ಬಿಜೆಪಿ ನಾಯಕರಿಗ ಲಾಕ್ ಡೌನ್ ನಿಯಮ ಅನ್ವಯ ಇಲ್ವಾ..?

0

ಮಂಗಳೂರು- ಲಾಕ್ ಡೌನ್ ನಿಯಮ ಉಲ್ಲಂಘಿಸಿ ಏಕಕಾಲದಲ್ಲಿ ನಾಲ್ಕು ಮದುವೆ ಕಾರ್ಯಕ್ರಮಗಳು ನಡೆಸುತ್ತಿದ್ದ  ವೇಳೆ ಅಧಿಕಾರಿಗಳು ದಾಳಿ ನಡೆಸಿದ ಘಟನೆ ಮಂಗಳೂರು ನಗರದ ಮಂಗಳಾದೇವಿ ದೇವಸ್ಥಾನದ ಸಮೀಪದ ವೇದಿಕೆಯಲ್ಲಿ ನಡೆದಿದೆ. ನಿಯಮಬಾಹಿರವಾಗಿ ಮದುವೆ ಸಮಾರಂಭ ಆಯೋಜಿಸಿರುವುದಾಗಿ ಬಂದ ದೂರನ್ನು ಆಧಾರಿಸಿ ಎಸಿ ಮದನ್ ಮೋಹನ್ ನೇತೃತ್ವದ ತಂಡ ದಾಳಿ ನಡೆಸಿ ಕೇಸು ದಾಖಲಿಸಿದೆ. ಬಿಜೆಪಿಯ ನಾಮನಿರ್ದೇಶಿತ ಕಾರ್ಪೊರೇಟರ್ ಭಾಸ್ಕರ್ ಚಂದ್ರ ಅವರ ಪುತ್ರಿಯ ಮದುವೆ ಸೇರಿದಂತೆ ಇನ್ನೂ ಮೂರು ವಿವಾಹಗಳು ನಡೆಯುತ್ತಿತ್ತು. ಈ ಮದುವೆಯಲ್ಲಿ ನೂರಕ್ಕೂ ಹೆಚ್ಚು ಜನರು ಗುಂಪುಗೂಡಿದ್ದರು.

ದೇವಸ್ಥಾನದ ಆಡಳಿತ ಮಂಡಳಿಯಿಂದ ಮದುವೆಗೆ ಅನುಮತಿ ನೀಡಿರುವ ಕುರಿತ ಎಲ್ಲ ದಾಖಲೆಗಳನ್ನು ಪರಿಶೀಲನೆ ನಡೆಸಿದ ಎಸಿ ಮದನ್ ಮೋಹನ್, ದೇವಸ್ಥಾನದ ಮ್ಯಾನೇಜಿಂಗ್ ಟ್ರಸ್ಟಿ ಅವರನ್ನು ತೀವ್ರ ತರಾಟೆಗೆ ತೆಗೆದುಕೊಂಡರು. ನಾಲ್ಕು ಮದುವೆ ಕಾರ್ಯಕ್ರಮಕ್ಕೆ ಹೇಗೆ ಅವಕಾಶ ನೀಡಿದ್ದೀರಿ? ಯಾವ ಸಮಯ? ಎಷ್ಟು ಜನರಿಗೆ ಅವಕಾಶ ನೀಡಲಾಗಿದೆ ಎಂದೂ ಪ್ರಶ್ನಿಸಿದ್ದಾರೆ.

ಮಂಗಳೂರು ಮಹಾನಗರ ಪಾಲಿಕೆಯಿಂದ ನಾಲ್ಕು ಮದುವೆಗೆ ಅವಕಾಶ ನೀಡಿದ ಅಧಿಕಾರಿಗಳ ವಿರುದ್ಧವೂ ಕೇಸು ದಾಖಲಿಸುವಂತೆ ಎಸಿ ಸೂಚಿಸಿದ್ದಾರೆ.

ವಿಶೇಷವಾದ ಸುದ್ದಿಗಳಿಗಾಗಿ ನಮ್ಮ ಹೊಸದಾದ SUDDINOW APP ಡೌನ್ಲೋಡ್ ಮಾಡಿಕೊಳ್ಳಿ : https://play.google.com/store/apps/details?id=com.webapp.Suddinow

ಬರವಣಿಗೆ ಬಗ್ಗೆ ನಿಮಗೆ ಆಸಕ್ತಿ ಇದಿಯೇ, ನಾವು ನಿಮ್ಮನ್ನು ಪ್ರೋತಾಹಿಸಲು ನಿಮಗಾಗಿ CITIZEN JOURNALISM ಕಾಲಂಅನ್ನು ತೆರೆದಿದ್ದೇವೆ. ನಿಮ್ಮ ಬರಹಗಳಿಗೆ ಸ್ವಾಗತ : https://suddinow.com/upload-news-yourself/

About Author

Priya Rai

ನಮಸ್ಕಾರ, ಸುದ್ದಿನೌ ಪ್ರಾರಂಭವಾಗಿ ೪ ವರ್ಷಗಳು ಕಳೆದಿವೆ, ನಮ್ಮ ಜೊತೆಗಿರುವ ನಿಮ್ಮೆಲ್ಲರಿಗೂ ಧನ್ಯವಾದಗಳು ನಿಮ್ಮ ವಿಶ್ವಾಸಿ, ಪ್ರಿಯ ರಾಯ್

Leave A Reply