ಹುಬ್ಬಳ್ಳಿ – ಅಕ್ರಮ ಆಸ್ತಿ ಗಳಿಕೆ ಆರೋಪದ ಅಡಿಯಲ್ಲಿ ಬೆಳ್ಳಂ ಬೆಳಿಗ್ಗೆ ಹುಬ್ಬಳ್ಳಿಯಲ್ಲಿ ಎಸಿಬಿ ಅಧಿಕಾರಿಗಳು ಭ್ರಷ್ಟರ ಬೇಟೆಯಾಡಿದ್ದಾರೆ.ನಗರ ಮೂರು ಕಡೆ ಏಕಕಾಲಕ್ಕೆ ದಾಳಿ ಮಾಡಲಾಗಿದೆ.ಸಣ್ಣ ನೀರಾವರಿ ಇಲಾಖೆ ಇಇ ಮನೆಗಳ ಮೇಲೆ ದಾಳಿ ನಡೆಸಿದ್ದಾರೆ. ದೇವರಾಜ್ ಶಿಗ್ಗಾಂವಿ ಎನ್ನುವರ ಮನೆಗಳ ಮೇಲೆ ಏಕಕಾಲಕ್ಕೆ ದಾಳಿ ನಡೆಸಲಾಗಿದೆ. ಹುಬ್ಬಳ್ಳಿ ಗೋಕುಲ ರಸ್ತೆ,ವಿದ್ಯಾ ನಗರ,ಕೋಟಿಲಿಂಗೆಶ್ವರ ನಗರದ ಮನೆಗಳ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಧಾರವಾಡ ಎಸಿಬಿ ಅಧಿಕಾರಿಗಳ ಮೂರು ತಂಡ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ.