ಬಳ್ಳಾರಿ  ಜಿಲ್ಲಾಧಿಕಾರಿ ಎದುರಲ್ಲಿಯೇ ಮಾರಾಮಾರಿ..! 

0

ಬಳ್ಳಾರಿ  – ಅದು ಯಾಕೋ ಗೊತಿಲ್ಲಾ ಭರಿ ವಿವಾದಗಳಿಂದಲೇ ಸುದ್ದಿಯಾಗುತ್ತಿರುವ ಶಾಸಕ ಪಿಟಿ ಪರಮೇಶ್ವರ ನಾಯಕ್ ಈಗ ಅವರು ಬೆಂಬಲಿಗರು, ಮಾಡಿರುವ ಗಲಾಟೆಯಿಂದ ಸುದ್ಧಿಯಾಗಿದ್ದಾರೆ. ಮಳೆ ಹಾನಿ ವೀಕ್ಷಿಸಲು ತೆರಳಿದ್ದ ಬಳ್ಳಾರಿ ಜಿಲ್ಲಾಧಿಕಾರಿ ಪವನ್ ಕುಮಾರ್ ಮಾಲಪಾಟಿ ಅವರ ಎದುರಲ್ಲೇ ಶಾಸಕರ ಬೆಂಬಲಿಗರು ಮಾರಾಮಾರಿ ನಡೆದಿದೆ. 

ಕಳೆದ ಎರಡು ದಿನಗಳ ಹಿಂದೆ ವಿಜಯನಗರ ಜಿಲ್ಲೆಯ ಹೂವಿನ ಹಡಗಲಿ ತಾಲ್ಲೂಕಿನಲ್ಲಿ ವ್ಯಾಪಕವಾಗಿ ಮಳೆಯಾಗಿತ್ತು, ಈ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಪವನ್ ಕುಮಾರ್ ಮಾಲಪಾಟಿ ಅವರು ಹೂವಿನ ಹಡಗಲಿ ತಾಲೂಕಿನ ಕೊಮಾರಹಳ್ಳಿ ತಾಂಡಾಕೆ ಬೇಟಿ ನೀಡಿ ಮಳೆ ಹಾನಿ ವೀಕ್ಷಣೆ ಮಾಡಿದ್ದಾರೆ. ಇದೇ ವೇಳೆಯಲ್ಲಿ ಹೂವಿನ ಹಡಗಲಿ ತಾಲೂಕಿನ ಶಾಸಕರಾದ ಪಿಟಿ ಪರಮೇಶ್ವರ್ ನಾಯ್ಕ್ ಅವರು ಸಹ ಜೊತೆಯಲ್ಲಿ ಇದ್ದರು. ಆಗ ಬೆಳೆ ಹಾನಿ ಸಲುವಾಗಿ ರೈತರ ಜಿಲ್ಲಾಧಿಕಾರಿ ಮೊದಲು ನಮ್ಮ ಹೊಲಕ್ಕೆ ಬರಬೇಕು ಎಂದು ಪಟ್ಟು ಹಿಡಿದಾಗ , ಶಾಸಕರ ಬೆಂಬಲಿಗರು ಹಲ್ಲೆ ಮಾಡಿದ್ದಾರೆ.

ಜಿಲ್ಲಾಧಿಕಾರಿ ಎದುರಿನಲ್ಲಿಯೇ ಪಿಟಿಪಿ ಬೆಂಬಲಿಗರು ಹಲ್ಲೆ ಮಾಡಿದ್ದಾರೆ. ಕ್ಷುಲ್ಲಕ ಕಾರಣಕ್ಕೆ ಆರಂಭವಾದ ಜೆಗಳ ವಿಕೋಪಕ್ಕೆ ತಿರುಗಿದಾಗ ಪೊಲೀಸರು ಜನರನ್ನು ಚೆದುರಿಸಿದ್ದಾರೆ. ಬಳಿಕ ಜಿಲ್ಲಾಧಿಕಾರಿ ಪವನ್ ಕುಮಾರ್  ಮಾಲಪಾಟಿ ಅವರು ಗಲಾಟೆ ಮಾಡಿದ ಜನರಿಗೆ ಕ್ಲಾಸ್ ತೆಗೆದುಕೊಂಡಿದ್ದಾರೆ. ಈ ಕುರಿತು ಹೂವಿನ ಹಡಗಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಶೇಷವಾದ ಸುದ್ದಿಗಳಿಗಾಗಿ ನಮ್ಮ ಹೊಸದಾದ SUDDINOW APP ಡೌನ್ಲೋಡ್ ಮಾಡಿಕೊಳ್ಳಿ : https://play.google.com/store/apps/details?id=com.webapp.Suddinow

ಬರವಣಿಗೆ ಬಗ್ಗೆ ನಿಮಗೆ ಆಸಕ್ತಿ ಇದಿಯೇ, ನಾವು ನಿಮ್ಮನ್ನು ಪ್ರೋತಾಹಿಸಲು ನಿಮಗಾಗಿ CITIZEN JOURNALISM ಕಾಲಂಅನ್ನು ತೆರೆದಿದ್ದೇವೆ. ನಿಮ್ಮ ಬರಹಗಳಿಗೆ ಸ್ವಾಗತ : https://suddinow.com/upload-news-yourself/

About Author

Priya Rai

ನಮಸ್ಕಾರ, ಸುದ್ದಿನೌ ಪ್ರಾರಂಭವಾಗಿ ೪ ವರ್ಷಗಳು ಕಳೆದಿವೆ, ನಮ್ಮ ಜೊತೆಗಿರುವ ನಿಮ್ಮೆಲ್ಲರಿಗೂ ಧನ್ಯವಾದಗಳು ನಿಮ್ಮ ವಿಶ್ವಾಸಿ, ಪ್ರಿಯ ರಾಯ್

Leave A Reply