ಬೆಂಗಳೂರು – ಅಸಂಘಟಿತ ಕಾರ್ಮಿಕರಲ್ಲಿ ರಾಜ್ಯ ದೇವಾಂಗ ಸಮಾಜವೂ ಒಂದು , ರಾಜ್ಯದಲ್ಲಿ 30 ಲಕ್ಷಕ್ಕೂ ಅಧಿಕವಾಗಿರುವ  ದೇವಾಂಗ ಸಮಾಜದ ಅಭಿವೃದ್ಧಿಗೆ ಸರ್ಕಾರ ಬದ್ದವಾಗಬೇಕಿದೆ. ಹೀಗಾಗಿ ಕಳೆದ ಒಂದು ತಿಂಗಳಿಂದ ರಾಜ್ಯದ ನಾನಾ ಭಾಗದಲ್ಲಿ ‌ಹರಿದು ಹಂಚಿ ಹೋಗಿರುವ ದೇವಾಂಗ ಸಮಾಜದ ಭಾಂದವರು ಒಂದು ಕಡೆ ಸೇರಿ ದೇವಾಂಗ ಅಭಿವೃದ್ಧಿ ನಿಗಮ ಸ್ಥಾಪನೆ ಮಾಡುವಂತೆ ಒತ್ತಾಯ ಮಾಡುತಿದ್ದಾರೆ‌ ಈಗ ಇದಕ್ಕೆ ಬೆಳಗಾವಿ ಗ್ರಾಮೀಣ  ಬೆಳಗಾವಿ ಗ್ರಾಮೀಣ ವಿಧಾನಸಭಾ ಕ್ಷೇತ್ರದ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಮನವಿ ಪತ್ರ ಸಲ್ಲಿಸುವ ಮೂಲಕ ಸಿ ಎಮ್  ಅವರನ್ನು ಆಗ್ರಹಿಸಿದ್ದಾರೆ.

ಈ ಕುರಿತು ಸೋಮವಾರ ಯಡಿಯೂರಪ್ಪ ಅವರಿಗೆ ಲಕ್ಷ್ಮಿ ಹೆಬ್ಬಾಳಕರ್ ಮನವಿಯೊಂದನ್ನು ಸಲ್ಲಿಸಿದ್ದಾರೆ. ರಾಜ್ಯದಲ್ಲಿ ಸುಮಾರು 30 ಲಕ್ಷಕ್ಕಿಂತಲೂ ಹೆಚ್ಚಿನ ದೇವಾಂಗ ಜನಾಂಗದವರು ವಾಸಿಸುತ್ತಿದ್ದಾರೆ. ಬೆಳಗಾವಿ ಗ್ರಾಮೀಣ ಮತಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಸುಳೇಭಾವಿ ಗ್ರಾಮದಲ್ಲಿ ಅಧಿಕವಾಗಿ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿಯೂ, ಬೆಳಗಾವಿ ನಗರದಲ್ಲಿಯೂ ಸಾಕಷ್ಟು ಸಂಖ್ಯೆಯಲ್ಲಿದ್ದಾರೆ. ಈ ಸಮಾಜವು ಆರ್ಥಿಕವಾಗಿ ಮತ್ತು ಶೈಕ್ಷಣಿಕವಾಗಿ ತೀರಾ ಹಿಂದುಳಿದಿದೆ. ಕೊರೋನಾ ಸಂದರ್ಭದಲ್ಲಿ ಮತ್ತು ಕಳೆದ 2 ವರ್ಷ ಅಪ್ಪಳಿಸಿದ ಪ್ರವಾಹದಿಂದಾಗಿ ಜನಾಂಗದ ಸ್ಥಿತಿ ಬಾಣಲೆಯಿಂದ ಬೆಂಕಿಗೆ ಬಿದ್ದಂತಾಗಿದೆ. ಉದ್ಯೋಗ ಮಾಡಲೂ ಆಗದೆ, ನೇಯ್ದ ಬಟ್ಟೆಗಳಿಗೆ ಮಾರುಕಟ್ಟೆಯೂ ಸಿಗದೆ ಪರದಾಡುವಂತಾಗಿದೆ. ಹಾಗಾಗಿ ಸರಕಾರ ಅವರ ನೆರವಿಗೆ ತಕ್ಷಣ ಬರಬೇಕು ಎಂದು ಹೆಬ್ಬಾಳಕರ್ ಕೋರಿದ್ದಾರೆ…

About Author

Priya Bot

Leave A Reply