ಬಳ್ಳಾರಿಸರ್ಕಾರವು ನೀಡುತ್ತಿರುವ ಅನ್ನಭಾಗ್ಯ ಅಕ್ಕಿಯನ್ನು ಪಡಿತರ ಚೀಟಿದಾರರು ಅಕ್ರಮವಾಗಿ ಮಾರಾಟ ಮಾಡಿದರೆ ಅವರ ವಿರುದ್ಧ ಕಾನೂನು ರೀತ್ಯ ಕ್ರಮಕೈಗೊಳ್ಳಲಾಗುವುದು ಹಾಗೂ ಜೊತೆಗೆ ಪಡಿತರ ಚೀಟಿ ಕೂಡ ಅಮಾನತು ಮಾಡಲಾಗುವುದು ಎಂದು ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ಅವರು ಎಚ್ಚರಿಕೆ ನೀಡಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು ಆರ್ಥಿಕವಾಗಿ ದುರ್ಬಲ ಕುಟುಂಬಗಳಿಗೆ ಕೇಂದ್ರ ಮತ್ತು ರಾಜ್ಯ ಸರ್ಕಾರ ನೀಡುತ್ತಿರುವ ಬಿ.ಪಿ.ಎಲ್ ಪಡಿತರವನ್ನು ಕೆಲವು ಸದೃಢ ಕುಟುಂಬಗಳು ತನಿಖಾ ಸಮಯದಲ್ಲಿ ಸುಳ್ಳು ಮಾಹಿತಿ ನೀಡಿ ಹಾಗೂ ಇಲಾಖಾ ಮಾನದಂಡಗಳನ್ನು ಮರೆಮಾಚಿ ಬಿ.ಪಿ.ಎಲ್ ಪಡಿತರ ಚೀಟಿಗಳನ್ನು ಪಡೆದುಕೊಂಡು ಸರ್ಕಾರಕ್ಕೆ ವಂಚನೆ ಮಾಡುತ್ತಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ರಾಜ್ಯದಲ್ಲಿ ಕುಟುಂಬ ಸಂಖ್ಯೆಗಿಂತ ಹೆಚ್ಚಿನ ಪಡಿತರ ಚೀಟಿಗಳಿರುವುದು ಮತ್ತು ಸುಳ್ಳು ಮಾಹಿತಿ ನೀಡಿ ಪಡಿತರ ಚೀಟಿ ಪಡೆದುಕೊಂಡಿರುವುದು ವಿತರಿಸಿದ ಆಹಾರ ಧಾನ್ಯಗಳನ್ನು ಅಕ್ರಮವಾಗಿ ಕಾಳ ಸಂತೆಯಲ್ಲಿ ಮಾರಾಟ ಮಾಡುತ್ತಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ಯಾವುದೇ ಪಡಿತರ ಚೀಟಿದಾರರು ತಾವು ಪಡೆದ ಆಹಾರ ಧಾನ್ಯವನ್ನು ದಾಸ್ತಾನಿರಿಸುವುದು/ ಹಣಕ್ಕಾಗಿ ಮಾರಾಟ ಮಾಡುವುದು ಶಿಕ್ಷೆಯ ಜೊತೆಗೆ ದಂಡನಾರ್ಹವಾಗಿರುತ್ತಾರೆ. ಕಾರ್ಡ್‍ದಾರರು ಕಾಳಸಂತೆಯಲ್ಲಿ ಅಕ್ರಮವಾಗಿ ಪಡಿತರವನ್ನು ಮಾರಾಟ ಮಾಡುವುದು ಕಂಡು ಬಂದಲ್ಲಿ ಸಂಬಂಧಪಟ್ಟ ಕಾರ್ಡ್‍ದಾರರಿಂದ ಅರ್ಹ ಪಡಿತರ ಧಾನ್ಯಗಳ ಪ್ರಮಾಣಕ್ಕೆ ಮುಕ್ತ ಮಾರುಕಟ್ಟೆಯ ಬೆಲೆಯಲ್ಲಿ ಹಣವನ್ನು ಭರಿಸುವುದು. ಅಂತಹ ಕಾರ್ಡ್‍ದಾರರ ಪಡಿತರ ಚೀಟಿಯನ್ನು ಆರು ತಿಂಗಳವರೆಗೆ ಅಮಾನತ್ತಿನಲ್ಲಿಡಲಾಗುವುದು ಎಂದು ಅವರು  ತಿಳಿಸಿದ್ದಾರೆ….

Leave A Reply