ಧಾರವಾಡದಲ್ಲಿ ಸಿಎಂ ಪರ ಅಖಿಲ ಭಾರತ ವೀರಶೈವ ಮಹಾಸಭಾ ಬ್ಯಾಟಿಂಗ್

0

ಧಾರವಾಡ

ರಾಜ್ಯದಲ್ಲಿ ಸಿಎಂ ಬಿಎಸ್ ವೈ ಅವರು ಉತ್ತಮವಾದ ಆಡಳಿತವನ್ನು ನೀಡುತ್ತಿದ್ದಾರೆ. ಕೊರೊನಾ, ಬರಗಾಲ ಸೇರಿದಂತೆ ಉತ್ತರ ಕರ್ನಾಟಕ ಪ್ರವಾಹ ಉಂಟಾದ ಸಂದರ್ಭದಲ್ಲಿ ಸಮರ್ಪಕವಾಗಿ ಕಾರ್ಯ ನಿರ್ವಹಿಸಿದ್ದಾರೆ. ಈಗ ಅವರನ್ನು ಬಿಜೆಪಿ ಹೈಕಮಾಂಡ ಬದಲಾವಣೆ ಮಾಡಲು ಮುಂದಾಗಿದೆ ಎಂದು ಹೇಳಲಾಗುತ್ತಿದೆ. ಹಾಗಾಗಿ ಆ ನಿರ್ಧಾರವನ್ನು ಬಿಜೆಪಿ ವರಿಷ್ಠರು ಕೈ ಬೀಡಬೇಕು ಎಂದು ಅಖಿಲ ಭಾರತ ವೀರಶೈವ ಮಹಾಸಾಭಾ ಧಾರವಾಡ ಮುಖಂಡರಾದ ಗುರುರಾಜ್ ಹುಣಸಿಮರದ ಒತ್ತಾಯಿಸಿದರು.

ಈ ಕುರಿತು ಧಾರವಾಡ ಲಿಂಗಾಯತ ಭವನದಲ್ಲಿ ಮಾಧ್ಯಮಗೋಷ್ಠಿ ಏರ್ಪಡಿಸಿ ಮಾತನಾಡಿದ ಅವರು, ಕಾಣದ ಕೈಗಳ ಮಾತುಗಳನ್ನು ಕಟ್ಟಿಕೊಂಡ, ಒಂದು ವೇಳೆ ಬಿಜೆಪಿ ವರಿಷ್ಠರು ಲಿಂಗಾಯತ ಸಮಾಜದ ಬಿಎಸ್ ವೈ ವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗೆ ಇಳಿಸಿ ಲಿಂಗಾಯತರನ್ನು ಹತ್ತಿಕುವ ಪ್ರಯತ್ನ ಮಾಡಿದಲ್ಲಿ, ಮುಂದಿನ ದಿನಗಳಲ್ಲಿ ಬಿಜೆಪಿ ಪಕ್ಷಕ್ಕೆ ರಾಜ್ಯದ ಜನ ತಕ್ಕ ಪಾಠ ಕಲಿಸುತ್ತಾರೆ ಎಂದು ಎಚ್ಚರಿಕೆ ನೀಡಿದರು.

ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಹೆಚ್ಚು ಪ್ರಚಾರ ಪಡೆಯುತ್ತಿದ್ದು, ಈ ವಿಚಾರ ಕುರಿತು  ನಮ್ಮ ರಾಷ್ಟ್ರೀಯ ಅಧ್ಯಕ್ಷರು ಕೂಡಾ ನಾಯಕತ್ವ ಬದಲಾವಣೆ ಮಾಡದಂತೆ ಒತ್ತಾಯ ಮಾಡಿದ್ದಾರೆ. ವೀರಶೈವ ಲಿಂಗಾಯತ ಸಮಾಜದಿಂದ ಅತ್ಯುತ್ತಮ ನಾಯಕರಾಗಿ ಬಿಎಸ್ ವೈ ಅವರು ನಿಂತಿದ್ದಾರೆ. ರಾಜ್ಯದಲ್ಲಿ ಹಲವು ಸಂಕಷ್ಟಗಳ ನಡುವೆಯೂ ಉತ್ತಮ ಆಡಳಿತವನ್ನು ನೀಡಿದ್ದಾರೆ. ಅಂತಹ ನಾಯಕನನ್ನು ಏಕಾಏಕಿ ಬದಲಾವಣೆ ಮಾಡಿದೆ ಆದಲ್ಲಿ, ಬಿಜೆಪಿಯನ್ನು ರಾಜ್ಯದಲ್ಲಿ ಲಿಂಗಾಯತ ಸಮಾಜ ಕ್ಷಮಿಸುವುದಿಲ್ಲಾ ಎಂದು ಕೇಂದ್ರ ಬಿಜೆಪಿ ನಾಯಕರನ್ನು ಎಚ್ಚರಿಸಿದರು.

ವಿಶೇಷವಾದ ಸುದ್ದಿಗಳಿಗಾಗಿ ನಮ್ಮ ಹೊಸದಾದ SUDDINOW APP ಡೌನ್ಲೋಡ್ ಮಾಡಿಕೊಳ್ಳಿ : https://play.google.com/store/apps/details?id=com.webapp.Suddinow

ಬರವಣಿಗೆ ಬಗ್ಗೆ ನಿಮಗೆ ಆಸಕ್ತಿ ಇದಿಯೇ, ನಾವು ನಿಮ್ಮನ್ನು ಪ್ರೋತಾಹಿಸಲು ನಿಮಗಾಗಿ CITIZEN JOURNALISM ಕಾಲಂಅನ್ನು ತೆರೆದಿದ್ದೇವೆ. ನಿಮ್ಮ ಬರಹಗಳಿಗೆ ಸ್ವಾಗತ : https://suddinow.com/upload-news-yourself/

About Author

Priya Rai

ನಮಸ್ಕಾರ, ಸುದ್ದಿನೌ ಪ್ರಾರಂಭವಾಗಿ ೪ ವರ್ಷಗಳು ಕಳೆದಿವೆ, ನಮ್ಮ ಜೊತೆಗಿರುವ ನಿಮ್ಮೆಲ್ಲರಿಗೂ ಧನ್ಯವಾದಗಳು ನಿಮ್ಮ ವಿಶ್ವಾಸಿ, ಪ್ರಿಯ ರಾಯ್

Leave A Reply