ಬೆಂಗಳೂರು – ಯುವತಿಯೊಬ್ಬಳ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಪಟ್ಟಂತೆ ಈಗಾಗಲೇ ಇಬ್ಬರು ಮಹಿಳೆಯರು ಸೇರಿದಂತೆ ಆರು ಜನರನ್ನು ಬಂಧಿಸಲಾಗಿದೆ. ಈ ಪ್ರಕರಣದಲ್ಲಿ ಭಾಗಿಯಾಗಿರುವ ಇನ್ನೂ ಕೆಲ ಆರೋಪಿಗಳ ಬಂಧನಕ್ಕೆ ಬಲೆ ಬೀಸಲಾಗಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದರು.

ಶುಕ್ರವಾರ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಯುವತಿ ಮೇಲಿನ ಸಾಮೂಹಿಕ ಅತ್ಯಾಚಾರ ವಿಡಿಯೋ ವೈರಲ್ ಆದ ಕೆಲವೇ ಗಂಟೆಗಳಲ್ಲಿ ಬೆಂಗಳೂರಿನ ಪೊಲೀಸರು ಈ ಪ್ರಕರಣವನ್ನು ಬೇಧಿಸಿದ್ದಾರೆ. ಆರೋಪಿಗಳನ್ನು ಬಂಧಿಸಿದ್ದಾರೆ. ಅದಕ್ಕಾಗಿ ಅವರನ್ನು ಅಭಿನಂದಿಸುತ್ತೇನೆ ಎಂದರು.

ಅಪರಾಧ ಎಸಗಿದವರು ಈಶಾನ್ಯ ರಾಜ್ಯಗಳಿಂದ ಬಂದವರು ಎಂಬ ಮಾಹಿತಿ ಹಿನ್ನೆಲೆಯಲ್ಲಿ ಕೇಂದ್ರ ಸಚಿವ ಕಿರಣ್ ರಿಜಿಜು ಟ್ವೀಟ್ ಮಾಡಿದ್ದರು. ವೈರಲ್ ಆದ ವಿಡಿಯೋ ಆಧಾರವಾಗಿಟ್ಟುಕೊಂಡು  ಬೆಂಗಳೂರು ಪೊಲೀಸರು ವಿಚಾರಣೆ ಆರಂಭಿಸಿದರು. ಈ ಪ್ರಕರಣವನ್ನು ಕೆಲವೇ ಗಂಟೆಗಳಲ್ಲಿ ಭೇದಿಸಿದ್ದಾರೆ.  ಪ್ರಕರಣದಲ್ಲಿ ನಾಲ್ವರು ಯುವಕರು ಮತ್ತು ಇಬ್ಬರು ಮಹಿಳೆಯರು ಭಾಗಿಯಾಗಿದ್ದಾರೆ. ಅವರು ನೀಡಿರುವ ಹೇಳಿಕೆ ಪ್ರಕಾರ ಇನ್ನೂ ಕೆಲ ಆರೋಪಿಗಳು ಕೇರಳದಲ್ಲಿ ಇದ್ದಾರೆ.  ಅವರನ್ನು ಬಂಧಿಸಲು ಕ್ರಮ ಕೈಗೊಳ್ಳಲಾಗಿದೆ. ರಾಮಮೂರ್ತಿ ನಗರ ಪೊಲೀಸ್ ಠಾಣೆಯಲ್ಲಿ ಈ ಕುರಿತು  ಪ್ರಕರಣ ದಾಖಲಾಗಿದೆ.  ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂಥ್ ಅವರು ಈ ಪ್ರಕರಣವನ್ನು  ಮೇಲುಸ್ತುವಾರಿ ಮಾಡುತ್ತಿದ್ದಾರೆ ಎಂದು ಬೊಮ್ಮಾಯಿ ತಿಳಿಸಿದರು.

ವಿಶೇಷವಾದ ಸುದ್ದಿಗಳಿಗಾಗಿ ನಮ್ಮ ಹೊಸದಾದ SUDDINOW APP ಡೌನ್ಲೋಡ್ ಮಾಡಿಕೊಳ್ಳಿ : https://play.google.com/store/apps/details?id=com.webapp.Suddinow

ಬರವಣಿಗೆ ಬಗ್ಗೆ ನಿಮಗೆ ಆಸಕ್ತಿ ಇದಿಯೇ, ನಾವು ನಿಮ್ಮನ್ನು ಪ್ರೋತಾಹಿಸಲು ನಿಮಗಾಗಿ CITIZEN JOURNALISM ಕಾಲಂಅನ್ನು ತೆರೆದಿದ್ದೇವೆ. ನಿಮ್ಮ ಬರಹಗಳಿಗೆ ಸ್ವಾಗತ : https://suddinow.com/upload-news-yourself/

About Author

Priya Rai

ನಮಸ್ಕಾರ, ಸುದ್ದಿನೌ ಪ್ರಾರಂಭವಾಗಿ ೪ ವರ್ಷಗಳು ಕಳೆದಿವೆ, ನಮ್ಮ ಜೊತೆಗಿರುವ ನಿಮ್ಮೆಲ್ಲರಿಗೂ ಧನ್ಯವಾದಗಳು ನಿಮ್ಮ ವಿಶ್ವಾಸಿ, ಪ್ರಿಯ ರಾಯ್

Leave A Reply