‘ಬ್ಯಾರಿ ಅರ್ಚೊ ಮಸಾಲೆ 2021’ ಬ್ಯಾರಿ ಸಂಗೀತ ಕಾರ್ಯಕ್ರಮ

0

ಮಂಗಳೂರು – ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ವತಿಯಿಂದ ಜೂನ್ 20 ರ ಆದಿತ್ಯವಾರದಂದು ರಾತ್ರಿ  7 ಗಂಟೆಯಿಂದ 10 ಗಂಟೆಯವರೆಗೆ  ಬ್ಯಾರಿ ಸಾಹಿತ್ಯ ಮತ್ತು ಸಾಂಸ್ಕೃತಿಕ ಲೋಕದ ದಿಗ್ಗಜರಾದ ದಿವಂಗತ  ಇಬ್ರಾಹಿಂ ತಣ್ಣೀರುಬಾವಿ ಇವರ ನೆನಪಿಗಾಗಿ ‘ಬ್ಯಾರಿ ಅರ್ಚೊ ಮಸಾಲೆ 2021’ ಬ್ಯಾರಿ ಸಂಗೀತ ಲೈವ್ ಕಾರ್ಯಕ್ರಮವನ್ನು  ಅಕಾಡೆಮಿಯ ಯೂಟ್ಯೂಬ್ ಮತ್ತು ಫೇಸ್ ಬುಕ್ ಚಾನೆಲ್ ಮುಖಾಂತರ ಪ್ರಸಾರ ಮಾಡಲಿದೆ. ಬ್ಯಾರಿ ಭಾಷೆಯ ಪ್ರಸಿದ್ದ ಗಾಯಕರಾದ  ಅನಿತಾ ಡಿಸೋಜಾ, ಮುಹಮ್ಮದ್ ಇಕ್ಬಾಲ್, ಹುಸೈನ್ ಕಾಟಿಪಳ್ಳ, ಅಶ್ರಫ್ ಅಪೋಲೊ, ಶರೀಫ್ ಪರ್ಲಿಯಾ, ಮತ್ತು ಫೈಝ್ ಕಾಟಿಪಳ್ಳ ಇವರು ಭಾಗವಹಿಸಲಿದ್ದಾರೆ. ಲಾಕ್ ಡೌನ್ ಆದ ಹಿನ್ನಲೆಯಲ್ಲಿ ಸಾಂಸ್ಕೃತಿಕ ಕಾರ್ಯಕ್ರಮವನ್ನು ಸಂಗೀತ ಪ್ರಿಯರು ಬಯಸುತ್ತಿದ್ದು,

ಈ ಬಗ್ಗೆ ನಿರಂತರವಾಗಿ ಬೇಡಿಕೆಗಳು ಬಂದ ಹಿನ್ನೆಲೆಯಲ್ಲಿ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು  ಅಕಾಡೆಮಿ ಅಧ್ಯಕ್ಷರಾದ ರಹೀಂ ಉಚ್ಚಿಲ್ ರವರು ತಿಳಿಸಿದ್ದಾರೆ.  ಕಾರ್ಯಕ್ರಮದ ಸದಸ್ಯ ಸಂಚಾಲಕರಾಗಿ ಅಕಾಡೆಮಿಯ ಸದಸ್ಯರಾದ ಶಂಶೀರ್ ಬುಡೋಳಿ ಇವರು ಕಾರ್ಯನಿರ್ವಹಿಸಲಿದ್ದಾರೆ. ಪ್ರತಿಯೊಬ್ಬರು ಈ ಕಾರ್ಯಕ್ರಮವನ್ನು ಮನೆಯಲ್ಲಿ ಕುಳಿತು ವೀಕ್ಷಿಸಬೇಕಾಗಿ ಅಕಾಡೆಮಿ ರಿಜಿಸ್ಟ್ರಾರ್ ಪೂರ್ಣಿಮಾ ರವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಶೇಷವಾದ ಸುದ್ದಿಗಳಿಗಾಗಿ ನಮ್ಮ ಹೊಸದಾದ SUDDINOW APP ಡೌನ್ಲೋಡ್ ಮಾಡಿಕೊಳ್ಳಿ : https://play.google.com/store/apps/details?id=com.webapp.Suddinow

ಬರವಣಿಗೆ ಬಗ್ಗೆ ನಿಮಗೆ ಆಸಕ್ತಿ ಇದಿಯೇ, ನಾವು ನಿಮ್ಮನ್ನು ಪ್ರೋತಾಹಿಸಲು ನಿಮಗಾಗಿ CITIZEN JOURNALISM ಕಾಲಂಅನ್ನು ತೆರೆದಿದ್ದೇವೆ. ನಿಮ್ಮ ಬರಹಗಳಿಗೆ ಸ್ವಾಗತ : https://suddinow.com/upload-news-yourself/

About Author

Priya Rai

ನಮಸ್ಕಾರ, ಸುದ್ದಿನೌ ಪ್ರಾರಂಭವಾಗಿ ೪ ವರ್ಷಗಳು ಕಳೆದಿವೆ, ನಮ್ಮ ಜೊತೆಗಿರುವ ನಿಮ್ಮೆಲ್ಲರಿಗೂ ಧನ್ಯವಾದಗಳು ನಿಮ್ಮ ವಿಶ್ವಾಸಿ, ಪ್ರಿಯ ರಾಯ್

Leave A Reply