ಮಾಜಿ ಶಾಸಕರ ಕಾರ್ ಚಾಲಕನಿಂದ ದರೋಡೆಗೆ ಯತ್ನ

0

ಮಂಗಳೂರು  – ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದ್ರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಚಿನ್ನ ಹೊಂದಿದ್ದ ವ್ಯಕ್ತಿಯನ್ನು ಅಪಹರಿಸಿ ದರೋಡೆಗೆ ಯತ್ನಿಸಿದ ಪ್ರಕರಣಕ್ಕೆ ಸಂಬಂಧಿಸಿ ಮಂಗಳೂರು ಸಿಸಿಬಿ ಮತ್ತು ಮೂಡುಬಿದಿರೆ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ 11 ಮಂದಿ ಅಂತಾರಾಜ್ಯ ದರೋಡೆಕೋರರನ್ನು ಬಂಧಿಸಿದ್ದಾರೆ.

ಈ‌ ಕುರಿತು ಮಾಹಿತಿ ನೀಡಿರುವ ಮಂಗಳೂರು ಪೊಲೀಸ್ ಆಯುಕ್ತ ಎನ್. ಶಶಿಕುಮಾರ್,  ಜೋಕಟ್ಟೆ ತೋಕೂರು ನಿವಾಸಿಗಳಾದ ಅಬ್ದುಲ್ ಸಲಾಂ ಯಾನೆ ಪಟೌಡಿ ಸಲಾಂ, ಮುಹಮ್ಮದ್ ಶಾರೂಕ್, ಬೆಂಗಳೂರು ಜೆಎಚ್‌ಬಿಸಿಎಸ್ ಲೇಔಟ್‌ನ ಸಯ್ಯದ್ ಹೈದರಲಿ, ಬೆಂಗಳೂರು ಜೆಪಿ ನಗರದ ಆಸಿಫ್ ಅಲಿ, ಮುಂಬೈನವರಾದ ಶೇಖ್ ಸಾಜಿದ್ ಹುಸೇನ್, ಅಬ್ದುಲ್ಲಾ ಶೇಖ್, ಶಾಬಾಸ್ ಹುಸೇನ್, ಥಾಣೆಯ ಮುಶಾಹಿದ್ ಅನ್ಸಾರಿ, ಮುಸ್ತಾಕ್ ಖುರೇಷಿ, ಮುಹಮ್ಮದ್ ಮಹಝ್ ಮತ್ತು ಮುಹಮ್ಮದ್ ಆದಿಲ್ ಬಂಧಿತ ಆರೋಪಿಗಳಾಗಿದ್ದಾರೆ ಎಂದರು.‌ ಬಂಧಿತರಲ್ಲಿ ಮಾಜಿ ಶಾಸಕರೊಬ್ಬರ ಮಾಜಿ ಕಾರು ಚಾಲಕನೂ ಸೇರಿದ್ದಾನೆ ಎಂದು ತಿಳಿಸಿದ್ದಾರೆ. ಈ ಆರೋಪಿಗಳಿಂದ ಎರಡು ಕಾರು, ಐದು ತಲವಾರುಗಳು, 10 ಮೊಬೈಲ್‌ ಫೋನ್ ಗಳು ಹಾಗೂ ದರೋಡೆ ಮಾಡಲಾದ 440 ಗ್ರಾಂ ಚಿನ್ನದಲ್ಲಿ 300 ಗ್ರಾಂ ಚಿನ್ನವನ್ನು ವಶಪಡಿಸಿಕೊಂಡಿರುವುದಾಗಿ ಅವರು ಮಾಹಿತಿ ನೀಡಿದ್ದಾರೆ.

ಮೇ ತಿಂಗಳ ಮೊದಲ ವಾರದಲ್ಲಿ ಮುಂಬೈಯ ರಹ್ಮಾನ್ ಶೇಖ್ ಎಂಬವರು ಅವರ ಸಂಬಧಿಕರಾದ ಬೆಂಗಳೂರಿನ ಹೈದರಲಿ ಎಂಬವರಿಗೆ ನೀಡುವಂತೆ ಹೇಳಿ ಮೂಡುಬಿದಿರೆ ನಿವಾಸಿ ವಕಾರ್ ಯೂನುಸ್ ಎಂಬವರ ಮೂಲಕ 440 ಗ್ರಾಂ ಚಿನ್ನದ ಪಾರ್ಸೆಲ್ ಕಳುಹಿಸಿದ್ದರು. ಈ ಬಗ್ಗೆ ಮಾಹಿತಿ ಪಡೆದ ವಕಾರ್ ಯೂನುಸ್ ಸ್ನೇಹಿತ, ಬೆಳುವಾಯಿ ನಿವಾಸಿ ಮಹಝ್ ಆತನನ್ನು ನೇರವಾಗಿ ಮೂಡುಬಿದಿರೆಯ ಬೆಳುವಾಯಿಗೆ ಬರುವಂತೆ ತಿಳಿಸಿದ್ದ.

ಅದರಂತೆ ಮೇ 6ರಂದು ಮಹಝ್ ಉಪ್ಪಳದ ಆದಿಲ್ ಹಾಗೂ ಆತನ ಇತರ ಸ್ನೇಹಿತರು ವಕಾರ್ ಯೂನುಸ್‌ನನ್ನು ಮೂಡುಬಿದಿರೆಯ ಪುಚ್ಚೆಮೊಗರು ಎಂಬಲ್ಲಿ ಭೇಟಿಯಾಗಿದ್ದು, ಅಲ್ಲಿಂದ ಯೂನುಸ್ ರನ್ನು ತಾವು ಬಂದಿದ್ದ ಕಾರಿನಲ್ಲಿ ಅಪಹರಿಸಿ ಕಾಸರಗೋಡು ಜಿಲ್ಲೆಯ ಉಪ್ಪಳಕ್ಕೆ ಕರೆದೊಯ್ದಿದ್ದಾರೆ. ಅಲ್ಲಿ ಯೂನುಸ್ ರಿಂದ ಚಿನ್ನವನ್ನು ದರೋಡೆ ಮಾಡಿದ್ದಾರೆ.

ವಿಶೇಷವಾದ ಸುದ್ದಿಗಳಿಗಾಗಿ ನಮ್ಮ ಹೊಸದಾದ SUDDINOW APP ಡೌನ್ಲೋಡ್ ಮಾಡಿಕೊಳ್ಳಿ : https://play.google.com/store/apps/details?id=com.webapp.Suddinow

ಬರವಣಿಗೆ ಬಗ್ಗೆ ನಿಮಗೆ ಆಸಕ್ತಿ ಇದಿಯೇ, ನಾವು ನಿಮ್ಮನ್ನು ಪ್ರೋತಾಹಿಸಲು ನಿಮಗಾಗಿ CITIZEN JOURNALISM ಕಾಲಂಅನ್ನು ತೆರೆದಿದ್ದೇವೆ. ನಿಮ್ಮ ಬರಹಗಳಿಗೆ ಸ್ವಾಗತ : https://suddinow.com/upload-news-yourself/

About Author

Priya Rai

ನಮಸ್ಕಾರ, ಸುದ್ದಿನೌ ಪ್ರಾರಂಭವಾಗಿ ೪ ವರ್ಷಗಳು ಕಳೆದಿವೆ, ನಮ್ಮ ಜೊತೆಗಿರುವ ನಿಮ್ಮೆಲ್ಲರಿಗೂ ಧನ್ಯವಾದಗಳು ನಿಮ್ಮ ವಿಶ್ವಾಸಿ, ಪ್ರಿಯ ರಾಯ್

Leave A Reply