ಬಿ ಎಸ್ ಯಡಿಯೂರಪ್ಪ ಅವರಿಗೆ ಮೋದಿ ಮುಂದೆ ಬಾಯಿ ಬಿಡುವ ಸಾಮರ್ಥ್ಯವೇ ಇಲ್ಲ….

0

ಬೆಂಗಳೂರು – ಪ್ರಧಾನಿ ಮೋದಿ ಸರ್ಕಾರದ ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಮಾಜಿ ಸಿ ಎಮ್ ಸಿದ್ದರಾಮಯ್ಯಾ ಅವರು ಮೋದಿ ಸರ್ಕಾರ ಸಚಿವ ಸಂಪುಟ ವಿಸ್ತರಣೆ ಕುರಿತು ಲೇವಡಿ ಮಾಡಿದ್ದಾರೆ.

ಈ ಸಂಪುಟ ವಿಸ್ತರಣೆ, ಪುನರ್ರಚನೆಯಿಂದ ರಾಜ್ಯಕ್ಕೆ ಯಾವ ಲಾಭವೂ ಇಲ್ಲ. ರಾಜ್ಯದ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರಿಗೆ ,  ಪ್ರಧಾನಿ ನರೇಂದ್ರ ಮೋದಿ ಅವರ  ಎದುರು ಬಾಯಿಬಿಡುವ ಶಕ್ತಿ ಇಲ್ಲ, 25 ಸಂಸದರು ಬಾಯಿಗೆ ಬೀಗ ಹಾಕಿಕೊಂಡು ಕೂತಿದ್ದಾರೆ. ಹೀಗಿರುವಾಗ  ಹೊಸದಾಗಿ ಸಚಿವ ಖಾತೆಯ ಕಿರೀಟ ಇಟ್ಟುಕೊಂಡು ಇವರೇನು ಮಾಡಬಹುದು?

ಕರ್ನಾಟಕದಿಂದ ಸಚಿವರು ಆರಾಗಲಿ, ಹನ್ನೆರಡಾಗಲಿ ಅದರಿಂದ ರಾಜ್ಯಕ್ಕೆ ಏನೂ ಲಾಭವಾಗದು ಎನ್ನುವುದು ಈಗಾಗಲೇ ಸಾಬೀತಾಗಿದೆ. ಹೊಸಬರಲ್ಲಿ ಯಾರೂ ಸಂಪುಟ ದರ್ಜೆಯ ಸಚಿವರಿಲ್ಲ. ಮಹತ್ವದ ಖಾತೆಗಳೂ ಇಲ್ಲ. ಮಹತ್ವದ ಖಾತೆಗಳನ್ನು ಕೊಟ್ಟರೂ ಇವರಿಗೆ ನಿಭಾಯಿಸುವ ಸಾಮರ್ಥ್ಯವೂ ಇಲ್ಲ ಎಂದು ನರೇಂದ್ರ ಅವರಿಗೆ ಗೊತ್ತಾಗಿರಬೇಕು ಎಂದಿದ್ದಾರೆ.

ವಿಶೇಷವಾದ ಸುದ್ದಿಗಳಿಗಾಗಿ ನಮ್ಮ ಹೊಸದಾದ SUDDINOW APP ಡೌನ್ಲೋಡ್ ಮಾಡಿಕೊಳ್ಳಿ : https://play.google.com/store/apps/details?id=com.webapp.Suddinow

ಬರವಣಿಗೆ ಬಗ್ಗೆ ನಿಮಗೆ ಆಸಕ್ತಿ ಇದಿಯೇ, ನಾವು ನಿಮ್ಮನ್ನು ಪ್ರೋತಾಹಿಸಲು ನಿಮಗಾಗಿ CITIZEN JOURNALISM ಕಾಲಂಅನ್ನು ತೆರೆದಿದ್ದೇವೆ. ನಿಮ್ಮ ಬರಹಗಳಿಗೆ ಸ್ವಾಗತ : https://suddinow.com/upload-news-yourself/

About Author

Priya Rai

ನಮಸ್ಕಾರ, ಸುದ್ದಿನೌ ಪ್ರಾರಂಭವಾಗಿ ೪ ವರ್ಷಗಳು ಕಳೆದಿವೆ, ನಮ್ಮ ಜೊತೆಗಿರುವ ನಿಮ್ಮೆಲ್ಲರಿಗೂ ಧನ್ಯವಾದಗಳು ನಿಮ್ಮ ವಿಶ್ವಾಸಿ, ಪ್ರಿಯ ರಾಯ್

Leave A Reply