ಇನ್ನು ಮುಂದೆ ಅಪರಾಧ ಮಾಡಿದರೆ ಹುಷಾರ್ , ಸಿಕ್ಕಿ ಬಿಳುವುದು ಗ್ಯಾರಂಟಿ…!

0

ಅಪರಾಧ ಕೃತ್ಯ ನಡೆದ ಸ್ಥಳವನ್ನು ವೈಜ್ಞಾನಿಕವಾಗಿ ಪರಿಶೀಲನೆ ನಡೆಸಿ,  ಸೂಕ್ಷ್ಮಾತಿಸೂಕ್ಷ್ಮ ಸಾಕ್ಷಾಧಾರಗಳನ್ನು ಸಂಗ್ರಹಿಸಿ ಅಪರಾಧವನ್ನು ಪತ್ತೆ ಮಾಡಲು  ದೇಶದಲ್ಲಿಯೇ ಮೊಟ್ಟ ಮೊದಲ  ನುರಿತ ಹಾಗೂ ಪರಿಣಿತರ ‘ಕೃತ್ಯ ಸ್ಥಳ ಪರಿಶೀಲನಾ ಅಧಿಕಾರಿ’ ಹುದ್ದೆಯನ್ನು ಸೃಷ್ಟಿ ಮಾಡಲಾಗಿದೆ.

ಮುಖ್ಯಮಂತ್ರಿಗಳಾದ ಸನ್ಮಾನ್ಯ ಶ್ರೀ  ಬಿ ಎಸ್ ಯಡಿಯೂರಪ್ಪ ಅವರು ನಾಳೆ ದಿನಾಂಕ 13 ಜುಲೈ 2021 ರಂದು ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ scene of crime officer  ಹುದ್ದೆಗಳ ಆದೇಶ ಪ್ರತಿಯನ್ನು ಕೊಡಲಿದ್ದಾರೆ.  ದೇಶದಲ್ಲಿಯೇ ಮೊಟ್ಟಮೊದಲ ಬಾರಿಗೆ ಕರ್ನಾಟಕದಲ್ಲಿ ಅಪರಾಧ ಕೃತ್ಯಗಳ ತನಿಖೆಗೆ ಈ ರೀತಿ ಹೊಸ ಪೊಲೀಸ್ ಹುದ್ದೆಗಳನ್ನು ಸೃಷ್ಟಿ ಮಾಡಲಾಗಿದೆ.

ಯಾವುದಾದರೂ ಒಂದು ಅಪರಾಧ ಕೃತ್ಯ ನಡೆದ ತತಕ್ಷಣ ಘಟನಾ ಸ್ಥಳಕ್ಕೆ ಹೋಗಿ ಇಲ್ಲಿರುವಂತಹ ಸಾಕ್ಷಾಧಾರಗಳನ್ನು ವೈಜ್ಞಾನಿಕವಾಗಿ, ಸುರಕ್ಷಿತವಾಗಿ ಸಂರಕ್ಷಣೆ ಮಾಡಲು ಈ ವಿಶೇಷ ಅಧಿಕಾರಿಗಳನ್ನು ನೇಮಿಸಲಾಗಿದೆ. ಇದುವರೆಗೆ ಈ ಕೆಲಸವನ್ನು ಸ್ಥಳೀಯ ಅಧಿಕಾರಿಗಳು ಮಾಡುತ್ತಿದ್ದರು. ಆದರೆ ಇನ್ನು ಮುಂದೆ ಮೊದಲ ಹಂತದಲ್ಲಿ ಗಂಭೀರ ಸ್ವರೂಪದ ಅಪರಾಧಗಳಲ್ಲಿ ವಿಧಿವಿಜ್ಞಾನ ಪ್ರಯೋಗಾಲಯ ದಲ್ಲಿ ವಿಶೇಷ ತರಬೇತಿ ಪಡೆದ ಈ ತಂಡ ಅಪರಾಧ ಕೃತ್ಯ ನಡೆದ ಸ್ಥಳಕ್ಕೆ ಮೊದಲು ಭೇಟಿ ನೀಡಲಿದೆ. ಆ ಸ್ಥಳದಲ್ಲಿನ ಎಲ್ಲ ಸಾಕ್ಷಾಧಾರಗಳನ್ನು ಸಂರಕ್ಷಣೆ ಮಾಡುವುದು, ಆನಂತರ ಸಾಕ್ಷಾಧಾರಗಳನ್ನು ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ಸುರಕ್ಷಿತವಾಗಿ ಕಳುಹಿಸಿಕೊಡುವುದು, ತನಿಖಾಧಿಕಾರಿಗೆ ಆ ಸಾಕ್ಷಾಧಾರಗಳನ್ನು ಒದಗಿಸುವುದು ಸೇರಿದಂತೆ ಇತರ ಅವಶ್ಯ ಕರ್ತವ್ಯಗಳನ್ನು ಮಾಡುತ್ತಾ ಅಪರಾಧಿಗಳನ್ನು ಅತ್ಯಂತ ಶ್ರೀಘ್ರದಲ್ಲಿ ಪತ್ತೆ ಮಾಡಲು ಮೂಲಭೂತವಾಗಿ ಬೇಕಾಗುವ ಎಲ್ಲ ಕೆಲಸ ಕಾರ್ಯಗಳನ್ನು ಈ ಅಧಿಕಾರಿಗಳು ಮಾಡುತ್ತಾರೆ.  ಇದರಿಂದ ಅಪರಾಧಿಗಳ ಪತ್ತೆ ಮತ್ತು ಅಪರಾಧ ನಿಯಂತ್ರಣ ಸಾಧ್ಯ. ಈ ವ್ಯವಸ್ಥೆಯ ಪ್ರಮುಖವಾಗಿ ವಿದೇಶಗಳಲ್ಲಿ ಹೆಚ್ಚಾಗಿ ಇದೆ.

ಸನ್ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಬಿ ಎಸ್ ಯಡಿಯೂರಪ್ಪ ಅವರು ಪ್ರಥಮ ಹಂತದಲ್ಲಿ 206 ಜನ ನುರಿತ ಅಧಿಕಾರಿಗಳ ಹುದ್ದೆಗಳನ್ನು ಮಂಜೂರು ಮಾಡಿದ್ದು, ನಾಳೆ ಈ ಸಂಬಂಧ ಅಧಿಕೃತವಾಗಿ ಸರ್ಕಾರಿ ಆದೇಶವನ್ನು ಮುಖ್ಯಮಂತ್ರಿಗಳು ಗೃಹ ಇಲಾಖೆಗೆ ಕೊಡ ಮಾಡಲಿದ್ದಾರೆ. ಇದೇ ಸಂದರ್ಭದಲ್ಲಿ ಪೊಲೀಸರ ಆರೋಗ್ಯ ಕಾಪಾಡುವ ಆರೋಗ್ಯ ಭಾಗ್ಯ ಯೋಜನೆ ಕುರಿತ ಸಂಪೂರ್ಣ ಮಾಹಿತಿ ಇರುವ ಕೈಪಿಡಿಯನ್ನು ಪೊಲೀಸ್ ಸಿಬ್ಬಂದಿಗೆ ನೀಡಲು ಮುಖ್ಯ ಮಂತ್ರಿಗಳು ಬಿಡುಗಡೆ ಮಾಡಲಿದ್ದಾರೆ.  ಅದೇ ರೀತಿ ಪೊಲೀಸರ ಮಕ್ಕಳಿಗೆ ಉತ್ತಮ ಗುಣಮಟ್ಟದ ಶಿಕ್ಷಣ ಒದಗಿಸಲು ವಿದ್ಯಾನಿಧಿ – 2 ಯೋಜನೆಗೆ ಸಿಎಂ ಚಾಲನೆ ಕೊಡುತ್ತಾರೆ.

ಇದಷ್ಟೇ ಅಲ್ಲದೆ ಅಗ್ನಿಶಾಮಕ ದಳ,  ಗೃಹರಕ್ಷಕ ದಳ ಹಾಗೂ ಇತರ ಪೊಲೀಸ್ ಸೇವಾ ಪದಕಗಳನ್ನು ಮುಖ್ಯಮಂತ್ರಿ ಶ್ರೀ ಬಿ ಎಸ್ ಯಡಿಯೂರಪ್ಪ ಅವರು ಪ್ರಧಾನ ಮಾಡಲಿದ್ದಾರೆ. ಈ ಎಲ್ಲ ಯೋಜನೆಗಳಿಗೆ ಅನುಮೋದನೆ ನೀಡಿರುವ ಮುಖ್ಯಮಂತ್ರಿಗಳಾದ ಶ್ರೀ ಬಿ ಎಸ್ ಯಡಿಯೂರಪ್ಪ ಅವರಿಗೆ ತುಂಬು ಹೃದಯದ ಅಭಿನಂದನೆಗಳನ್ನು ಕೋರುತ್ತೇನೆ.

ವಿಶೇಷವಾದ ಸುದ್ದಿಗಳಿಗಾಗಿ ನಮ್ಮ ಹೊಸದಾದ SUDDINOW APP ಡೌನ್ಲೋಡ್ ಮಾಡಿಕೊಳ್ಳಿ : https://play.google.com/store/apps/details?id=com.webapp.Suddinow

ಬರವಣಿಗೆ ಬಗ್ಗೆ ನಿಮಗೆ ಆಸಕ್ತಿ ಇದಿಯೇ, ನಾವು ನಿಮ್ಮನ್ನು ಪ್ರೋತಾಹಿಸಲು ನಿಮಗಾಗಿ CITIZEN JOURNALISM ಕಾಲಂಅನ್ನು ತೆರೆದಿದ್ದೇವೆ. ನಿಮ್ಮ ಬರಹಗಳಿಗೆ ಸ್ವಾಗತ : https://suddinow.com/upload-news-yourself/

About Author

Priya Rai

ನಮಸ್ಕಾರ, ಸುದ್ದಿನೌ ಪ್ರಾರಂಭವಾಗಿ ೪ ವರ್ಷಗಳು ಕಳೆದಿವೆ, ನಮ್ಮ ಜೊತೆಗಿರುವ ನಿಮ್ಮೆಲ್ಲರಿಗೂ ಧನ್ಯವಾದಗಳು ನಿಮ್ಮ ವಿಶ್ವಾಸಿ, ಪ್ರಿಯ ರಾಯ್

Leave A Reply