ಬೆಂಗಳೂರು-ಕಳೆದ ವರ್ಷ ಸಾರಿಗೆ ನೌಕರರು ನಡೆಸಿದ ಪ್ರತಿಭಟನೆಗೆ ಸರ್ಕಾರ ಹಾಗೂ ಸಾರ್ವಜನಿಕರು ಹೈರಾಣಾಗಿ ಹೋಗಿದ್ದರು. ಈಗ ಮತ್ತೆ ಸಾರಿಗೆ ನೌಕರರು ಪ್ರತಿಭಟನೆ ಮಾಡಲಿದ್ದಾರೆ ಎನ್ನುವ ಚರ್ಚೆ ಆರಂಭವಾಗಿದೆ. ಹೌದು ಕಳೆದ ವರ್ಷ ಸಾರಿಗೆ ನೌಕರರು ಸರ್ಕಾರದ ಮುಂದೆ 15 ಬೇಡಿಕೆಯನ್ನು ಇಟ್ಟು ಪ್ರತಿಭಟನೆ ಮಾಡಿದ್ರ, ಆದ್ರೆ ಸರ್ಕಾರ ಕೊನೆಯಲ್ಲಿ ತನ್ನ ಹಟವನ್ನು ಬಿಟ್ಟು ಸಾರಿಗೆ ನೌಕರರ ಬೇಡಿಕೆಯನ್ನು ಈಡೇರಿಸಲು ಮುಂದಾಗಿತ್ತು. ಅಲ್ಲದೇ ಮಾರ್ಚ್ 15 ವರೆಗೆ ಗಡುವು ನೀಡಲಾಗಿತ್ತು. ಆದರೆ ಸರ್ಕಾರ ಈವರೆಗೂ ಯಾವುದೇ ಬೇಡಿಕೆಯನ್ನು ಈಡೇರಿಸಲು ಮುಂದಾಗಿಲ್ಲಾ ಹೀಗಾಗಿ ಮತ್ತೆ ಪ್ರತಿಭಟನೆಯ ಎಚ್ಚರಿಕೆಯನ್ನು ಕೋಡಿಹಳ್ಳಿ ಚಂದ್ರಶೇಖರ್ ನೀಡಿದ್ದಾರೆ. ಆದ್ರೆ ಸಿ ಎಮ್ ಯಡಿಯೂರಪ್ಪ ಅವರು ಈಗಾಗಲೇ ಮೀಸಲಾತಿ ವಿಚಾರದಲ್ಲಿ ಇಕ್ಕಟ್ಟಿನಲ್ಲಿ ಸಿಲುಕಿದ್ದಾರೆ,  ಹೀಗಾಗಿ ಸರ್ಕಾರ ಸಾರಿಗೆ ನೌಕರರು ಸಮಸ್ಯೆಯನ್ನು ಹೇಗೆ ಬಗೆಹರಿಸುತ್ತೆ ಎನ್ನುವುದು ಎಲ್ಲರಿಗೂ ಕಾಡುವ ಪ್ರಶ್ನೆ …

 

ವಿಶೇಷವಾದ ಸುದ್ದಿಗಳಿಗಾಗಿ ನಮ್ಮ ಹೊಸದಾದ SUDDINOW APP ಡೌನ್ಲೋಡ್ ಮಾಡಿಕೊಳ್ಳಿ : https://play.google.com/store/apps/details?id=com.webapp.Suddinow

ಬರವಣಿಗೆ ಬಗ್ಗೆ ನಿಮಗೆ ಆಸಕ್ತಿ ಇದಿಯೇ, ನಾವು ನಿಮ್ಮನ್ನು ಪ್ರೋತಾಹಿಸಲು ನಿಮಗಾಗಿ CITIZEN JOURNALISM ಕಾಲಂಅನ್ನು ತೆರೆದಿದ್ದೇವೆ. ನಿಮ್ಮ ಬರಹಗಳಿಗೆ ಸ್ವಾಗತ : https://suddinow.com/upload-news-yourself/

About Author

Priya Rai

ನಮಸ್ಕಾರ, ಸುದ್ದಿನೌ ಪ್ರಾರಂಭವಾಗಿ ೪ ವರ್ಷಗಳು ಕಳೆದಿವೆ, ನಮ್ಮ ಜೊತೆಗಿರುವ ನಿಮ್ಮೆಲ್ಲರಿಗೂ ಧನ್ಯವಾದಗಳು ನಿಮ್ಮ ವಿಶ್ವಾಸಿ, ಪ್ರಿಯ ರಾಯ್

Leave A Reply