ಬಿ.ಡಿ.ಸಿ.ಸಿ. ಬ್ಯಾಂಕ್ ನೌಕರರು ಮತ್ತು ಒಕ್ಕೂಟದಿಂದ ಸಹಾಯ ಹಸ್ತ

0

ವಿಜಯನಗರ – ಹೊಸಪೇಟೆ ಇವರು ಸಚಿವರೂ ಹಾಗೂ ಬಿ.ಡಿ.ಸಿ.ಸಿ. ಬ್ಯಾಂಕ್ ಅಧ್ಯಕ್ಷರೂ ಆದ ಶ್ರೀ ಆನಂದ್ ಸಿಂಗ್ ರವರ ಮಾರ್ಗದರ್ಶನದಲ್ಲಿ ಇಂದು “ನೆರವು” ಯೋಜನೆಯಡಿ 125  ಬಡ ಕುಟುಂಬಗಳಿಗೆ 2 ತಿಂಗಳಿಗೆ ಸಾಕಾಗುವಷ್ಟು “ಆಹಾರ ದಿನಸಿಗಳ ಕಿಟ್” ವಿತರಿಸಿದರು. ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಯುವ ಮುಖಂಡ ಸಂದೀಪ್ ಸಿಂಗ್ ರವರು ಕೋವಿಡ್ ಲಾಕ್ ಡೌನ್ ನಿಂದಾಗಿ ಸಂಕಷ್ಟದಲ್ಲಿರುವ ಬಡ ಕುಟುಂಬಗಳಿಗೆ ಬೃಹತ್ ಕಿಟ್ ನೀಡಿರುವುದು ನಿಜಕ್ಕೂ ಶ್ಲಾಘನೀಯ. ನಿಮ್ಮ ಸೇವೆ ಸಹಕಾರ ನಿರಂತರವಾಗಿರಲಿ ಎಂದರು. ಈ ಸಂದರ್ಭದಲ್ಲಿ ನಿರ್ದೇಶಕರಾದ ಎನ್.ಎಸ್. ಆನಂದ್, ಬ್ಯಾಂಕ್ ಸಿ.ಇ.ಒ. ಡಿ.ಶಂಕರ್ ಒಕ್ಕೂಟದ ಅಧ್ಯಕ್ಷ ಉಮಾಪತಿ, ಪದಾಧಿಕಾರಿಗಳು, ಬ್ಯಾಂಕ್ ನೌಕರರು ಸೇರಿದಂತೆ ಇತರರು ಉಪಸ್ಥಿತರಿದ್ದರು.

ವಿಶೇಷವಾದ ಸುದ್ದಿಗಳಿಗಾಗಿ ನಮ್ಮ ಹೊಸದಾದ SUDDINOW APP ಡೌನ್ಲೋಡ್ ಮಾಡಿಕೊಳ್ಳಿ : https://play.google.com/store/apps/details?id=com.webapp.Suddinow

ಬರವಣಿಗೆ ಬಗ್ಗೆ ನಿಮಗೆ ಆಸಕ್ತಿ ಇದಿಯೇ, ನಾವು ನಿಮ್ಮನ್ನು ಪ್ರೋತಾಹಿಸಲು ನಿಮಗಾಗಿ CITIZEN JOURNALISM ಕಾಲಂಅನ್ನು ತೆರೆದಿದ್ದೇವೆ. ನಿಮ್ಮ ಬರಹಗಳಿಗೆ ಸ್ವಾಗತ : https://suddinow.com/upload-news-yourself/

About Author

Priya Rai

ನಮಸ್ಕಾರ, ಸುದ್ದಿನೌ ಪ್ರಾರಂಭವಾಗಿ ೪ ವರ್ಷಗಳು ಕಳೆದಿವೆ, ನಮ್ಮ ಜೊತೆಗಿರುವ ನಿಮ್ಮೆಲ್ಲರಿಗೂ ಧನ್ಯವಾದಗಳು ನಿಮ್ಮ ವಿಶ್ವಾಸಿ, ಪ್ರಿಯ ರಾಯ್

Leave A Reply