ಬಳ್ಳಾರಿ- ಬಹು ಅಂಗಾಗ ವೈಫಲ್ಯ ಹಾಗೂ ಕರೋನಾ ಸೋಂಕಿನಿಂದ ಬಳಲುತಿದ್ದ ವಿಮ್ಸ್ ಆಸ್ಪತ್ರೆಯ ವೈದ್ಯರು ಇಂದು ಸಾವಿಗೀಡಾಗಿದ್ದಾರೆ. ಕರೋನಾ ಮಹಾ ಮಾರಿ ಸೋಂಕು ಜಿಲ್ಲೆಯಲ್ಲಿ ವ್ಯಾಪಕವಾಗಿ ಹರಡಿದ್ದು, ಗಣಿ ನಾಡು ಬಳ್ಳಾರಿಯಲ್ಲಿ ಸಾವಿನ ಸಂಖ್ಯೆ ದಿನೇ ದಿನೇ ಏರಿಕೆಯಾಗಿದೆ. ಕರೋನಾ ಸೋಂಕಿಗೆ  ಬಳ್ಳಾರಿಯ ವಿಮ್ಸ್ ಆಸ್ಪತ್ರೆಯ ವೈದ್ಯರೊಬ್ಬರು ಸಾವಿಗೀಡಾಗಿದ್ದಾರೆ.

ವಿಜಯ ಶಂಕರ್ (52) ಕರೋನಾ ಸೋಂಕಿಗೆ ಬಲಿಯಾದ ವೈದ್ಯರಾಗಿದ್ದು, ಕಳೆದ ಹಲವಾರು ವರ್ಷಗಳಿಂದ ವಿಮ್ಸ್ ಆಸ್ಪತ್ರೆಯಲ್ಲಿ ಚರ್ಮರೋಗ ತಜ್ಞರಾಗಿ ಸೇವೆ ಸಲ್ಲಿಸುತ್ತಿದ್ದರು. ಕಳೆದ ಒಂದು ವಾರದಿಂದ ಕರೋನಾ ಸೋಂಕಿನಿಂದ ಬಳಲುತ್ತಿದ್ದ ವೈದ್ಯರು ಇಂದು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಕರೋನಾ ಸೋಂಕಿಗೆ ಬಲಿಯಾಗಿದ್ದಾರೆ. ಫ್ರೆಂಟ್ ಲೈನ್ ವಾರಿಯಾರ ಆದ ಹಿನ್ನೆಲೆಯಲ್ಲಿ ಕಳೆದ ಒಂದು ತಿಂಗಳ ಹಿಂದೆ ಎರಡೂ ಡೋಜ್ ವ್ಯಾಕ್ಸಿನ್ ಸಹ ಪಡೆದಿದ್ದರು. ಆದ್ರೆ ಕಳೆದ ನಾಲ್ಕು ವರ್ಷಗಳ ಹಿಂದೆ ಕಿಡ್ನಿ ಕಸಿ ಮಾಡಿಸಿ‌ಕೊಂಡಿದ್ದು, ವೈದ್ಯರು ಇಂದು ಬೆಳಗಿನ ಜಾವ ಚಿಕಿತ್ಸೆ ಫಲಕಾರಿಯಾಗದ ಸಾವಿಗೀಡಾಗಿದ್ದಾರೆ.

ವಿಶೇಷವಾದ ಸುದ್ದಿಗಳಿಗಾಗಿ ನಮ್ಮ ಹೊಸದಾದ SUDDINOW APP ಡೌನ್ಲೋಡ್ ಮಾಡಿಕೊಳ್ಳಿ : https://play.google.com/store/apps/details?id=com.webapp.Suddinow

ಬರವಣಿಗೆ ಬಗ್ಗೆ ನಿಮಗೆ ಆಸಕ್ತಿ ಇದಿಯೇ, ನಾವು ನಿಮ್ಮನ್ನು ಪ್ರೋತಾಹಿಸಲು ನಿಮಗಾಗಿ CITIZEN JOURNALISM ಕಾಲಂಅನ್ನು ತೆರೆದಿದ್ದೇವೆ. ನಿಮ್ಮ ಬರಹಗಳಿಗೆ ಸ್ವಾಗತ : https://suddinow.com/upload-news-yourself/

About Author

Priya Rai

ನಮಸ್ಕಾರ, ಸುದ್ದಿನೌ ಪ್ರಾರಂಭವಾಗಿ ೪ ವರ್ಷಗಳು ಕಳೆದಿವೆ, ನಮ್ಮ ಜೊತೆಗಿರುವ ನಿಮ್ಮೆಲ್ಲರಿಗೂ ಧನ್ಯವಾದಗಳು ನಿಮ್ಮ ವಿಶ್ವಾಸಿ, ಪ್ರಿಯ ರಾಯ್

Leave A Reply