ಜಿಲ್ಲೆಯಲ್ಲಿ ಬಕ್ರೀದ್ ಸರಳವಾಗಿ ಆಚರಣೆ

0

ಮಂಗಳೂರು

ತ್ಯಾಗ ಮತ್ತು ಬಲಿದಾನದ ಸಂಕೇತವಾದ ಬಕ್ರೀದ್ ಹಬ್ಬವನ್ನು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸರಳವಾಗಿ ಕೋವಿಡ್ ಮಾರ್ಗಸೂಚಿಯೊಂದಿಗೆ ಆಚರಿಸಲಾಯಿತು. ದಕ್ಷಿಣ ಕನ್ನಡದ ಮಂಗಳೂರು ನಗರ ಸೇರಿದಂತೆ ಬಂಟ್ವಾಳ, ಪುತ್ತೂರು, ಸುಳ್ಯ, ಮೂಡಬಿದ್ರೆ, ಬೆಳ್ತಂಗಡಿ, ಕಡಬ, ಸುಬ್ರಹ್ಮಣ್ಯ ಸೇರಿದಂತೆ ಎಲ್ಲಾ ತಾಲೂಕುಗಳಲ್ಲಿನ ಕೆಲ ಮಸೀದಿಗಳಲ್ಲಿ  ಈ ಸಲ ಬೆಳಗ್ಗೆ 6:30 ರಿಂದ ಈದ್ ನಮಾಝ್ ಮತ್ತು ಪ್ರವಚನ ಆರಂಭಗೊಂಡಿತು.

ಜನರ ಸಾಮರ್ಥ್ಯಕ್ಕೆ ಅನುಗುಣವಾಗಿ ಶೇಕಡಾ 50ನ್ನು ಮೀರದಂತೆ ಹಂತ ಹಂತವಾಗಿ ಸಾಮೂಹಿಕ ನಮಾಝ್ ನಿರ್ವಹಿಸಲಾಯ್ತು. ಬೆಳಗ್ಗೆ ಹೊಸ ಬಟ್ಟೆಬರೆ ಧರಿಸಿ  ಮಸೀದಿಗೆ ತೆರಳಿ ಅಲ್ಲಿ ನಮಾಝ್ ನಿರ್ವಹಿಸಿದ ಬಳಿಕ ದಫನ ಭೂಮಿಗೆ ತೆರಳಿ ಅಗಲಿದ ಕುಟುಂಬದ ಸದಸ್ಯರಿಗೆ ವಿಶೇಷ ಪ್ರಾರ್ಥನೆ, ಕುಟುಂಬದ, ಸ್ನೇಹಿತರ ಮನೆಗೆ ಸೌಹಾರ್ದ ಭೇಟಿ ನೀಡುವ ದೃಶ್ಯ ಕಂಡು ಬಂತು.

ವಿಶೇಷವಾದ ಸುದ್ದಿಗಳಿಗಾಗಿ ನಮ್ಮ ಹೊಸದಾದ SUDDINOW APP ಡೌನ್ಲೋಡ್ ಮಾಡಿಕೊಳ್ಳಿ : https://play.google.com/store/apps/details?id=com.webapp.Suddinow

ಬರವಣಿಗೆ ಬಗ್ಗೆ ನಿಮಗೆ ಆಸಕ್ತಿ ಇದಿಯೇ, ನಾವು ನಿಮ್ಮನ್ನು ಪ್ರೋತಾಹಿಸಲು ನಿಮಗಾಗಿ CITIZEN JOURNALISM ಕಾಲಂಅನ್ನು ತೆರೆದಿದ್ದೇವೆ. ನಿಮ್ಮ ಬರಹಗಳಿಗೆ ಸ್ವಾಗತ : https://suddinow.com/upload-news-yourself/

About Author

Priya Rai

ನಮಸ್ಕಾರ, ಸುದ್ದಿನೌ ಪ್ರಾರಂಭವಾಗಿ ೪ ವರ್ಷಗಳು ಕಳೆದಿವೆ, ನಮ್ಮ ಜೊತೆಗಿರುವ ನಿಮ್ಮೆಲ್ಲರಿಗೂ ಧನ್ಯವಾದಗಳು ನಿಮ್ಮ ವಿಶ್ವಾಸಿ, ಪ್ರಿಯ ರಾಯ್

Leave A Reply