ಮೈಸೂರು- ಮೈಸೂರು ಮಹಾನಗರ ಪಾಲಿಕೆ ಮೇಯರ್ ಚುನಾವಣೆ ಸಾಕಷ್ಟು ಸದ್ದು ಮಾಡಿದೆ. ಬಿಜೆಪಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳ ಮೇಯರ್ ಚುನಾವಣೆಯನ್ನು ಪ್ರತಿಷ್ಠಿಯಾಗಿ ತೆಗೆದುಕೊಂಡಿತ್ತು. ಆದ್ರೆ ಕೊನೆಯಲ್ಲಿ ಜೆಡಿಎಸ್ ಮೇಯರ್ ಸ್ಥಾನವನ್ನು ಅಲಂಕರಿಸಿದೆ. ಆದ್ರೆ ಈಗ ಸಾಮಾಜಿಕ ಜಾಲತಾಣದಲ್ಲಿ ಮತ್ತೊಂದು ವಿಷಯ ಭಾರಿ ಚರ್ಚೆಯಾಗುತ್ತಿದೆ.

ಮೈಸೂರು ಮಹಾನಗರ ಪಾಲಿಕೆಯ ಮೇಯರ್‌ ಆದ ಖುಷಿಯಲ್ಲಿ ಪಾಲಿಕೆ ಸಭಾಂಗಣದಲ್ಲಿ ಕಾರ್ಯಕರ್ತರು ಸೇರಿದಂತೆ ಮೇಯರ್ ಪತಿ ಮಾದೇಗೌಡ ಅವರು ಸಂಭ್ರಮಾಚರಣೆ ಮಾಡುತ್ತಿದ್ದರು. ಇದೇ ವೇಳೆಯಲ್ಲಿ ಮೇಯರ ಪತಿ ಮಾದೇಗೌಡ ಅವರು ಪತ್ನಿ ರುಕ್ಮಿಣಿಗೆ ಮುತ್ತು ಕೊಟ್ಟಿದ್ದಾರೆ. ತೀವ್ರ ಕುತೂಹಲ ಕೆರಳಿಸಿದ್ದ ಮೈಸೂರು ಮಹಾನಗರ ಪಾಲಿಕೆಯ ಚುನಾವಣೆಯಲ್ಲಿ 23ನೇ ಮೇಯರ್ ಆಗಿ ಜೆಡಿಎಸ್ ಸದಸ್ಯೆ ರುಕ್ಮಿಣಿ ಮಾದೇಗೌಡ ಆಯ್ಕೆಯಾಗಿದ್ದಾರೆ. 23 ನೇ ಸಾಂಸ್ಕೃತಿಕ ನಗರಿ ಮೈಸೂರಿ ಮೇಯರ್ ಆದ   ರುಕ್ಮಿಣಿ ಆದ ಸಂತಸದಲ್ಲಿ ಬಹಿರಂಗವಾಗಿ ಪತಿ ಮಾದೇಗೌಡ ಮುತ್ತು ಕೊಟ್ಟು, ಅವರನ್ನು ಹೊತ್ತು ಸಂಭ್ರಮಿಸಿದ್ದಾರೆ.

ವಿಶೇಷವಾದ ಸುದ್ದಿಗಳಿಗಾಗಿ ನಮ್ಮ ಹೊಸದಾದ SUDDINOW APP ಡೌನ್ಲೋಡ್ ಮಾಡಿಕೊಳ್ಳಿ : https://play.google.com/store/apps/details?id=com.webapp.Suddinow

ಬರವಣಿಗೆ ಬಗ್ಗೆ ನಿಮಗೆ ಆಸಕ್ತಿ ಇದಿಯೇ, ನಾವು ನಿಮ್ಮನ್ನು ಪ್ರೋತಾಹಿಸಲು ನಿಮಗಾಗಿ CITIZEN JOURNALISM ಕಾಲಂಅನ್ನು ತೆರೆದಿದ್ದೇವೆ. ನಿಮ್ಮ ಬರಹಗಳಿಗೆ ಸ್ವಾಗತ : https://suddinow.com/upload-news-yourself/

 

About Author

Priya Rai

ನಮಸ್ಕಾರ, ಸುದ್ದಿನೌ ಪ್ರಾರಂಭವಾಗಿ ೪ ವರ್ಷಗಳು ಕಳೆದಿವೆ, ನಮ್ಮ ಜೊತೆಗಿರುವ ನಿಮ್ಮೆಲ್ಲರಿಗೂ ಧನ್ಯವಾದಗಳು ನಿಮ್ಮ ವಿಶ್ವಾಸಿ, ಪ್ರಿಯ ರಾಯ್

Leave A Reply