ಪಾಲಿಕೆಯ ಅಧಿಕಾರಿಗಳೆಂದು ಸುಲಿಗೆ ಮಾಡುತ್ತಿದ್ದ ವ್ಯಕ್ತಿ ಬಂಧನ

0

ಮಂಗಳೂರು  – ಮಂಗಳೂರು ನಗರದ ಟೋಕಿಯೋ ಮಾರ್ಕೆಟ್‌ನ ಬಟ್ಟೆ ಅಂಗಡಿಯೊಂದರಲ್ಲಿ ಪಾಲಿಕೆಯ ಅಧಿಕಾರಿಗಳೆಂದು ಹೇಳಿ ಸುಲಿಗೆಗೆ ಯತ್ನಿಸಿದ್ದ ಪ್ರಕರಣಕ್ಕೆ ಸಂಬಂಧಿಸಿ ಓರ್ವನನ್ನು ಬಂಧಿಸಲಾಗಿದೆ.  ಬಂಧಿತನನ್ನು ದೀಪಕ್ ರಾಜೇಶ್ ಎಂದು ಗುರುತಿಸಲಾಗಿದೆ.  

ಈ ಪ್ರಕರಣದ ಕುರಿತು ಮಾಹಿತಿ ನೀಡಿದ ಮಂಗಳೂರು ನಗರದ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್, ಮಂಗಳೂರು ಮಹಾನಗರ ಪಾಲಿಕೆಯ ಅಧಿಕಾರಿಗಳೆಂದು  ಹೇಳಿಕೊಂಡು ಮೂವರು ವ್ಯಕ್ತಿಗಳು ಟೋಕಿಯೋ ಮಾರ್ಕೆಟ್ ಗೆ ಹೋಗಿದ್ದರು ‌ ಲಾಕ್‌ಡೌನ್ ಕಾರಣದಿಂದ ಬಟ್ಟೆ ಅಂಗಡಿ ತೆರೆಯಲು ಅವಕಾಶ ಇಲ್ಲದೆಂದು ಹೇಳಿಕೊಂಡು ವೀಡಿಯೋ ಹಾಗೂ ಫೋಟೋ ತೆಗೆಯಲು ಯತ್ನಿಸಿದ್ದು, ಅದನ್ನು ಮಾಲಕ ವಿರೋಧಿಸಿದಾಗ ಪ್ರಕರಣ ದಾಖಲಿಸುವುದನ್ನು ತಪ್ಪಿಸಬೇಕಾದರೆ 50,000 ರೂಪಾಯಿ ನೀಡುವಂತೆ ಒತ್ತಾಯಿಸಿದ್ದರು.

ಅದಕ್ಕೆ ಮಾಲಕ ಒಪ್ಪದಿದ್ದಾಗ ಆರೋಪಿಗಳು ಬಳಿಕ 10,000 ರೂಪಾಯಿ ಆದರೂ ನೀಡುವಂತೆ ಹಾಗೂ ಇಲ್ಲವಾದಲ್ಲಿ ಪಾಲಿಕೆ ಅಧಿಕಾರಿಗಳಿಗೆ ತಿಳಿಸಿ ಪೊಲೀಸರಿಗೆ ದೂರು ನೀಡಿ ಅಂಗಡಿ ಲಾಕ್ ಮಾಡುವುದಾಗಿ ಬೆದರಿಕೆಯೊಡ್ಡಿದ್ದರು ಎಂದು ದೂರಲಾಗಿತ್ತು. ಪ್ರಕರಣವನ್ನು ಪರಿಶೀಲಿಸಿದಾಗ ಆ ವ್ಯಕ್ತಿಗಳು ಅಧಿಕಾರಿಗಳಲ್ಲ ಎಂದು ತಿಳಿದುಬಂದಿದ್ದು, ಅವರ ಮೇಲೆ ಸುಲಿಗೆ ಪ್ರಕರಣವನ್ನು ದಾಖಲಿಸಲಾಗಿದೆ. ಓರ್ವನನ್ನು ಬಂಧಿಸಲಾಗಿದ್ದು, ಇತರ ಇಬ್ಬರನ್ನು ಬಂಧಿಸಲು ಕ್ರಮ ಕೈಗೊಳ್ಳಲಾಗಿದೆ. ಇದರ ಜತೆಗೆ ದೂರುದಾರರು ಕೂಡಾ ಕೊರೋನ ಲಾಕ್‌ಡೌನ್ ನಿಯಮ ಉಲ್ಲಂಘಿಸಿ ಅಂಗಡಿ ತೆರೆದಿದ್ದ ಕಾರಣ ಸಾಂಕ್ರಾಮಿಕ ರೋಗ ತಡೆ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ವಿಶೇಷವಾದ ಸುದ್ದಿಗಳಿಗಾಗಿ ನಮ್ಮ ಹೊಸದಾದ SUDDINOW APP ಡೌನ್ಲೋಡ್ ಮಾಡಿಕೊಳ್ಳಿ : https://play.google.com/store/apps/details?id=com.webapp.Suddinow

ಬರವಣಿಗೆ ಬಗ್ಗೆ ನಿಮಗೆ ಆಸಕ್ತಿ ಇದಿಯೇ, ನಾವು ನಿಮ್ಮನ್ನು ಪ್ರೋತಾಹಿಸಲು ನಿಮಗಾಗಿ CITIZEN JOURNALISM ಕಾಲಂಅನ್ನು ತೆರೆದಿದ್ದೇವೆ. ನಿಮ್ಮ ಬರಹಗಳಿಗೆ ಸ್ವಾಗತ : https://suddinow.com/upload-news-yourself/

About Author

Priya Rai

ನಮಸ್ಕಾರ, ಸುದ್ದಿನೌ ಪ್ರಾರಂಭವಾಗಿ ೪ ವರ್ಷಗಳು ಕಳೆದಿವೆ, ನಮ್ಮ ಜೊತೆಗಿರುವ ನಿಮ್ಮೆಲ್ಲರಿಗೂ ಧನ್ಯವಾದಗಳು ನಿಮ್ಮ ವಿಶ್ವಾಸಿ, ಪ್ರಿಯ ರಾಯ್

Leave A Reply