ಮಂಗಳೂರು  – ಮಾಸ್ಕ್ ಧರಿಸದಿರುವುದನ್ನು ಪ್ರಶ್ನಿಸಿದ ಪಿಡಿಓ ಅಧಿಕಾರಿ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ಕು ಮಂದಿ ಯುವಕರನ್ನು ಮಂಗಳೂರು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಮಹಮ್ಮದ್ ಇದಾಯತುಲ್ಲಾ, ಅಹ್ಮದ್ ಬಸೀರ್, ಅಬುಬಕ್ಕರ್ ಸಿದ್ದಿಕ್, ಅಬ್ದುಲ್ ಸಿದ್ದಿಕ್ ಬಂಧಿತರು. ಎರಡು ದಿನಗಳ ಹಿಂದೆ ಮಂಗಳೂರು ನಗರದ ಹೊರವಲಯದ ಮಲ್ಲೂರು ಗ್ರಾಮ ಪಂಚಾಯತ್ ಪಿ.ಡಿ.ಓ ರಾಜೇಂದ್ರ ಶೆಟ್ಟಿ ಎಂಬುವವರಿಗೆ ಹಲ್ಲೆ ನಡೆಸಲಾಗಿತ್ತು. ಪಂಚಾಯತ್ ಹೊರಗಡೆ ಮಾಸ್ಕ್ ಹಾಕದೆ ಗುಂಪು ಸೇರಿದ್ದನ್ನು ಪ್ರಶ್ನಿಸಿದಕ್ಕೆ ಹಲ್ಲೆ ನಡೆಸಲಾಗಿತ್ತು ಎಂದು ಆರೋಪಿಸಲಾಗಿತ್ತು. ಹಲ್ಲೆ ನಡೆಸಿದ ಬಳಿಕ ತಲೆ ಮರೆಸಿಕೊಂಡಿದ್ದ ಯುವಕರನ್ನು ಇಂದು ಬೆಳಿಗ್ಗೆ  ಮಂಗಳೂರು ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ ಎಂದು ಮಂಗಳೂರು ನಗರ ಪೊಲೀಸ್ ಕಮಿಷನರ್ ಎನ್.ಶಶಿಕುಮಾರ್ ಸುದ್ದಿಗೋಷ್ಟಿಯಲ್ಲಿ ಹೇಳಿಕೆ ನೀಡಿದ್ದಾರೆ.

ವಿಶೇಷವಾದ ಸುದ್ದಿಗಳಿಗಾಗಿ ನಮ್ಮ ಹೊಸದಾದ SUDDINOW APP ಡೌನ್ಲೋಡ್ ಮಾಡಿಕೊಳ್ಳಿ : https://play.google.com/store/apps/details?id=com.webapp.Suddinow

ಬರವಣಿಗೆ ಬಗ್ಗೆ ನಿಮಗೆ ಆಸಕ್ತಿ ಇದಿಯೇ, ನಾವು ನಿಮ್ಮನ್ನು ಪ್ರೋತಾಹಿಸಲು ನಿಮಗಾಗಿ CITIZEN JOURNALISM ಕಾಲಂಅನ್ನು ತೆರೆದಿದ್ದೇವೆ. ನಿಮ್ಮ ಬರಹಗಳಿಗೆ ಸ್ವಾಗತ : https://suddinow.com/upload-news-yourself/

About Author

Priya Rai

ನಮಸ್ಕಾರ, ಸುದ್ದಿನೌ ಪ್ರಾರಂಭವಾಗಿ ೪ ವರ್ಷಗಳು ಕಳೆದಿವೆ, ನಮ್ಮ ಜೊತೆಗಿರುವ ನಿಮ್ಮೆಲ್ಲರಿಗೂ ಧನ್ಯವಾದಗಳು ನಿಮ್ಮ ವಿಶ್ವಾಸಿ, ಪ್ರಿಯ ರಾಯ್

Leave A Reply