ಕೋವಿಡ್ ನಿಂದ ಮೃತಪಟ್ಟ ಕುಟುಂಬಕ್ಕೆ 50 ಸಾವಿರ ಪರಿಹಾರ ನೀಡಿದ ಸಚಿವ

0

ಹಾವೇರಿ – ಕೊರೊನಾದಿಂದ ಮೃತಪಟ್ಟವರ ಕುಟುಂಬಕ್ಕೆ ತಲಾ 50 ಸಾವಿರ ರುಪಾಯಿ ಹಣ ನೀಡುವುದಾಗಿ ಹೇಳಿದ್ದ ಸಚಿವ ಬಿಸಿ ಪಾಟೀಲ್ ಅವರು, ಇಂದು ಕೋವಿಡ್ ನಿಂದ ಮೃತಪಟ್ಟ ಕುಟುಂಬಕ್ಕೆ 50 ಸಾವಿರ ಪರಿಹಾರ ನೀಡಿದ್ದಾರೆ.

ಹಾವೇರಿ ಜಿಲ್ಲೆ ಹಿರೇಕೆರೂರು ತಾಲೂಕಿನ ಸಾತೇನಹಳ್ಳಿ ಮತ್ತು ಹಿರೇಕೊಣತಿ ಗ್ರಾಮದಲ್ಲಿನ ಮೃತರ ಕುಟುಂಬದವರಿಗೆ ಹಣವನ್ನು  ಸಚಿವ ಪಾಟೀಲ ವಿತರಣೆ ಮಾಡಿದ್ದಾರೆ. ಹಿರೇಕೆರೂರು ಕ್ಷೇತ್ರದಲ್ಲಿ ಕೊರೊನಾದಿಂದ ಮೃತಪಟ್ಟವರ ಕುಟುಂಬಕ್ಕೆ ವಯಕ್ತಿಕವಾಗಿ ಐವತ್ತು ಸಾವಿರ ರುಪಾಯಿ ವಿತರಿಸುವುದಾಗಿ ಸಚಿವ ಬಿಸಿ ಪಾಟೀಲ ಹೇಳಿದ್ದರು. ಈ ಹಿನ್ನೆಲೆಯಲ್ಲಿ ಈವರೆಗೆ ಹಿರೇಕೆರೂರು ಕ್ಷೇತ್ರದಲ್ಲಿ ಮೃತಪಟ್ಟ 44 ಜನರ ಕುಟುಂಬಗಳಿಗೆ ಸಹಾಯಧನ ವಿತರಣೆ ಮಾಡಿದ್ದಾರೆ. ಬಿ.ಪಿ.ಎಲ್ ಕಾರ್ಡ್ ಹೊಂದಿದ ಮೃತರ ಕುಟುಂಬಕ್ಕೆ ಐವತ್ತು ಸಾವಿರ ರುಪಾಯಿ ವಿತರಣೆ ಮಾಡಿದ್ದಾರೆ.

ವಿಶೇಷವಾದ ಸುದ್ದಿಗಳಿಗಾಗಿ ನಮ್ಮ ಹೊಸದಾದ SUDDINOW APP ಡೌನ್ಲೋಡ್ ಮಾಡಿಕೊಳ್ಳಿ : https://play.google.com/store/apps/details?id=com.webapp.Suddinow

ಬರವಣಿಗೆ ಬಗ್ಗೆ ನಿಮಗೆ ಆಸಕ್ತಿ ಇದಿಯೇ, ನಾವು ನಿಮ್ಮನ್ನು ಪ್ರೋತಾಹಿಸಲು ನಿಮಗಾಗಿ CITIZEN JOURNALISM ಕಾಲಂಅನ್ನು ತೆರೆದಿದ್ದೇವೆ. ನಿಮ್ಮ ಬರಹಗಳಿಗೆ ಸ್ವಾಗತ : https://suddinow.com/upload-news-yourself/

About Author

Priya Rai

ನಮಸ್ಕಾರ, ಸುದ್ದಿನೌ ಪ್ರಾರಂಭವಾಗಿ ೪ ವರ್ಷಗಳು ಕಳೆದಿವೆ, ನಮ್ಮ ಜೊತೆಗಿರುವ ನಿಮ್ಮೆಲ್ಲರಿಗೂ ಧನ್ಯವಾದಗಳು ನಿಮ್ಮ ವಿಶ್ವಾಸಿ, ಪ್ರಿಯ ರಾಯ್

Leave A Reply