ಬಳ್ಳಾರಿ- ಬಳ್ಳಾರಿ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್‌ (ಬಿಡಿಸಿಸಿ) ನಿರ್ದೇಶಕರಾಗಿ ಅರಣ್ಯ ಸಚಿವ  ಹಾಗೂ ಜಿಲ್ಲಾ ಉಸ್ತವಾರಿ ಸಚುವ ಆನಂದ್‌ ಸಿಂಗ್‌ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಮಂಡಳಿಯ ನಿರ್ದೇಶಕ ಸ್ಥಾನಕ್ಕೆ ಆನಂದ್‌ ಸಿಂಗ್‌ ಅವರು ತಾಲ್ಲೂಕು ಕೃಷಿ ಉತ್ಪನ್ನ ಮಾರಾಟ ಸಹಕಾರ ಸಂಘ ಹಾಗೂ ಇತರೆ ಮಾರಾಟ ಮತ್ತು ಸಂಸ್ಕರಣ ಸಹಕಾರ ಸಂಘಗಳ ಕ್ಷೇತ್ರದ ಮೂಲಕ ಚುನಾವಣೆಗೆ ಸ್ಪರ್ಧಿಸಿದ್ದರು. ನಿರ್ದೇಶಕ ಸ್ಥಾನಕ್ಕೆ ನಾಮಪತ್ರ ಸಲ್ಲಿಸಲು ಡಿ. 31 ಕೊನೆಯ ದಿನವಾಗಿತ್ತು. ಜ.1ರಂದು ನಾಮಪತ್ರಗಳ ಪರಿಶೀಲನೆ ನಡೆಸ ಲಾಗಿದ್ದು, ಆನಂದ್‌ ಸಿಂಗ್‌ ಅವರ ನಾಮಪತ್ರ ಕ್ರಮಬದ್ಧವಾಗಿದೆ. ಬೇರೆ ಯಾರೊಬ್ಬರೂ ನಾಮಪತ್ರ ಸಲ್ಲಿಸದ ಕಾರಣ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

Leave A Reply