ಕನಿಷ್ಠ ಹತ್ತು ಸಾವಿರ ಅನುದಾನವನ್ನು ನೀಡಬೇಕು….?

0

ಮಂಗಳೂರು  – ಕೊರೊನಾ ಲಾಕ್ ಡೌನ್ ಹಿನ್ನೆಲೆಯಲ್ಲಿ ಸರ್ಕಾರ ಘೋಷಿಸಿರುವ ಅನುದಾನ ಸಾಕಾಗಲ್ಲ. ಕನಿಷ್ಠ ಹತ್ತು ಸಾವಿರ ಆದರೂ ಅನುದಾನವನ್ನು ಕಾರ್ಮಿಕರಿಗೆ, ಬಡವರಿಗೆ ನೀಡಬೇಕು ಎಂದು ಕಾಂಗ್ರೆಸ್ ಮುಖಂಡ, ಕಾಂಗ್ರೆಸ್ ಹಿಂದುಳಿದ ವರ್ಗದ ಜಿಲ್ಲಾಧ್ಯಕ್ಷ ವಿಶ್ವಾಸ್ ದಾಸ್ ಆಗ್ರಹಿಸಿದ್ದಾರೆ.

ಮಂಗಳೂರಿನ ಮಲ್ಲಿಕಟ್ಟೆಯಲ್ಲಿರುವ ಕಾಂಗ್ರೆಸ್ ಜಿಲ್ಲಾ ಕಚೇರಿಯಲ್ಲಿ ಮಾತನಾಡಿದ ಅವರು, ಕೊರೊನಾದಿಂದ ಮಧ್ಯಮ ವರ್ಗ, ಹಿಂದುಳಿದ ವರ್ಗದವರು ಕಷ್ಟದಲ್ಲಿದ್ದಾರೆ. ಹೀಗಾಗಿ ಸರ್ಕಾರ ಕೂಡಲೇ ಎಚ್ಚೆತ್ತುಕೊಂಡು ಸಹಾಯ ಮಾಡಬೇಕಾಗಿದೆ ಎಂದರು. ಕಷ್ಟದಲ್ಲಿರುವವರಿಗೆ ಆಹಾರದ ಕಿಟನ್ನು ಸರ್ಕಾರ ನೀಡಬೇಕು. ಇನ್ನು ಸಾಲ ವಸೂಲಾತಿಗಾಗಿ ಬ್ಯಾಂಕ್ ನವರು ಮನೆಗೆ ದಾಳಿ ಮಾಡುತ್ತಿರುವ ಘಟನೆ ಬೆಳಕಿಗೆ ಬರುತ್ತಿದೆ. ಸರ್ಕಾರ ಬಡ್ಡಿಮನ್ನಾ ಮಾಡಿ ಅಂತಾ ಹೇಳಿದರೂ ಬ್ಯಾಂಕ್ ನವರು ಮಾನವೀಯತೆ ತೋರಬೇಕು ಅಂದರು.

ಬೇರೆ ರಾಜ್ಯದವರು ಹೆಚ್ಚಿನ ಪ್ಯಾಕೇಜ್   ಘೋಷಿಸಿದರೂ ನಮ್ಮ ಸರ್ಕಾರಕ್ಕೆ ಯಾಕೆ ಹೆಚ್ಚಿನ ಅನುದಾನ ನೀಡಲು ಸಾಧ್ಯವಾಗುತ್ತಿಲ್ಲ ಎಂದು ಪ್ರಶ್ನಿಸಿದರು. ಇನ್ನು ಸರ್ಕಾರ ಕೊರೊನಾ ನಿಯಂತ್ರಿಸುವಲ್ಲಿ ಹಾಗೂ ಲಸಿಕೆ ನೀಡುವಲ್ಲಿ ವಿಫಲವಾಗಿದೆ ಎಂದು ಕಿಡಿಕಾರಿದರು. ಇನ್ನು ಎಂಆರ್ ಪಿಎಲ್‌ನಲ್ಲಿ ಸ್ಥಳೀಯರಿಗೆ ಉದ್ಯೋಗ ನೀಡಬೇಕೆಂದು ನಾವು ಹೋರಾಟ ಮಾಡಲಿದ್ದೇವೆ ಎಂದು ಎಚ್ಚರಿಕೆ ನೀಡಿದರು. ಸದ್ಯ ಬಡವರಿಗೆ ಸಂಪೂರ್ಣ ಮಟ್ಟದಲ್ಲಿ ಚಿಕಿತ್ಸೆ ಸಿಗುತ್ತಿಲ್ಲ. ಉಳ್ಳವರಿಗೆ ಮಾತ್ರ ಚಿಕಿತ್ಸೆ ಸಿಗುತ್ತಿದೆ. ಇದ್ಯಾವ ನ್ಯಾಯ ಎಂದು ಪ್ರಶ್ನಿಸಿದ ಅವರು ಬೀಡಿ ಕಾರ್ಮಿಕರಿಗೆ ಕೂಡಾ ಸಹಾಯ ಮಾಡಬೇಕು ಎಂದು ಆಗ್ರಹಿಸಿದರು.

ವಿಶೇಷವಾದ ಸುದ್ದಿಗಳಿಗಾಗಿ ನಮ್ಮ ಹೊಸದಾದ SUDDINOW APP ಡೌನ್ಲೋಡ್ ಮಾಡಿಕೊಳ್ಳಿ : https://play.google.com/store/apps/details?id=com.webapp.Suddinow

ಬರವಣಿಗೆ ಬಗ್ಗೆ ನಿಮಗೆ ಆಸಕ್ತಿ ಇದಿಯೇ, ನಾವು ನಿಮ್ಮನ್ನು ಪ್ರೋತಾಹಿಸಲು ನಿಮಗಾಗಿ CITIZEN JOURNALISM ಕಾಲಂಅನ್ನು ತೆರೆದಿದ್ದೇವೆ. ನಿಮ್ಮ ಬರಹಗಳಿಗೆ ಸ್ವಾಗತ : https://suddinow.com/upload-news-yourself/

About Author

Priya Rai

ನಮಸ್ಕಾರ, ಸುದ್ದಿನೌ ಪ್ರಾರಂಭವಾಗಿ ೪ ವರ್ಷಗಳು ಕಳೆದಿವೆ, ನಮ್ಮ ಜೊತೆಗಿರುವ ನಿಮ್ಮೆಲ್ಲರಿಗೂ ಧನ್ಯವಾದಗಳು ನಿಮ್ಮ ವಿಶ್ವಾಸಿ, ಪ್ರಿಯ ರಾಯ್

Leave A Reply