಲ್ಲಿರುವ ಪದವಿ ಕಾಲೇಜಿನ ಕೊಠಡಿಯಲ್ಲಿ ಪರೀಕ್ಷೆ ಆರಂಭಿಸಲು ವ್ಯವಸ್ಥೆ ಮಾಡಿದರು. ಬೆಂಕಿಯಿಂದ ಲ್ಯಾಬ್ ನ ಪರಿಕರಿಗಳಿಗೆ ಹಾನಿಯಾಗಿದೆ. ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ, ಮೆಸ್ಕಾಂ ಹಾಗೂ ಉಳ್ಳಾಲ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.

ವಿಶೇಷವಾದ ಸುದ್ದಿಗಳಿಗಾಗಿ ನಮ್ಮ ಹೊಸದಾದ SUDDINOW APP ಡೌನ್ಲೋಡ್ ಮಾಡಿಕೊಳ್ಳಿ : https://play.google.com/store/apps/details?id=com.webapp.Suddinow

ಬರವಣಿಗೆ ಬಗ್ಗೆ ನಿಮಗೆ ಆಸಕ್ತಿ ಇದಿಯೇ, ನಾವು ನಿಮ್ಮನ್ನು ಪ್ರೋತಾಹಿಸಲು ನಿಮಗಾಗಿ CITIZEN JOURNALISM ಕಾಲಂಅನ್ನು ತೆರೆದಿದ್ದೇವೆ. ನಿಮ್ಮ ಬರಹಗಳಿಗೆ ಸ್ವಾಗತ : https://suddinow.com/upload-news-yourself/

About Author

Priya Rai

ನಮಸ್ಕಾರ, ಸುದ್ದಿನೌ ಪ್ರಾರಂಭವಾಗಿ ೪ ವರ್ಷಗಳು ಕಳೆದಿವೆ, ನಮ್ಮ ಜೊತೆಗಿರುವ ನಿಮ್ಮೆಲ್ಲರಿಗೂ ಧನ್ಯವಾದಗಳು ನಿಮ್ಮ ವಿಶ್ವಾಸಿ, ಪ್ರಿಯ ರಾಯ್

Leave A Reply