ಪೋಲಿಸರ ಮೇಲೆ ಹಲ್ಲೆ ನಡೆಸಿದ ಆರೋಪಿಗಳ ಬಂಧನ

0

ಮಂಗಳೂರು

ಮಂಗಳೂರಿನ ಉರ್ವ ಪೊಲೀಸ್ ಠಾಣೆಯ ಇಬ್ಬರು ಪೊಲೀಸ್ ಸಿಬ್ಬಂದಿಗೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಜೋಹನ್ ಸಿಕ್ವೇರಾ, ನೊಯೆಲ್ ಸಿಕ್ವೇರಾ, ಬಂಧಿತರು. ಇವರನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಬಂಧಿತರಿಗೆ ಜುಲೈ 29ರವರೆಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಇನ್ನೋರ್ವ ಬಾಲಾರೋಪಿಯಾಗಿದ್ದು, ಆತನನ್ನು ಬಾಲಾಪರಾಧ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.

ಬಂಧಿತ ಆರೋಪಿಗಳ ಪೈಕಿ ಮೊದಲನೇ ಆರೋಪಿ ವಿರುದ್ಧ ಎರಡು ಕೇಸು ದಾಖಲಾಗಿತ್ತು. ಇನ್ನೋರ್ವ ಆರೋಪಿ ರೌಡಿಶೀಟರ್ ಆಗಿದ್ದಾನೆ. ಮೇ ತಿಂಗಳ ಕೊನೆಯಲ್ಲಿ ದಾಖಲಾದ ಎರಡು ಪ್ರಕರಣಗಳಿಗೆ ಸಂಬಂಧಿಸಿ ಕೇಸು ವಾಪಸ್ ಪಡೆದುಕೊಳ್ಳುವುದರ ಕುರಿತು ಇನ್‌ಸ್ಪೆಕ್ಟರ್ ಕೊಠಡಿಯಲ್ಲಿ ಮಾತುಕತೆ ನಡೆಯುತ್ತಿತ್ತು.

ಇದನ್ನು ಆರೋಪಿಗಳು ಮೊಬೈಲ್‌ನಲ್ಲಿ ಶೂಟಿಂಗ್ ಮಾಡಿದ್ದಾರೆ. ಇದನ್ನು ಪೊಲೀಸ್ ಸಿಬ್ಬಂದಿ ಪ್ರಶ್ನಿಸಿದಾಗ ಆರೋಪಿಗಳು ಅನುಚಿತವಾಗಿ ವರ್ತಿಸಿದ್ದರು. ಮೊಬೈಲ್ ಎಳೆದುಕೊಳ್ಳುವಾಗ ತಳ್ಳಾಟವಾಗಿ ಇಬ್ಬರು ಪೊಲೀಸರು ಗಾಯಗೊಂಡಿದ್ದರು. ಈ ಕುರಿತು ಉರ್ವ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ವಿಶೇಷವಾದ ಸುದ್ದಿಗಳಿಗಾಗಿ ನಮ್ಮ ಹೊಸದಾದ SUDDINOW APP ಡೌನ್ಲೋಡ್ ಮಾಡಿಕೊಳ್ಳಿ : https://play.google.com/store/apps/details?id=com.webapp.Suddinow

ಬರವಣಿಗೆ ಬಗ್ಗೆ ನಿಮಗೆ ಆಸಕ್ತಿ ಇದಿಯೇ, ನಾವು ನಿಮ್ಮನ್ನು ಪ್ರೋತಾಹಿಸಲು ನಿಮಗಾಗಿ CITIZEN JOURNALISM ಕಾಲಂಅನ್ನು ತೆರೆದಿದ್ದೇವೆ. ನಿಮ್ಮ ಬರಹಗಳಿಗೆ ಸ್ವಾಗತ : https://suddinow.com/upload-news-yourself/

About Author

Priya Rai

ನಮಸ್ಕಾರ, ಸುದ್ದಿನೌ ಪ್ರಾರಂಭವಾಗಿ ೪ ವರ್ಷಗಳು ಕಳೆದಿವೆ, ನಮ್ಮ ಜೊತೆಗಿರುವ ನಿಮ್ಮೆಲ್ಲರಿಗೂ ಧನ್ಯವಾದಗಳು ನಿಮ್ಮ ವಿಶ್ವಾಸಿ, ಪ್ರಿಯ ರಾಯ್

Leave A Reply