ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಉತ್ತಮ

0

ಮಂಗಳೂರು  – ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಉತ್ತಮ ಮಳೆಯಾಗಿದ್ದು, ಜಿಲ್ಲಾಯಾದ್ಯಂತ ಪೂರ್ವ ಮುಂಗಾರು ಮಳೆ ಸುರಿದಿದೆ. ತಡರಾತ್ರಿಯಿಂದ ಬೆಳಗ್ಗೆಯವರೆಗೂ ಸುರಿದ ಮಳೆಯಿಂದಾಗಿ ಮಂಗಳೂರು ನಗರದ ಹಲವು ರಾಜಕಾಲುವೆಗಳು, ಚರಂಡಿಗಳು ತುಂಬಿ ಹರಿದವು. ಮಧ್ಯಾಹ್ನ ಆಗುತ್ತಲೇ ಮಳೆ ಪ್ರಮಾಣ ತಗ್ಗಿತು.

ಮಂಗಳೂರು ನಗರದ ಪಂಪ್‌ವೆಲ್ ಸೇತುವೆ ಕೆಳಭಾಗ ಸೇರಿದಂತೆ ಬೆಳಗ್ಗಿನ ಹೊತ್ತು‌ ಮಂಗಳೂರು ನಗರದ ಕೆಲವು ಕಡೆ ನೀರು ಸರಾಗವಾಗಿ ಹರಿದು ಹೋಗಲು ಸಾಧ್ಯವಾಗದೆ ಕೃತಕ ನೆರೆಯ ವಾತಾವರಣ ಸೃಷ್ಟಿಯಾಗಿತ್ತು. ಮಳೆ ತಗ್ಗುತ್ತಲೇ ಮಳೆ ನೀರು ಹರಿದು ಕೃತಕ ನೆರೆಯೂ ಇಳಿದು ಹೋಗಿದೆ. ಪಂಪ್‌ವೆಲ್ ಮೇಲ್ಸೇತುವೆ ಕೆಳಭಾಗದಲ್ಲಿ ಕೃತಕ ನೆರೆ ಸೃಷ್ಟಿಯಾದ ಕಾರಣ ಬೆಳಗ್ಗೆ ಹೊತ್ತು ಖರೀದಿಗೆ ಮಂಗಳೂರಿಗೆ ವಾಹನದಲ್ಲಿ ಬಂದವರು ಪರದಾಡುವ ಪರಿಸ್ಥಿತಿ ನಿರ್ಮಾಣವಾಯಿತು. ಜೂನ್ ಐದಕ್ಕೆ ರಾಜ್ಯಕ್ಕೆ ಮುಂಗಾರು ಮಳೆ ಪ್ರವೇಶ ಮಾಡಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ವಿಶೇಷವಾದ ಸುದ್ದಿಗಳಿಗಾಗಿ ನಮ್ಮ ಹೊಸದಾದ SUDDINOW APP ಡೌನ್ಲೋಡ್ ಮಾಡಿಕೊಳ್ಳಿ : https://play.google.com/store/apps/details?id=com.webapp.Suddinow

ಬರವಣಿಗೆ ಬಗ್ಗೆ ನಿಮಗೆ ಆಸಕ್ತಿ ಇದಿಯೇ, ನಾವು ನಿಮ್ಮನ್ನು ಪ್ರೋತಾಹಿಸಲು ನಿಮಗಾಗಿ CITIZEN JOURNALISM ಕಾಲಂಅನ್ನು ತೆರೆದಿದ್ದೇವೆ. ನಿಮ್ಮ ಬರಹಗಳಿಗೆ ಸ್ವಾಗತ : https://suddinow.com/upload-news-yourself/

About Author

Priya Rai

ನಮಸ್ಕಾರ, ಸುದ್ದಿನೌ ಪ್ರಾರಂಭವಾಗಿ ೪ ವರ್ಷಗಳು ಕಳೆದಿವೆ, ನಮ್ಮ ಜೊತೆಗಿರುವ ನಿಮ್ಮೆಲ್ಲರಿಗೂ ಧನ್ಯವಾದಗಳು ನಿಮ್ಮ ವಿಶ್ವಾಸಿ, ಪ್ರಿಯ ರಾಯ್

Leave A Reply