“ನಕಲು ಮುಕ್ತ ಪರೀಕ್ಷೆ ನಡೆಸಿ ಹಾಗೂ ಕೊವೀಡ್-19 ಸುರಕ್ಷಿತ ಕ್ರಮಗಳನ್ನು ಕೈಗೊಳ್ಳಿ”  – ಜಿಲ್ಲಾಧಿಕಾರಿ ಪಿ.ಸುನೀಲಕುಮಾರ್

0

ವಿಜಯಪುರ:

ಎಸ್.ಎಸ್.ಎಲ್.ಸಿ. ಮುಖ್ಯ ಪರೀಕ್ಷೆಗಳ ಸಂದರ್ಭದಲ್ಲಿ  ನಕಲು ಮುಕ್ತ ಪರೀಕ್ಷೆ ನಡೆಸಿ ಹಾಗೂ ಕೊವೀಡ್-19 ಸುರಕ್ಷಿತ ಕ್ರಮಗಳನ್ನು ಕೈಗೊಳ್ಳಲು ಜಿಲ್ಲಾಧಿಕಾರಿ ಪಿ.ಸುನೀಲಕುಮಾರ್ ಅವರು  ಸಂಬಂಧಿಸಿದ ಅಧಿಕಾರಿಗಳಿಗೆ  ಸೂಚಿಸಿದ್ದಾರೆ.

ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಾಹಣಾಧಿಕಾರಿಗಳ ಕಛೇರಿಯಲ್ಲಿ ವಿಡಿಯೋ ಸಂವಾದದ ಮೂಲಕ ಮಾತನಾಡಿದ ಅವರು ,ಇದೇ ಜುಲೈ 19 ರಿಂದ 22 ರವರೆಗೆ ಜಿಲ್ಲೆಯ ಒಟ್ಟು 188 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿರುವ ಎಸ್.ಎಸ್.ಎಲ್.ಸಿ. ಮುಖ್ಯ ಪರೀಕ್ಷೆಗಳ ಸಂದರ್ಭದಲ್ಲಿ  ನಕಲು ಮುಕ್ತ ಪರೀಕ್ಷೆ ನಡೆಸಲು ಎಲ್ಲಾ ಸಿದ್ಧತೆಗಳನ್ನು ಕೈಗೊಳ್ಳಲು ಎಲ್ಲ ತಾಲೂಕಿನ ತಹಶೀಲ್ದಾರರಿಗೆ,ಸಂಬಂಧಿಸಿದ  ಅಧಿಕಾರಿಗಳಿಗೆ ಸೂಚಿಸಿದರು.

ಯಾವುದೇ ವಿದ್ಯಾರ್ಥಿ/ವಿದ್ಯಾರ್ಥಿನಿಯರಿಗೆ   ಕೆಮ್ಮು, ಜ್ವರ, ನೆಗಡಿ, ಇತ್ಯಾದಿ ಲಕ್ಷಣಗಳು ಕಂಡು ಬಂದಲ್ಲಿ ಕೂಡಲೇ ಮುಖ್ಯ ಅಧೀಕ್ಷಕರ ಗಮನಕ್ಕೆ ತಂದು ಎನ್‌-95 ಮಾಸ್ಕ್ ನೀಡಿ ವಿಶೇಷ ಕೊಠಡಿಯಲ್ಲಿ ಪರೀಕ್ಷೆ ಬರೆಯಲು ಕ್ರಮ ವಹಿಸಬೇಕು ಎಂದು ಅವರು ತಿಳಿಸಿದರು. ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಶ್ರೀ.ಗೋವಿಂದ ರೆಡ್ಡಿ ಅವರು ಮಾತನಾಡಿ ಪರೀಕ್ಷಾ ಕಾರ್ಯದಲ್ಲಿ ತೊಡಗಿರುವ ಯಾವುದೇ ಅಧಿಕಾರಿ ಹಾಗೂ ಸಿಬ್ಬಂದಿಗಳು ಮತ್ತು ಇತರರು ಮೊಬೈಲ್ ಫೋನ್‌ನ್ನು ತರುವುದನ್ನು ಹಾಗೂ ಬಳಸುವುದನ್ನು ನಿಷೇಧಿಸಿದೆ. ಕೇವಲ ಪರೀಕ್ಷಾ ಕೇಂದ್ರದ ಮುಖ್ಯ ಅಧೀಕ್ಷಕರು ಬೇಸಿಕ್ ಮೊಬೈಲ್ ಸೆಟ್‌ನ್ನು ಮಾತ್ರ ಬಳಸಬಹುದಾಗಿದೆ ಎಂದು ಅವರು ಸೂಚಿಸಿದ್ದಾರೆ.

ಪರೀಕ್ಷಾ ಕೇಂದ್ರಗಳಲ್ಲಿ ಅಭ್ಯರ್ಥಿಗಳನ್ನು ಥರ್ಮಲ್ ಸ್ಕ್ಯಾನಿಂಗ್‌ಗೆ ಒಳಪಡಿಸುವುದು, ಕೈಗಳನ್ನು ಸ್ಕ್ಯಾನಿಟೈಸರ್‌ನಿಂದ ಶುದ್ದೀಕರಿಸುವುದು ಹಾಗೂ ಮಾಸ್ಕ ಧಾರಣೆ ಕಡ್ಡಾಯಗೊಳಿಸಿ ಪ್ರವೇಶ ನೀಡುವುದು ಹಾಗೂ ಈ ಪರೀಕ್ಷಾ ಕೇಂದ್ರಗಳ 200 ಮೀಟರ್ ವ್ಯಾಪ್ತಿಯಲ್ಲಿನ ಝರಾಕ್ಸ್ ಅಂಗಡಿಗಳು, ಕಂಪ್ಯೂಟರ ಸೆಂಟರಗಳು, ಸೈಬರ್ ಕೆಫೆಗಳು, ಕೋಚಿಂಗ್ ಕೇಂದ್ರಗಳು ಪರೀಕ್ಷೆ ಮುಕ್ತಾಯವಾಗುವ ಅವಧಿಯವರೆಗೆ ತೆರೆಯದಂತೆ ಅವರು ತಿಳಿಸಿದರು. ಅಪರ ಜಿಲ್ಲಾಧಿಕಾರಿ ರಮೇಶ್ ಕಳಸದ ಅವರು ಮಾತನಾಡಿ ಪರೀಕ್ಷೆಯಲ್ಲಿ ನಕಲು ಮಾಡುವುದು, ಪರೀಕ್ಷಾರ್ಥಿಗಳ ಬದಲು ಬೇರೆಯವರು ಪರೀಕ್ಷೆಗೆ ಹಾಜರಾಗುವುದು ಮುಂತಾದ ಪರೀಕ್ಷಾ ಅವ್ಯವಹಾರಗಳನ್ನು ತಡೆಗಟ್ಟಲು ಹಾಗೂ ಪರೀಕ್ಷಾ ಕೇಂದ್ರಗಳಲ್ಲಿ ಶಿಸ್ತು ಮತ್ತು ಶಾಂತಿ ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ಪ್ರತಿ ಪರೀಕ್ಷಾ ಕೇಂದ್ರಕ್ಕೆ ಸೂಕ್ತ ಪೊಲೀಸ್ ಸಿಬ್ಬಂದಿಗಳನ್ನು ನೇಮಿಸಲು ಕ್ರಮವಹಿಸಬೇಕು ಎಂದು ಅವರು ಹೇಳಿದರು.

ಈ ಸಂದರ್ಭದಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರು(ಆಡಳಿತ), ಎನ್.ವ್ಹಿ.ಹೊಸೂರ, ಸಾರ್ವಜನಿಕ ಶಿಕ್ಷಣ ಇಲಾಖೆ ಶಿಕ್ಷಣಾಧಿಕಾರಿ ಮತ್ತು ಎಸ್.ಎಸ್.ಎಲ್.ಸಿ. ಜಿಲ್ಲಾ ನೋಡಲ್ ಅಧಿಕಾರಿ, ಮಂಜುನಾಥ ಗುಳ್ಳೇದಗುಡ್,ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕರು, ರಾಮನಗೌಡ ಕನ್ನೋಳ್ಳಿ, ಎನ್.ವ್ಹಿ.ದೊಡಮನಿ, ಎಸ್.ಪಿ.ಬಾಡಂಗಡಿ, ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.

ವಿಶೇಷವಾದ ಸುದ್ದಿಗಳಿಗಾಗಿ ನಮ್ಮ ಹೊಸದಾದ SUDDINOW APP ಡೌನ್ಲೋಡ್ ಮಾಡಿಕೊಳ್ಳಿ : https://play.google.com/store/apps/details?id=com.webapp.Suddinow

ಬರವಣಿಗೆ ಬಗ್ಗೆ ನಿಮಗೆ ಆಸಕ್ತಿ ಇದಿಯೇ, ನಾವು ನಿಮ್ಮನ್ನು ಪ್ರೋತಾಹಿಸಲು ನಿಮಗಾಗಿ CITIZEN JOURNALISM ಕಾಲಂಅನ್ನು ತೆರೆದಿದ್ದೇವೆ. ನಿಮ್ಮ ಬರಹಗಳಿಗೆ ಸ್ವಾಗತ : https://suddinow.com/upload-news-yourself/

About Author

Priya Rai

ನಮಸ್ಕಾರ, ಸುದ್ದಿನೌ ಪ್ರಾರಂಭವಾಗಿ ೪ ವರ್ಷಗಳು ಕಳೆದಿವೆ, ನಮ್ಮ ಜೊತೆಗಿರುವ ನಿಮ್ಮೆಲ್ಲರಿಗೂ ಧನ್ಯವಾದಗಳು ನಿಮ್ಮ ವಿಶ್ವಾಸಿ, ಪ್ರಿಯ ರಾಯ್

Leave A Reply