ಕೋಲಾರ- ಕಳೆದ ಒಂದು ವಾರದ ಹಿಂದೆ ಮದುವೆಯಾಗಿದ್ದ ಬಿಗ್ ಬಾಸ್ ಖ್ಯಾತಿಯ ಚೈತ್ರಾ ಕೊಟ್ಟೂರು ವಿಷಸೇವಿಸಿ ಆತ್ಮಹತ್ಯೆ ಯತ್ನ ಮಾಡಿದ್ದಾರೆ.‌ ಇಂದು ಬೆಳಗಿನ ಜಾವ ಆತ್ಮಹತ್ಯೆ ಯತ್ನ ಮಾಡಿದ್ದು ತಡವಾಗಿ ಬೆಳಕಿಗೆ ಬಂದಿದೆ. ಇಂದು ಕೋಲಾರದ ತಮ್ಮ ನಿವಾಸದಲ್ಲಿ ಬೆಳಗ್ಗೆ 5 ಗಂಟೆ ಸಮಯದಲ್ಲಿ ಪಿನಾಯಿಲ್ ಕುಡಿದು ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎನ್ನಲಾಗಿದೆ. ಚೈತ್ರಾ ಅವರನ್ನು ಮನೆಯವರು , ಕೋಲಾರದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದ್ದು, ಚೈತ್ರಾ ಕೊಟ್ಟರು ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಆತ್ಮಹತ್ಯೆ ಯತ್ನಕ್ಕೆ ತಮ್ಮ‌ ಕೌಟುಂಬಿಕ ಕಲಹವೇ ಕಾರಣ ಎಂದು ಹೇಳಲಾಗಿದ್ದು, ಮಾರ್ಚ್ 28 ರಂದು ಮಂಡ್ಯ ಮೂಲದ ಉದ್ಯಮಿ ನಾಗಾರ್ಜುನ ಅವರ ಜೊತೆಯಲ್ಲಿ ಮದುವೆಯಾಗಿದ್ದರು, ಆದರೆ ನಾಗಾರ್ಜುನ್ ಅವರಿಗೆ ಚೈತ್ರಾ ಜೊತೆಗಿನ‌ ವಿವಾಹ ಇಷ್ಟವಿರಲಿಲ್ಲ ಎಂಬ ಮಾತುಗಳು ಕೇಳಿ ಬಂದಿದ್ದವು.

 ಮದುವೆಯಾದ ದಿನವೇ ನಾಗಾರ್ಜುನ್ ವಾಪಸ್ ಹೋಗಿದ್ದರು.  ಬಳಿಕ ಕೋಲಾರ ಮಹಿಳಾ ಪೊಲೀಸ್ ಠಾಣೆಯಲ್ಲಿ ಚೈತ್ರಾ  ದೂರು ಸಹ ದಾಖಲು ಮಾಡಿದ್ದರು, ನಂತದ ಮಾತುಕತೆಗೆ ಬರೋದಾಗಿ ಹೇಳಿದ್ದ ನಾಗಾರ್ಜುನ್ ಹಾಗು ಪೋಷಕರು, ಮಾತುಕತೆಗೆ ಬಾರದೆ ನಿರ್ಲಕ್ಷ್ಯ ಮಾಡಿದ್ದಕ್ಕೆ ವಿಷಸೇವಿಸಿ ಆತ್ಮಹತ್ಯೆ ಯತ್ನಿಸಿದ್ದಾರೆ ಎಂದು ಹೇಳಲಾಗುತ್ತಿದೆ‌

About Author

Priya Rai

ನಮಸ್ಕಾರ, ಸುದ್ದಿನೌ ಪ್ರಾರಂಭವಾಗಿ ೪ ವರ್ಷಗಳು ಕಳೆದಿವೆ, ನಮ್ಮ ಜೊತೆಗಿರುವ ನಿಮ್ಮೆಲ್ಲರಿಗೂ ಧನ್ಯವಾದಗಳು ನಿಮ್ಮ ವಿಶ್ವಾಸಿ, ಪ್ರಿಯ ರಾಯ್

Leave A Reply