ಮಂಗಳೂರು- ಅಸೌಖ್ಯದಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ನಗರ ಠಾಣೆಯ ಎಎಸ್ಸೈ ಹೃದಯಾಘಾತದಿಂದ ನಿಧನರಾಗಿದ್ದಾರೆ. ಮಂಚಿ ನಿವಾಸಿ, ಬಂಟ್ವಾಳ ನಗರ ಠಾಣೆ ಎಎಸ್ಸೈ ಜಯರಾಮ ರೈ (58) ಅವರು ಇಂದು ಬೆಳಗ್ಗೆ ನಿಧನರಾಗಿದ್ದಾರೆ.

ಅವರು ಕೆಲವು ದಿನಗಳಿಂದ ಬೆನ್ನು ನೋವು ಸಮಸ್ಯೆಯಿಂದ ಬಳಲುತ್ತಿದ್ದು, ವಾರದ ಹಿಂದೆ ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಅವರು ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ಕರ್ತವ್ಯ ನಿರ್ವಹಿಸಿದ್ದರು. ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಹಲವಾರು ವರ್ಷಗಳಿಂದ ಅಪರಾಧ ವಿಭಾಗದಲ್ಲಿ ಕೆಲಸ ಮಾಡಿದ್ದಾರೆ. ಇತ್ತೀಚಿನ ವರ್ಷಗಳಿಂದ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಎಎಸ್ಸೈ ಅಗಿ ಕರ್ತವ್ಯ ಮಾಡುತ್ತಿದ್ದರು. ಅವರು ಪತ್ನಿ , ಪುತ್ರ, ಪುತ್ರಿ ಹಾಗೂ ಅಪಾರ ಬಂಧುಬಳಗವನ್ನು ಅಗಲಿದ್ದಾರೆ.

ವಿಶೇಷವಾದ ಸುದ್ದಿಗಳಿಗಾಗಿ ನಮ್ಮ ಹೊಸದಾದ SUDDINOW APP ಡೌನ್ಲೋಡ್ ಮಾಡಿಕೊಳ್ಳಿ : https://play.google.com/store/apps/details?id=com.webapp.Suddinow

ಬರವಣಿಗೆ ಬಗ್ಗೆ ನಿಮಗೆ ಆಸಕ್ತಿ ಇದಿಯೇ, ನಾವು ನಿಮ್ಮನ್ನು ಪ್ರೋತಾಹಿಸಲು ನಿಮಗಾಗಿ CITIZEN JOURNALISM ಕಾಲಂಅನ್ನು ತೆರೆದಿದ್ದೇವೆ. ನಿಮ್ಮ ಬರಹಗಳಿಗೆ ಸ್ವಾಗತ : https://suddinow.com/upload-news-yourself/

About Author

Priya Rai

ನಮಸ್ಕಾರ, ಸುದ್ದಿನೌ ಪ್ರಾರಂಭವಾಗಿ ೪ ವರ್ಷಗಳು ಕಳೆದಿವೆ, ನಮ್ಮ ಜೊತೆಗಿರುವ ನಿಮ್ಮೆಲ್ಲರಿಗೂ ಧನ್ಯವಾದಗಳು ನಿಮ್ಮ ವಿಶ್ವಾಸಿ, ಪ್ರಿಯ ರಾಯ್

Leave A Reply