ಬೆಂಗಳೂರು- ಪೆಟ್ರೋಲ್ ಡೀಸೆಲ್ ಬೆಲೆ ಏರಿಕೆ ಬೆನ್ನಲ್ಲೇ ಬಸ್ ದರ ಹೆಚ್ಚಳಕ್ಕೆ ಸರ್ಕಾರ ಮುಂದಾಗಿದೆ. ಬಿಎಂಟಿಸಿ ಪ್ರಯಾಣ ದರ ಏರಿಸುವ ಚಿಂತನೆಯಲ್ಲಿ ಸರ್ಕಾರ ಇದ್ದು, ಬಿ ಎಮ್ ಟಿ ಸಿ  ಸಹ ಬಸ್ ದರ ಏರಿಕೆ ಮಾಡುವಂತೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದೆ. ಈ ಕುರಿತು ಮಾತನಾಡಿದ ಸಾರಿಗೆ ಸಚಿವ ಲಕ್ಷ್ಮಣ ಸವದಿ ಅವರು , ಬಿ ಎಮ್ ಟಿ ಸಿ ಈಗಾಗಲೇ ಬೆಲೆ ಏರಿಕೆ ಮಾಡುವಂತೆ ಸರ್ಕಾರಕ್ಕೆ ಪ್ರಸ್ತಾವನೆಯನ್ನು ಸಲ್ಲಿಸಿದೆ,  ಲಈ ಸಂಬಂಧ ಮುಖ್ಯಮಂತ್ರಿ ಅಂತಿಮ ತೀರ್ಮಾನ ತೆಗೆದುಕೊಳ್ಳಲಿದ್ದಾರೆ ಎಂದು ಉಪಮುಖ್ಯಮಂತ್ರಿ ಲಕ್ಷ್ಮಣಸವದಿ ಹೇಳಿದ್ದಾರೆ. ಇದರ ಜೊತೆಯಲ್ಲಿ ಉಳಿದ ನಿಗಮಗಳಲ್ಲಿ ಕಳೆದ ವರ್ಷವೇ ಶೇ 13 ರಷ್ಟು ಏರಿಕೆ ಮಾಡಲಾಗಿತ್ತು. ಆದ್ರೆ ಅಷ್ಟು ಪ್ರಮಾಣ ಏರಿಕೆ ಸಾಧ್ಯವಿಲ್ಲ. ಪ್ರಯಾಣಿಕರಿಗೆ ಹೊರೆ ಆಗದಂತೆ ಏರಿಕೆ ಗೆ ಮನವಿ ಮಾಡಲಾಗುವುದು. ಅಂತಿಮ ನಿರ್ಧಾರ ಮುಖ್ಯಮಂತ್ರಿಯವರದು ಮಾಡಲಿದ್ದಾರೆ ಎಂದಿದ್ದಾರೆ….

About Author

Priya Rai

ನಮಸ್ಕಾರ, ಸುದ್ದಿನೌ ಪ್ರಾರಂಭವಾಗಿ ೪ ವರ್ಷಗಳು ಕಳೆದಿವೆ, ನಮ್ಮ ಜೊತೆಗಿರುವ ನಿಮ್ಮೆಲ್ಲರಿಗೂ ಧನ್ಯವಾದಗಳು ನಿಮ್ಮ ವಿಶ್ವಾಸಿ, ಪ್ರಿಯ ರಾಯ್

Leave A Reply