ಬಿಎಸ್ ವೈ ಪರ ಬ್ಯಾಟ್ ಬಿಸಿದ ಶಾಸಕ ಡಾ।। ಶಿವರಾಜಪಾಟೀಲ್.

0

ರಾಯಚೂರು

ಸಿಎಂ ಬದಲಾವಣೆ ಆಡಿಯೋ ರಿಲೀಸ್ ವಿಚಾರವಾಗಿ, ಅಷ್ಟಾಗಿ ಪ್ರಾಮುಖ್ಯತೆ ನೀಡುವುದು ಅವಶ್ಯವಲ್ಲ ಎಂದು ರಾಯಚೂರು ನಗರ ಬಿಜೆಪಿ ಶಾಸಕ ಡಾ।। ಶಿವರಾಜ್ ಪಾಟೀಲ್ ಹೇಳಿದರು. ಈಗಾಗಲೇ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಧ್ವನಿ ನನ್ನದಲ್ಲ, ಈ ಬಗ್ಗೆ ತನಿಖೆ ಮಾಡಲು ಮುಖ್ಯಮಂತ್ರಿ ತಿಳಿಸುವುದಾಗಿ ಹೇಳಿದ್ದಾರೆ.

ಇನ್ನೂ ಉಳಿದ ಅಧಿಕಾರವಧಿಯು ಬಿಎಸ್ ಯಡಿಯೂರಪ್ಪನವರೇ ಮುಖ್ಯಮಂತ್ರಿಯಾಗಿ ಕಾರ್ಯನಿರ್ವಹಿಸಲಿದ್ದಾರೆ, ರಾಜ್ಯದಲ್ಲಿ ಯಾವುದೇ ಬದಲಾವಣೆ ಆಗಬೇಕಾದರೆ ಹೈಕಮಾಂಡ್ ನಿರ್ಣಯ ತೆಗೆದುಕೊಳ್ಳುತ್ತದೆ, ಅದಕ್ಕೆ ಎಲ್ಲಾರು ಬದ್ಧರಾಗಿರುತ್ತಾರೆ. ಕಳೆದ 2ವರ್ಷಗಳಿಂದ ರಾಜ್ಯದ ಆರ್ಥಿಕ ಸಂಕಷ್ಟದಲ್ಲಿಯೂ ಕೂಡ  ಯಡಿಯೂರಪ್ಪನವರು ಯಶಸ್ವಿಯಾಗಿ ಸರ್ಕಾರವನ್ನು ಮುನ್ನಡೆಸುತ್ತಿದ್ದಾರೆ, ಇವೆಲ್ಲವುಗಳನ್ನು ಹೈಕಮಾಂಡ್ ಗಮನಿಸುತ್ತಿದೆ. ಇನ್ನು ಆಡಿಯೋ ವಿಚಾರವಾಗಿ ಸತ್ಯಾಸತ್ಯತೆಯು ವಿಚಾರಣೆ ನಂತರವೇ ಬಯಲಿಗೆ ಬರಲಿದ್ದು, ನಮ್ಮದು ಪ್ರಜಾಪ್ರಭುತ್ವ ಪಕ್ಷವಾಗಿದ್ದು ಇಂತಹ ಗೊಂದಲದ ವಾತಾವರಣ ಉಂಟಾಗುವುದು ಸಾಮಾನ್ಯವಾಗಿದೆ ಎಂದು ಹೇಳಿದರು.

ವಿಶೇಷವಾದ ಸುದ್ದಿಗಳಿಗಾಗಿ ನಮ್ಮ ಹೊಸದಾದ SUDDINOW APP ಡೌನ್ಲೋಡ್ ಮಾಡಿಕೊಳ್ಳಿ : https://play.google.com/store/apps/details?id=com.webapp.Suddinow

ಬರವಣಿಗೆ ಬಗ್ಗೆ ನಿಮಗೆ ಆಸಕ್ತಿ ಇದಿಯೇ, ನಾವು ನಿಮ್ಮನ್ನು ಪ್ರೋತಾಹಿಸಲು ನಿಮಗಾಗಿ CITIZEN JOURNALISM ಕಾಲಂಅನ್ನು ತೆರೆದಿದ್ದೇವೆ. ನಿಮ್ಮ ಬರಹಗಳಿಗೆ ಸ್ವಾಗತ : https://suddinow.com/upload-news-yourself/

About Author

Priya Rai

ನಮಸ್ಕಾರ, ಸುದ್ದಿನೌ ಪ್ರಾರಂಭವಾಗಿ ೪ ವರ್ಷಗಳು ಕಳೆದಿವೆ, ನಮ್ಮ ಜೊತೆಗಿರುವ ನಿಮ್ಮೆಲ್ಲರಿಗೂ ಧನ್ಯವಾದಗಳು ನಿಮ್ಮ ವಿಶ್ವಾಸಿ, ಪ್ರಿಯ ರಾಯ್

Leave A Reply