ಜು.16ಕ್ಕೆ ಕಾರವಾರಕ್ಕೆ ಮುಖ್ಯಮಂತ್ರಿ ಯಡ್ಯೂರಪ್ಪ ಭೇಟಿ; ವಿವಿಧ ಕಾಮಗಾರಿಗೆ ಶಂಕು ಸ್ಥಾಪನೆ

0

ಕಾರವಾರ –  ಸಿಎಂ ಬಿಎಸ್ ಯಡಿಯೂರಪ್ಪ ಜುಲೈ 16ರಂದು ಕಾರವಾರ- ಅಂಕೋಲಾ ಕ್ಷೇತ್ರಕ್ಕೆ ಆಗಮಿಸುತ್ತಿದ್ದು ವಿವಿಧ ಕಾಮಗಾರಿಗಳಿಗೆ ಶಂಕು ಸ್ಥಾಪನೆ ನೆರವೇರಿಸಲಿದ್ದಾರೆ. ಈ ಕುರಿತು ಮುಖ್ಯಮಂತ್ರಿಗಳ ವಿಶೇಷ ಕರ್ತವ್ಯಾಧಿಕಾರಿ ಬಿ.ಪಿ.ಚನ್ನಕೇಶವ ಜಿಲ್ಲಾಧಿಕಾರಿಗೆ ಕಾರ್ಯಕ್ರಮದ ರೂಪುರೇಷೆ ಸಿದ್ಧಪಡಿಸುವಂತೆ ಸೂಚಿಸಿದ್ದಾರೆ.

ಈ ಹಿಂದೆ ಮಾರ್ಚ್ ನಲ್ಲಿ ಅಂಕೋಲಾ-ಕಾರವಾರ ಶಾಸಕಿ ರೂಪಾಲಿ ನಾಯ್ಕ ಸಿಎಂ ಅವರಿಗೆ ಕ್ಷೇತ್ರಕ್ಕೆ ಆಗಮಿಸಿ ವಿವಿಧ ಕಾಮಗಾರಿಗಳಿಗೆ ಶಂಕುಸ್ಥಾಪನೆ ಮಾಡುವಂತೆ ಮನವಿ ಮಾಡಿದ್ದರು. ಆದರೆ ಕೊರೋನಾ ಸಂಕಷ್ಟ ಎದುರಾದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳ ಕಾರ್ಯಕ್ರಮ ಮುಂದಕ್ಕೆ ಹೋಗಿತ್ತು. ಈಗ ಸಿಎಂ ಪ್ರವಾಸ ನಿಗದಿಯಾಗಿದ್ದು ಸಿಎಂ ಬಿಎಸ್ವೈ ಕಾರವಾರಕ್ಕೆ ಆಗಮಿಸಲಿದ್ದಾರೆ‌.

ವಿಶೇಷವಾದ ಸುದ್ದಿಗಳಿಗಾಗಿ ನಮ್ಮ ಹೊಸದಾದ SUDDINOW APP ಡೌನ್ಲೋಡ್ ಮಾಡಿಕೊಳ್ಳಿ : https://play.google.com/store/apps/details?id=com.webapp.Suddinow

ಬರವಣಿಗೆ ಬಗ್ಗೆ ನಿಮಗೆ ಆಸಕ್ತಿ ಇದಿಯೇ, ನಾವು ನಿಮ್ಮನ್ನು ಪ್ರೋತಾಹಿಸಲು ನಿಮಗಾಗಿ CITIZEN JOURNALISM ಕಾಲಂಅನ್ನು ತೆರೆದಿದ್ದೇವೆ. ನಿಮ್ಮ ಬರಹಗಳಿಗೆ ಸ್ವಾಗತ : https://suddinow.com/upload-news-yourself/

About Author

Priya Rai

ನಮಸ್ಕಾರ, ಸುದ್ದಿನೌ ಪ್ರಾರಂಭವಾಗಿ ೪ ವರ್ಷಗಳು ಕಳೆದಿವೆ, ನಮ್ಮ ಜೊತೆಗಿರುವ ನಿಮ್ಮೆಲ್ಲರಿಗೂ ಧನ್ಯವಾದಗಳು ನಿಮ್ಮ ವಿಶ್ವಾಸಿ, ಪ್ರಿಯ ರಾಯ್

Leave A Reply