ನಿವೃತ್ತ ಸೈನಿಕ ಮಗುವಿನ ಪ್ರಾಣ ತೆಗದೆ ಇಲಿ ಪಾಷಾಣ.!

0

ಮಂಗಳೂರು

ಆಕಸ್ಮಿಕವಾಗಿ ಇಲಿ ಪಾಷಾಣ ತಿಂದು ಎರಡೂವರೆ ವರ್ಷದ ಮಗುವೊಂದು ಮೃತಪಟ್ಟ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಜತ್ತೂರು ಗ್ರಾಮದ ಕೆಮ್ಮಾರದಲ್ಲಿ ನಡೆದಿದೆ. ಕೆಮ್ಮಾರ ನಿವಾಸಿ, ನಿವೃತ್ತ ಸೈನಿಕ ಸೈಜು ಎಂಬವರ ಪುತ್ರಿ, ಎರಡೂವರೆ ವರ್ಷದ ಶ್ರೇಯಾ ಮೃತಪಟ್ಟ ಮಗು. ಮಗುವಿನ ತಂದೆ-ತಾಯಿ ನಾಯಿಗೂಡಿನ ಮೇಲಿದ್ದ ಸಾಮಾಗ್ರಿಗಳನ್ನು ತೆಗೆದು ಸ್ವಚ್ಛಗೊಳಿಸುತ್ತಿದ್ದ ವೇಳೆ ಎರಡು-ಮೂರು ತಿಂಗಳ ಹಿಂದೆ ತಂದಿದ್ದ ಇಲಿ ಪಾಷಾಣದ ಟ್ಯೂಬ್ ಸಹ ಅಲ್ಲಿ ಸಿಕ್ಕಿತ್ತು. ಮನೆಯವರು ಕೆಲಸ ಮಾಡುತ್ತಿದ್ದಂತೆ ಮಗು ಆಟವಾಡುತ್ತ ಬಂದು ಆ ಇಲಿ ಪಾಷಾಣವನ್ನು ತಿಂದಿದೆ. ಮಧ್ಯಾಹ್ನದ ವೇಳೆ ಮಗುವಿಗೆ ವಾಂತಿ ಆರಂಭಗೊಂಡಿದ್ದು ತಕ್ಷಣ ಉಪ್ಪಿನಂಗಡಿಯ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಬಳಿಕ ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮಗು ತೀವ್ರ ಅಸ್ವಸ್ಥಗೊಂಡಿದ್ದ ಹಿನ್ನೆಲೆಯಲ್ಲಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಅಲ್ಲಿ ತಪಾಸಣೆ ವೇಳೆ ಮಗು ಮೃತಪಟ್ಟಿದೆ.

ವಿಶೇಷವಾದ ಸುದ್ದಿಗಳಿಗಾಗಿ ನಮ್ಮ ಹೊಸದಾದ SUDDINOW APP ಡೌನ್ಲೋಡ್ ಮಾಡಿಕೊಳ್ಳಿ : https://play.google.com/store/apps/details?id=com.webapp.Suddinow

ಬರವಣಿಗೆ ಬಗ್ಗೆ ನಿಮಗೆ ಆಸಕ್ತಿ ಇದಿಯೇ, ನಾವು ನಿಮ್ಮನ್ನು ಪ್ರೋತಾಹಿಸಲು ನಿಮಗಾಗಿ CITIZEN JOURNALISM ಕಾಲಂಅನ್ನು ತೆರೆದಿದ್ದೇವೆ. ನಿಮ್ಮ ಬರಹಗಳಿಗೆ ಸ್ವಾಗತ : https://suddinow.com/upload-news-yourself/

About Author

Priya Rai

ನಮಸ್ಕಾರ, ಸುದ್ದಿನೌ ಪ್ರಾರಂಭವಾಗಿ ೪ ವರ್ಷಗಳು ಕಳೆದಿವೆ, ನಮ್ಮ ಜೊತೆಗಿರುವ ನಿಮ್ಮೆಲ್ಲರಿಗೂ ಧನ್ಯವಾದಗಳು ನಿಮ್ಮ ವಿಶ್ವಾಸಿ, ಪ್ರಿಯ ರಾಯ್

Leave A Reply