ಸಿ ಎಮ್ ರಾಜೀನಾಮೆ ಪಕ್ಕಾ: ಯಾರು ಪ್ರತಿಭಟನೆ ಮಾಡಬೇಡಿ ಎಂದ ಸಿ ಎಮ್.

0

ಬೆಂಗಳೂರು

ಸಿ ಎಮ್ ರಾಜೀನಾಮೆ ವಿಚಾರ ಕೊನೆಯ ಹಂತ ತಲುಪಿದೆ‌. ಇದೇ 26 ರಂದು ಸಿ ಎಮ್ ರಾಜೀನಾಮೆ ನೀಡುವುದು ಬಹುತೇಕ ಪಕ್ಕಾ ಆಗಿದೆ. ಈ ಹಿನ್ನೆಲೆಯಲ್ಲಿ  ಬಿಜೆಪಿ ಹೈ ಕಮಾಂಡ್ ಬಿ ಎಸ್ ವೈ ಅವರ ಮೇಲೆ ಒತ್ತಡ ಹೆಚ್ಚಾಗಿದೆ‌.  ಹೀಗಾಗಿ ಇಂದು ಅಥವಾ ನಾಳೆ ಕೇಂದ್ರದಿಂದ ವೀಕ್ಷಕರು ಬರುವ ನಿರೀಕ್ಷೆ ಇದೆ.  ಈ ಮಧ್ಯ ಸಿ ಎಮ್ ಯಡಿಯೂರಪ್ಪ ಅವರು ಒಂದು ಟ್ವೀಟ್ ರಾಜ್ಯದಲ್ಲಿ ಸಂಚಲನ ಮೂಡಿಸಿದೆ. ಕಾರಣ ರಾಜಕೀಯ ಬೆಳವಣಿಗೆ ಕಂಡು ಯಾರು ಪ್ರತಿಭಟನೆ ಮಾಡಬಾರದು ಎಂದು ಮನವಿ ಮಾಡಿದ್ದಾರೆ. ಹೀಗಾಗಿ ರಾಜೀನಾಮೆ ನೀಡುವುದು ಬಹುತೇಕ ಖಚಿತವಾಗಿದೆ.

ರಾಜಕೀಯ ಬೆಳವಣಿಗೆಗಳನ್ನಾಧರಿಸಿ ನನ್ನ ಪರವಾಗಿ ಹೇಳಿಕೆ, ಪ್ರತಿಭಟನೆಗಳಿಗೆ ಯಾರೂ ಮುಂದಾಗಬಾರದೆಂದು ವಿನಂತಿಸುತ್ತೇನೆ. ಅಭಿಮಾನ ಶಿಸ್ತಿನ ವ್ಯಾಪ್ತಿ ಮೀರಬಾರದು. ಪಕ್ಷ ನನಗೆ ಮಾತೃ ಸಮಾನ,ಅದರ ಗೌರವಕ್ಕೆ ಚ್ಯುತಿ ತರುವ ಘಟನೆಗಳು ನನಗೆ ಅತೀವ ನೋವು ತರುತ್ತದೆ. ನಿಜವಾದ ಹಿತೈಷಿಗಳು ಈ ನಿಟ್ಟಿನಲ್ಲಿ ನನ್ನ ಭಾವನೆಗೆ ಸ್ಪಂದಿಸುತ್ತಾರೆಂದು ನಂಬಿರುವೆ ಎಂದು  ಮನವಿ ಮಾಡಿದ್ದಾರೆ. ಹೀಗಾಗಿ ಬಹುತೇಕ ಸಿ ಎಮ್ ಅವರ ನಡೆಯನ್ನು ಕಂಡರೆ ರಾಜೀನಾಮೆ ನೀಡುವುದು ಬಹುತೇಕ ಖಚಿತವಾಗಿದೆ‌.

ವಿಶೇಷವಾದ ಸುದ್ದಿಗಳಿಗಾಗಿ ನಮ್ಮ ಹೊಸದಾದ SUDDINOW APP ಡೌನ್ಲೋಡ್ ಮಾಡಿಕೊಳ್ಳಿ : https://play.google.com/store/apps/details?id=com.webapp.Suddinow

ಬರವಣಿಗೆ ಬಗ್ಗೆ ನಿಮಗೆ ಆಸಕ್ತಿ ಇದಿಯೇ, ನಾವು ನಿಮ್ಮನ್ನು ಪ್ರೋತಾಹಿಸಲು ನಿಮಗಾಗಿ CITIZEN JOURNALISM ಕಾಲಂಅನ್ನು ತೆರೆದಿದ್ದೇವೆ. ನಿಮ್ಮ ಬರಹಗಳಿಗೆ ಸ್ವಾಗತ : https://suddinow.com/upload-news-yourself/

About Author

Priya Rai

ನಮಸ್ಕಾರ, ಸುದ್ದಿನೌ ಪ್ರಾರಂಭವಾಗಿ ೪ ವರ್ಷಗಳು ಕಳೆದಿವೆ, ನಮ್ಮ ಜೊತೆಗಿರುವ ನಿಮ್ಮೆಲ್ಲರಿಗೂ ಧನ್ಯವಾದಗಳು ನಿಮ್ಮ ವಿಶ್ವಾಸಿ, ಪ್ರಿಯ ರಾಯ್

Leave A Reply