ವೈದ್ಯ ವಿದ್ಯಾರ್ಥಿಗಳ ಮೇಲೆ ಹಲ್ಲೆ

0

ರಾಯಚೂರು

ರಿಮ್ಸ್ ಆಸ್ಪತ್ರೆಯಲ್ಲಿ ವೈದ್ಯರ ಮೇಲೆ ನಡೆದಿರುವ ಹಲ್ಲೆಯನ್ನ ಖಂಡಿಸಿ ವೈದ್ಯ ವಿದ್ಯಾರ್ಥಿಗಳು ಆಸ್ಪತ್ರೆಯ ಮುಂದೆ ಪ್ರತಿಭಟನೆ ನಡೆಸುತ್ತಿದ್ದಾರೆ. ರಾಯಚೂರು ನಗರದ ಹೊರವಲಯದಲ್ಲಿರುವ ರಿಮ್ಸ್ ಆಸ್ಪತ್ರೆಯಲ್ಲಿ ನಿನ್ನೆ ತಡರಾತ್ರಿ ರೋಗಿ ಸಂಬಂಧಿಕರು ವೈದ್ಯ ವಿದ್ಯಾರ್ಥಿ(ಇಂಟರ್ನಿ) ಇಬ್ಬರ ಮೇಲೆ ಹಲ್ಲೆ ನಡೆಸಿದ್ದು, ಇದರಿಂದ ಇಬ್ಬರು ಗಾಯಗೊಂಡಿದ್ದಾರೆ.

ಹೀಗಾಗಿ ಹಲ್ಲೆಯನ್ನು ಖಂಡಿಸಿ ವಿದ್ಯಾರ್ಥಿಗಳು ಆಸ್ಪತ್ರೆಯ ಮುಂಭಾಗದಲ್ಲಿ ಪ್ರತಿಭಟನೆ ಮಾಡಿ, ಹಲ್ಲೆ ಮಾಡಿದವರ ಮೇಲೆ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದರು. ಇನ್ನೂ ನಿನ್ನೆ ರಾತ್ರಿ ವೇಳೆ ನರಸಿಂಹಲು ಚಿಕಿತ್ಸೆ ಕರೆ ತರಲಾಗಿತ್ತು. ಆದ್ರೆ ಸರಿಯಾದ ಚಿಕಿತ್ಸೆ ನೀಡಿಲ್ಲ ಎಂದು ಆರೋಪಿಸಿ ರೋಗಿಯ ಹಿಂದೆ ಬಂದವರು ಹಲ್ಲೆ ನಡೆಸಿದ್ದರೆ ಎನ್ನಲಾಗುತ್ತದೆ.

ಹಲ್ಲೆಯಿಂದ ವೈದ್ಯ ವಿದ್ಯಾರ್ಥಿಗಳಾದ ಸಂತೋಷ್ ಹಾಗೂ ರೋಹನ್ ಎಂಬುವವರಿಗೆ ಗಾಯಗೊಂಡಿದ್ದು, ಪ್ರತಿಭಟನೆ ಸ್ಥಳಕ್ಕೆ ರಿಮ್ಸ್ ಡೀನ್ ಆಗಮಿಸಿಬೇಕೆಂದು ವಿದ್ಯಾರ್ಥಿಗಳು ಪಟ್ಟು ಹಿಡಿದ್ದರೆ. ಸ್ಥಳಕ್ಕೆ ಆಗಮಿಸಿದ ರಿಮ್ಸ್ ಡೀನ್, ಪ್ರತಿಭಟನಾಕಾರರ ಮನವೊಲಿಸಿ, ಅವರ ಮೇಲೆ ಪ್ರಕರಣ ದಾಖಲಿಸುವುದಾಗಿ ತಿಳಿಸಿದರು. ಮಾರ್ಕೆಟ್ ಯಾರ್ಡ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ವಿಶೇಷವಾದ ಸುದ್ದಿಗಳಿಗಾಗಿ ನಮ್ಮ ಹೊಸದಾದ SUDDINOW APP ಡೌನ್ಲೋಡ್ ಮಾಡಿಕೊಳ್ಳಿ : https://play.google.com/store/apps/details?id=com.webapp.Suddinow

ಬರವಣಿಗೆ ಬಗ್ಗೆ ನಿಮಗೆ ಆಸಕ್ತಿ ಇದಿಯೇ, ನಾವು ನಿಮ್ಮನ್ನು ಪ್ರೋತಾಹಿಸಲು ನಿಮಗಾಗಿ CITIZEN JOURNALISM ಕಾಲಂಅನ್ನು ತೆರೆದಿದ್ದೇವೆ. ನಿಮ್ಮ ಬರಹಗಳಿಗೆ ಸ್ವಾಗತ : https://suddinow.com/upload-news-yourself/

About Author

Priya Rai

ನಮಸ್ಕಾರ, ಸುದ್ದಿನೌ ಪ್ರಾರಂಭವಾಗಿ ೪ ವರ್ಷಗಳು ಕಳೆದಿವೆ, ನಮ್ಮ ಜೊತೆಗಿರುವ ನಿಮ್ಮೆಲ್ಲರಿಗೂ ಧನ್ಯವಾದಗಳು ನಿಮ್ಮ ವಿಶ್ವಾಸಿ, ಪ್ರಿಯ ರಾಯ್

Leave A Reply