ಕುಡಿದ ಮತ್ತಿನಲ್ಲಿ ಅಂಬ್ಯುಲೆನ್ಸ್ ಚಾಲನೆ, ಕಾರ್ ಗೆ ಡಿಕ್ಕಿ.

0

ಗದಗ 

ರೋಗಿಗಳ ಪ್ರಾಣ ಉಳಿಸಬೇಕಾದ ಅಂಬ್ಯುಲೆನ್ಸ್ ಚಾಲಕನೊಬ್ಬ ಕುಡಿದ ಮತ್ತಿನಲ್ಲಿ ಅಬ್ಯುಲೆನ್ಸ್ ಚಾಲಬೆ ಮಾಡಿ ಇನ್ನೊಬ್ಬರ ಪ್ರಾಣಕ್ಕೆ ಕುತ್ತು ತಂದಿರುವ ಘಟನೆ ಗದಗನಲ್ಲಿ ನಡೆದಿದೆ‌. ಕುಡಿದ ಅಮಲಿನಲ್ಲಿ ಅಂಬ್ಯುಲೆನ್ಸ್ ಚಾಲನೆ ಮಾಡಿ, ಅಂಬ್ಯುಲೆನ್ಸ್ ಕಾರಿಗೆ ಡಿಕ್ಕಿ ಸಂಭಸಿದೆ. ಈ ಹಿನ್ನೆಲೆಯಲ್ಲಿ ಅಂಬುಲೆನ್ಸ್ ಚಾಲಕನಿಗೆ ಸ್ಥಳೀಯರು ಹಿಗ್ಗಾಮುಗ್ಗಾ ಥಳಿಸಿದ ಘಟನೆ ಗದಗನ  ಹೊರವಲಯದಲ್ಲಿ ನಡೆದಿದೆ.

ಕಾರ್ ಗೆ ಅಂಬ್ಯುಲೆನ್ಸ್ ಡಿಕ್ಕಿ ಹೊಡೆದ ಪರಿಣಾಮ ಕಾರು ಚಾಲಕ ಗೋವಿಂದಪ್ಪ ಲಮಾಣಿಗೆ ಗಂಭೀರ ಗಾಯವಾಗಿದೆ. ಗದಗ ನಿಂದ ಶಿರಹಟ್ಟಿ ಕಡೆಗೆ ಹೊರಟಿದ್ದ ಅಂಬ್ಯುಲೆನ್ಸ್ ವಾಹನ ರಾಂಗ್ ರೂಟ್ ನಲ್ಲಿ ಬಂದು ಕಾರ್ ಗೆ ಡಿಕ್ಕಿಯಾಗಿದೆ. ಪಾನ ಮತ್ತನಾಗಿ ಅಂಬ್ಯುಲೆನ್ಸ್ ವಾಹನ ಚಲಾಯಿಸುತ್ತಿದ್ದ ಚಾಲಕ ವಿಶ್ವನಾಥ್ ಬೋರಶೆಟ್ಟಿಯ ನಿರ್ಲಕ್ಷ್ಯವೇ ಈ ಘಟನೆಗೆ ಕಾರಣ ಎನ್ನಲಾಗುತ್ತಿದೆ.

ಸ್ಥಳೀಯರು, ಅಂಬುಲೆನ್ಸ್ ಚಾಲಕನನ್ನು ಹಿಗ್ಗಾಮುಗ್ಗಾ ಥಳಿಸಿದ್ದಾರೆ. ಘಟನೆ ಬಳಿಕ ಸ್ಥಳಕ್ಕೆ ಬಂದ ಹೈವೇ ಪೊಲೀಸರು ಅಂಬ್ಯುಲೆನ್ಸ್ ಚಾಲಕನನ್ನ ವಶಕ್ಕೆ ಪಡೆದು, ಗ್ರಾಮೀಣ ಠಾಣೆಗೆ ಕರೆದೊಯ್ದಿದ್ದಾರೆ.  ಘಟನೆಗೆ ಕಾರಣನಾದ ಚಾಲಕನ ಮೇಲೆ ಸ್ಥಳೀಯರು ಕ್ರಮಕ್ಕೆ ಒತ್ತಾಯಿಸಿದ್ದಾರೆ. ಈ ಕುರಿತು ಗದಗ ಟ್ರಾಫಿಕ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಶೇಷವಾದ ಸುದ್ದಿಗಳಿಗಾಗಿ ನಮ್ಮ ಹೊಸದಾದ SUDDINOW APP ಡೌನ್ಲೋಡ್ ಮಾಡಿಕೊಳ್ಳಿ : https://play.google.com/store/apps/details?id=com.webapp.Suddinow

ಬರವಣಿಗೆ ಬಗ್ಗೆ ನಿಮಗೆ ಆಸಕ್ತಿ ಇದಿಯೇ, ನಾವು ನಿಮ್ಮನ್ನು ಪ್ರೋತಾಹಿಸಲು ನಿಮಗಾಗಿ CITIZEN JOURNALISM ಕಾಲಂಅನ್ನು ತೆರೆದಿದ್ದೇವೆ. ನಿಮ್ಮ ಬರಹಗಳಿಗೆ ಸ್ವಾಗತ : https://suddinow.com/upload-news-yourself/

About Author

Priya Rai

ನಮಸ್ಕಾರ, ಸುದ್ದಿನೌ ಪ್ರಾರಂಭವಾಗಿ ೪ ವರ್ಷಗಳು ಕಳೆದಿವೆ, ನಮ್ಮ ಜೊತೆಗಿರುವ ನಿಮ್ಮೆಲ್ಲರಿಗೂ ಧನ್ಯವಾದಗಳು ನಿಮ್ಮ ವಿಶ್ವಾಸಿ, ಪ್ರಿಯ ರಾಯ್

Leave A Reply