ಬ್ಲ್ಯಾಕ್ ಫಂಗಸ್ ಇಂಜೆಕ್ಷನ್ ಮಾರಾಟ, ನಾಸೀರ ಹುಸೇನ್ ಸೇರಿದಂತೆ ಮೂವರ ಬಂಧನ

0

ಹುಬ್ಬಳ್ಳಿ- ಕೊರೋನಾ ಸಮಯದಲ್ಲಿ ಮಾರಿಯಂತೆ ಕಾಡುತ್ತಿರುವ ಬ್ಲ್ಯಾಕ್ ಫಂಗಸ್ ಚಿಕಿತ್ಸೆಗಾಗಿ ಜನರು ಪರದಾಟ ನಡೆಸಿರುವ ಸಮಯದಲ್ಲೇ, ಈ ರೋಗಕ್ಕೆ ಬಳಕೆಯಾಗುವ ಇಂಜೆಕ್ಷನ್ ನ್ನ ಅಕ್ರಮವಾಗಿ ಮಾರಾಟ ಮಾಡುತ್ತಿದ್ದ ದಂಧೆಯನ್ನ ಬಯಲಿಗೆಳೆಯುವಲ್ಲಿ ಸಿಸಿಬಿ ಪೊಲೀಸರು ಯಶಸ್ವಿಯಾಗಿದ್ದಾರೆ.

ಹುಬ್ಬಳ್ಳಿಯ ಖಾಸಗಿ ಆಸ್ಪತ್ರೆಯ ಸಾರ್ವಜನಿಕ ಸಂಪರ್ಕಾಧಿಕಾರಿಯೂ ಸೇರಿದಂತೆ ಮೂವರನ್ನ ಬಂಧನ ಮಾಡಲಾಗಿದೆ. ಬಂಧಿತರನ್ನ ನಾಸೀರ್ ಹುಸೇನ್ ಅಕ್ತಾರ, ರಾಘವೇಂದ್ರ ಉಣಕಲ್, ನಾಗರಾಜ ನಡವಲಕೇರಿ ಎಂದು ಗುರುತಿಸಲಾಗಿದೆ.

ಕಿಮ್ಸ್ ಆಸ್ಪತ್ರೆಯ ವ್ಯಾಪ್ತಿಯ ಔಷಧಿ ಅಂಗಡಿಯಲ್ಲಿ ಅಕ್ರಮವಾಗಿ ಇಂಜೆಕ್ಷನ್ ಮಾರಾಟ ಮಾರಾಟ ಮಾಡುತ್ತಿದ್ದ ಸಮಯದಲ್ಲಿ ಸಿಸಿಬಿ ಪೊಲೀಸರು ದಾಳಿ ಮಾಡಿ, 4 ವಯಲ್ಸ್ ನೊಂದಿಗೆ ಆರೋಪಿಗಳನ್ನ ಬಂಧನ ಮಾಡಿದ್ದಾರೆ. ನಾಸೀರ್ ಹುಸೇನ್ ಎಂಬುವವನಿಂದ ಇಂಜೆಕ್ಷನ್ 7 ಸಾವಿರಕ್ಕೆ ತಂದು ಹೆಚ್ಚಿಗೆ ಹಣಕ್ಕೆ ಅಂಪೋಟೆರಿಸನ್ ಬಿ ಇಂಜೆಕ್ಷನ್ ಮಾರಾಟ ಮಾಡುತ್ತಿದ್ದರು. ಸಿಸಿಬಿ ಪೊಲೀಸರು ಅಕ್ರಮವನ್ನ ಪತ್ತೆ ಹಚ್ಚಿ ಆರೋಪಿಗಳ ಸಮೇತ, ವಿದ್ಯಾನಗರ ಠಾಣೆಗೆ ಒಪ್ಪಿಸಿದ್ದು, ಪೊಲೀಸರು ಮುಂದಿನ ಕಾನೂನು ಕ್ರಮವನ್ನ ಜರುಗಿಸಿದ್ದಾರೆ.

ವಿಶೇಷವಾದ ಸುದ್ದಿಗಳಿಗಾಗಿ ನಮ್ಮ ಹೊಸದಾದ SUDDINOW APP ಡೌನ್ಲೋಡ್ ಮಾಡಿಕೊಳ್ಳಿ : https://play.google.com/store/apps/details?id=com.webapp.Suddinow

ಬರವಣಿಗೆ ಬಗ್ಗೆ ನಿಮಗೆ ಆಸಕ್ತಿ ಇದಿಯೇ, ನಾವು ನಿಮ್ಮನ್ನು ಪ್ರೋತಾಹಿಸಲು ನಿಮಗಾಗಿ CITIZEN JOURNALISM ಕಾಲಂಅನ್ನು ತೆರೆದಿದ್ದೇವೆ. ನಿಮ್ಮ ಬರಹಗಳಿಗೆ ಸ್ವಾಗತ : https://suddinow.com/upload-news-yourself/

About Author

Priya Rai

ನಮಸ್ಕಾರ, ಸುದ್ದಿನೌ ಪ್ರಾರಂಭವಾಗಿ ೪ ವರ್ಷಗಳು ಕಳೆದಿವೆ, ನಮ್ಮ ಜೊತೆಗಿರುವ ನಿಮ್ಮೆಲ್ಲರಿಗೂ ಧನ್ಯವಾದಗಳು ನಿಮ್ಮ ವಿಶ್ವಾಸಿ, ಪ್ರಿಯ ರಾಯ್

Leave A Reply